ಕ್ರಿಕೆಟ್​ಗೆ ವಿದಾಯ ಹೇಳಿದ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಟೀಮ್ ಇಂಡಿಯಾ ಆಟಗಾರ..!

Team India: ಐಪಿಎಲ್​ನಲ್ಲಿ 2010 ರಲ್ಲಿ ಡೆಕ್ಕನ್ ಚಾರ್ಜರ್ಸ್ (ಈಗಿನ ಸನ್‌ರೈಸರ್ಸ್ ಹೈದರಾಬಾದ್) ಪರ ಪದಾರ್ಪಣೆ ಮಾಡಿದ್ದ ರಾಹುಲ್ ಶರ್ಮಾ ಆ ಬಳಿಕ ಪುಣೆ ವಾರಿಯರ್ಸ್ ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ತಂಡಗಳ ಪರ ಕಣಕ್ಕಿಳಿದಿದ್ದರು.

ಕ್ರಿಕೆಟ್​ಗೆ ವಿದಾಯ ಹೇಳಿದ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಟೀಮ್ ಇಂಡಿಯಾ ಆಟಗಾರ..!
Rahul Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 29, 2022 | 9:25 PM

ಟೀಮ್ ಇಂಡಿಯಾ ಸ್ಪಿನ್ನರ್ ರಾಹುಲ್ ಶರ್ಮಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ನಿವೃತ್ತಿಯನ್ನು ಘೋಷಿಸಿರುವ ರಾಹುಲ್ ಶರ್ಮಾ, ಈ ಅದ್ಭುತ ಪಯಣದಲ್ಲಿ ನನ್ನನ್ನು ಬೆಂಬಲಿಸಿದ ಅಭಿಮಾನಿಗಳು ಮತ್ತು ಬಿಸಿಸಿಐಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಒಂದು ಕಾಲದಲ್ಲಿ ಐಪಿಎಲ್​ನಲ್ಲಿ ಮಿಂಚುವ ಮೂಲಕ ರಾಹುಲ್ ಶರ್ಮಾ ಟೀಮ್ ಇಂಡಿಯಾ ಆಯ್ಕೆ ಸಮಿತಿಯ ಗಮನ ಸೆಳೆದಿದ್ದರು.

2011 ರಲ್ಲಿ ಟೀಮ್ ಇಂಡಿಯಾ ಪರ ಪದಾರ್ಪಣೆಯನ್ನು ಕೂಡ ಮಾಡಿದ್ದರು. ಆದರೆ ಆ ಬಳಿಕ ಯುವ ಆಟಗಾರ ಬೆಲ್ ಪಾಲ್ಸಿ (ಮುಖದ ಪಾರ್ಶ್ವವಾಯು) ಸಮಸ್ಯೆಗೀಡಾಗಿದ್ದರು. ಹೀಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಪಾರ್ಶ್ವವಾಯು ಸಮಸ್ಯೆಯ ಕಾರಣ ಐಪಿಎಲ್​ನಿಂದ ಕೂಡ ಹೊರಗುಳಿಯಬೇಕಾಯಿತು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾಗ್ಯೂ ಟೀಮ್ ಇಂಡಿಯಾ ಪರ ಆಡುವ ಕನಸನ್ನು ಈಡೇರಿಸಿಕೊಂಡಿದ್ದ ರಾಹುಲ್ ಶರ್ಮಾ, ಭಾರತದ ಪರ 4 ಏಕದಿನ ಮತ್ತು 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಅಲ್ಲದೆ ಟೀಮ್ ಇಂಡಿಯಾ ಪರ ಒಟ್ಟು 9 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಇನ್ನು ರಾಹುಲ್ ಶರ್ಮಾಗೆ ಗೌತಮ್ ಗಂಭೀರ್, ರಾಹುಲ್ ದ್ರಾವಿಡ್, ವೀರೇಂದ್ರ ಸೆಹ್ವಾಗ್ ಮತ್ತು ಎಂಎಸ್ ಧೋನಿಯಂತಹ ದಿಗ್ಗಜ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಳ್ಳುವ ಅವಕಾಶ ಕೂಡ ಲಭಿಸಿತ್ತು ಎಂಬುದು ವಿಶೇಷ.

ಐಪಿಎಲ್​ನಲ್ಲಿ 2010 ರಲ್ಲಿ ಡೆಕ್ಕನ್ ಚಾರ್ಜರ್ಸ್ (ಈಗಿನ ಸನ್‌ರೈಸರ್ಸ್ ಹೈದರಾಬಾದ್) ಪರ ಪದಾರ್ಪಣೆ ಮಾಡಿದ್ದ ರಾಹುಲ್ ಶರ್ಮಾ ಆ ಬಳಿಕ ಪುಣೆ ವಾರಿಯರ್ಸ್ ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ತಂಡಗಳ ಪರ ಕಣಕ್ಕಿಳಿದಿದ್ದರು. ಈ ವೇಳೆ ಒಟ್ಟು 44 ಐಪಿಎಲ್ ಪಂದ್ಯವಾಡಿದ್ದ ರಾಹುಲ್ ಶರ್ಮಾ 40 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದರು.

ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ
ನಾವು ಅಧಿಕೃತವಾಗಿ ಸಭೆ ನಡೆಬೇಕೆಂದುಕೊಂಡಿದ್ದೆವು, ಮುಚ್ಚುಮರೆ ಇಲ್ಲ: ಖರ್ಗೆ
ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ
ಪೊಲೀಸರು ಬಂಧಿಸಿರುವ ದುಷ್ಟವ್ಯಕ್ತಿ ಮಾನಸಿಕ ಅಸ್ವಸ್ಥನಲ್ಲ: ಕರ್ಣ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ