AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೆಲ್ಲಾ ಬೇಕಿರಲಿಲ್ಲ… ಯಶಸ್ವಿ ಜೈಸ್ವಾಲ್​ಗೆ ಮಾಜಿ ಆಟಗಾರರ ಕ್ಲಾಸ್!

ಕ್ರಿಕೆಟ್ ಮೈದಾನದಲ್ಲಿ ಆಟಗಾರರ ನಡುವೆ ಮಾತಿನ ಚಕಮಕಿ ಸಾಮಾನ್ಯ. ಆದರೆ ಕೊಲೊಂಬೊ ಟೆಸ್ಟ್‌ನ ಮೊದಲ ದಿನ ಯಶಸ್ವಿ ಜೈಸ್ವಾಲ್ ಮತ್ತು ಅಸಿತ ಫೆರ್ನಾಂಡೋ ನಡುವೆ ನಡೆದ ದೈಹಿಕ ಸಂಘರ್ಷ ಕ್ರೀಡಾ ಸ್ಫೂರ್ತಿಯ ಗೆರೆ ದಾಟಿದೆ. ಈ ಅತಿರೇಕದ ವರ್ತನೆಯ ವಿರುದ್ಧ ಇದೀಗ ಮಾಜಿ ಆಟಗಾರರಾದ ಚೇತೇಶ್ವರ್ ಪೂಜಾರ ಮತ್ತು ಸಬಾ ಕರೀಮ್ ಧ್ವನಿ ಎತ್ತಿದ್ದು, ಯುವ ಆಟಗಾರನಿಗೆ ಶಿಸ್ತಿನ ಪಾಠ ಮಾಡಿದ್ದಾರೆ.

ಇದೆಲ್ಲಾ ಬೇಕಿರಲಿಲ್ಲ... ಯಶಸ್ವಿ ಜೈಸ್ವಾಲ್​ಗೆ ಮಾಜಿ ಆಟಗಾರರ ಕ್ಲಾಸ್!
Yashasvi Jaiswal Image Credit source: AP
ಝಾಹಿರ್ ಯೂಸುಫ್
|

Updated on: Aug 26, 2026 | 9:13 AM

Share

ಕೊಲೊಂಬೊದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಯಶಸ್ವಿ ಜೈಸ್ವಾಲ್ ಹಾಗೂ ಅಸಿತ ಫೆರ್ನಾಂಡೋ ನಡುವೆ ನಡೆದ ಜಗಳ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಈ ಘಟನೆಯ ಕುರಿತು ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಚೇತೇಶ್ವರ್ ಪೂಜಾರ ಮತ್ತು ಸಬಾ ಕರೀಮ್ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಮೈದಾನದಲ್ಲಿ ನಡೆದಿದ್ದೇನು?

ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ 45 ರನ್ ಗಳಿಸಿ ಆಡುತ್ತಿದ್ದ ಯಶಸ್ವಿ ಜೈಸ್ವಾಲ್ ಅವರನ್ನು ಅಸಿತ ಫೆರ್ನಾಂಡೋ ಔಟ್ ಮಾಡಿದರು. ವಿಕೆಟ್ ಪಡೆದ ಸಂಭ್ರಮದಲ್ಲಿದ್ದ ಫೆರ್ನಾಂಡೋ, ಜೈಸ್ವಾಲ್ ವಿರುದ್ಧ ಅತಿರೇಕದ ವರ್ತನೆ ತೋರಿ ‘ಸೆಂಡ್-ಆಫ್’ ನೀಡಿದರು.

ಇದರಿಂದ ಕೆರಳಿದ ಜೈಸ್ವಾಲ್, ಕ್ರೀಸ್ ಬಿಟ್ಟು ಹೊರಡುವ ಮುನ್ನ ಬೌಲರ್ ಕಡೆಗೆ ತಿರುಗಿ ಮುನ್ನುಗ್ಗಿದರು. ಇಬ್ಬರೂ ಆಟಗಾರರು ಮುಖಾಮುಖಿಯಾಗಿ ವಾಗ್ವಾದ ನಡೆಸಿದರಲ್ಲದೆ, ಒಬ್ಬರಿಗೊಬ್ಬರು ತಲೆ ಮುಟ್ಟಿಸುವ ಮೂಲಕ (ಹೆಡ್‌ಬಟ್) ದೈಹಿಕ ಸಂಘರ್ಷಕ್ಕೆ ಇಳಿದರು. ತಕ್ಷಣವೇ ಅಂಪೈರ್‌ಗಳು ಮತ್ತು ಸಹ ಆಟಗಾರರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕಾಯಿತು.

“ಇದು ಒಪ್ಪಿಕೊಳ್ಳಲು ಸಾಧ್ಯವಿಲ್ಲ”

ಈ ವರ್ತನೆ ಬಗ್ಗೆ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಮಾತನಾಡಿದ ಚೇತಶ್ವರ ಪೂಜಾರ, “ಔಟ್ ಆದಾಗ ಬ್ಯಾಟರ್‌ಗೆ ಕೋಪ ಅಥವಾ ನಿರಾಸೆ ಬರುವುದು ಸಹಜ. ಆದರೆ ಮೈದಾನದಲ್ಲಿ ಮತ್ತೊಬ್ಬ ಆಟಗಾರನ ದೇಹಕ್ಕೆ ಮುಟ್ಟುವುದು ಅಥವಾ ದೈಹಿಕವಾಗಿ ಸಂಘರ್ಷಕ್ಕೆ ಇಳಿಯುವುದು ಸಂಪೂರ್ಣವಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲದ್ದು. ಆಟಗಾರರು ತಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು” ಎಂದು ಜೈಸ್ವಾಲ್‌ಗೆ ಕಿವಿಮಾತು ಹೇಳಿದ್ದಾರೆ.

ಮಾಜಿ ಕ್ರಿಕೆಟಿಗ ಸಬಾ ಕರೀಮ್ ಕೂಡ ಈ ಘಟನೆಯನ್ನು “ಬಾಲಿಶ ಮತ್ತು ಅನಗತ್ಯ” ಎಂದು ಕರೆದಿದ್ದು, ಕ್ರಿಕೆಟ್ ಒಂದು ಸಂಪರ್ಕ ರಹಿತ ಕ್ರೀಡೆಯಾಗಿದ್ದು, ಇಂತಹ ವರ್ತನೆಗಳಿಗೆ ಇಲ್ಲಿ ಜಾಗವಿಲ್ಲ ಎಂದಿದ್ದಾರೆ.

ದಂಡ ವಿಧಿಸಿದ ಐಸಿಸಿ!

ಮೈದಾನದಲ್ಲಿ ಅಶಿಸ್ತು ತೋರಿದ ಕಾರಣಕ್ಕಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಇಬ್ಬರೂ ಆಟಗಾರರಿಗೆ ಶಿಕ್ಷೆ ವಿಧಿಸಿದೆ. ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.12 ಅನ್ನು ಉಲ್ಲಂಘಿಸಿದ್ದಕ್ಕಾಗಿ ಜೈಸ್ವಾಲ್ ಮತ್ತು ಫೆರ್ನಾಂಡೋ ಇಬ್ಬರಿಗೂ ಪಂದ್ಯದ ಸಂಭಾವನೆಯಲ್ಲಿ ಶೇಕಡಾ 25 ರಷ್ಟು ದಂಡ ಹಾಗೂ ತಲಾ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

ಇದನ್ನೂ ಓದಿ: ಭಯ ಪಡಬೇಡ, ನೀನು ಆಡು ಬ್ರೋ: ಸರ್ಫರಾಝ್ ಮಾತು ಕೇಳಿ ಔಟಾದ ಲಂಕಾ ನಾಯಕ!

ಮತ್ತೊಂದೆಡೆ, ತಮ್ಮ ಮೇಲಿನ ಟೀಕೆಗಳಿಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರತಿಕ್ರಿಯಿಸಿರುವ ಯಶಸ್ವಿ ಜೈಸ್ವಾಲ್, “ಅವರು ನನಗೆ ಏನು ಹೇಳಿದರು ಎಂಬುದು ತಿಳಿಯದೆ ದಯವಿಟ್ಟು ಯಾರೂ ತೀರ್ಪು ನೀಡಬೇಡಿ. ಯಾರಾದರೂ ಗೆರೆ ದಾಟಿದರೆ,  ನಾವು ತಿರುಗೇಟು ನೀಡುತ್ತೇವೆ ಎಂಬುದನ್ನು ನಾವು ಅವರಿಗೆ ತಿಳಿಸಬೇಕಾಗುತ್ತದೆ” ಎಂದ ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ