‘ಕ್ರಿಕೆಟಿಗನಾಗಿದ್ದಕ್ಕೆ ಹೆಚ್ಚು ಪಶ್ಚಾತ್ತಾಪ ಪಡುತ್ತೇನೆ’; ಶಾಕಿಂಗ್ ಹೇಳಿಕೆ ನೀಡಿದ ಗೌತಮ್ ಗಂಭೀರ್..!

Gautam Gambhir: ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್​ನಲ್ಲಿ ಭಾರತ ಹಾಗೂ ನೇಪಾಳ ಪಂದ್ಯದ ನಡುವೆ ಕೊಹ್ಲಿ- ಕೊಹ್ಲಿ ಎಂದು ಕೂಗಿದ ಅಭಿಮಾನಿಗಳ ಕಡೆಗೆ ಮಧ್ಯದ ಬೆರಳು ತೋರಿಸಿ ಸಾಕಷ್ಟು ಚರ್ಚೆಗೆ ಒಳಗಾಗಿದ್ದ ಭಾರತದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್, ಇದೀಗ ತಮ್ಮ ಸ್ಫೋಟಕ ಹೇಳಿಕೆ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

‘ಕ್ರಿಕೆಟಿಗನಾಗಿದ್ದಕ್ಕೆ ಹೆಚ್ಚು ಪಶ್ಚಾತ್ತಾಪ ಪಡುತ್ತೇನೆ’; ಶಾಕಿಂಗ್ ಹೇಳಿಕೆ ನೀಡಿದ ಗೌತಮ್ ಗಂಭೀರ್..!
ಗೌತಮ್ ಗಂಭೀರ್
Follow us
ಪೃಥ್ವಿಶಂಕರ
|

Updated on: Sep 07, 2023 | 12:11 PM

ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್​ನಲ್ಲಿ (Asia Cup 2023) ಭಾರತ ಹಾಗೂ ನೇಪಾಳ ಪಂದ್ಯದ ನಡುವೆ ಕೊಹ್ಲಿ- ಕೊಹ್ಲಿ ಎಂದು ಕೂಗಿದ ಅಭಿಮಾನಿಗಳ ಕಡೆಗೆ ಮಧ್ಯದ ಬೆರಳು ತೋರಿಸಿ ಸಾಕಷ್ಟು ಚರ್ಚೆಗೆ ಒಳಗಾಗಿದ್ದ ಭಾರತದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ (Gautam Gambhir), ಇದೀಗ ತಮ್ಮ ಸ್ಫೋಟಕ ಹೇಳಿಕೆ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ನೀವು ಜೀವನದಲ್ಲಿ ಯಾವ ವಿಚಾರಕ್ಕೆ ಸಂಬಂದಪಟ್ಟಂತೆ ಹೆಚ್ಚು ವಿಷಾದ ಹೊಂದಿದ್ದೀರಾ? ಎಂದು ಸಂದರ್ಶನವೊಂದರಲ್ಲಿ ಕೇಳಿದ ಪ್ರಶ್ನೆಗೆ ಗಂಭೀರ್ ನೀಡಿದ ಉತ್ತರ ಇದೀಗ ಎಲ್ಲರನ್ನೂ ಅಚ್ಚರಿಗೊಳಿಸಿದೆ. 41 ವರ್ಷದ ಗೌತಮ್ ಗಂಭೀರ್ ತಮ್ಮ 13 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಟೀಂ ಇಂಡಿಯಾ (Team India) ಪರ ಮೂರು ಸ್ವರೂಪಗಳಲ್ಲಿಯೂ ಕಣಕ್ಕಿಳಿದವರು. ಪ್ರಮುಖ ಐಸಿಸಿ ಈವೆಂಟ್​ಗಳಲ್ಲಿ ತಂಡದ ಪರ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿಗೆ ತಮ್ಮದೇ ಕೊಡುಗೆ ನೀಡುವುದರಲ್ಲಿ ಗಂಭೀರ್ ನಿಸ್ಸೀಮರಾಗಿದ್ದರು.

ಐಸಿಸಿ ಈವೆಂಟ್​ನಲ್ಲಿ ಅದ್ಭುತ ಪ್ರದರ್ಶನ

ಅದಕ್ಕೆ ಉದಾಹರಣೆಯಾಗಿ 2007ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಪರ ಗರಿಷ್ಠ ಸ್ಕೋರರ್ ಆಗಿದ್ದ ಗಂಭೀರ್, ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 75 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದ್ದರು. ಅಲ್ಲದೆ 2011ರ ಏಕದಿನ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 97 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಗಂಭೀರ್, ಭಾರತ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು 2010 ರಲ್ಲಿ ಟೀಂ ಇಂಡಿಯಾವನ್ನು 6 ಪಂದ್ಯಗಳಲ್ಲಿ ಮುನ್ನಡೆಸಿದ್ದ ಗಂಭೀರ್, ಆ 6 ಪಂದ್ಯಗಳಲ್ಲೂ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಇದಲ್ಲದೆ ಐಫಿಎಲ್​ನಲ್ಲಿಯೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ತಮ್ಮ ನಾಯಕತ್ವದಲ್ಲಿ ಎರಡೂ ಬಾರಿ ಚಾಂಪಿಯನ್ ಮಾಡಿದ್ದರು.

‘ಹಿಂದೂಸ್ತಾನ್ ಮುರ್ದಾಬಾದ್ ಎಂದವರಿಗೆ ಬೆರಳು ತೋರಿಸಿದೆ’; ಸ್ಪಷ್ಟನೆ ನೀಡಿದ ಗೌತಮ್ ಗಂಭೀರ್

ಕ್ರಿಕೆಟಿಗನಾಗಿದ್ದಕ್ಕೆ ಹೆಚ್ಚು ಪಶ್ಚಾತ್ತಾಪ ಪಡುತ್ತೇನೆ

ಕ್ರಿಕೆಟ್ ಲೋಕದಲ್ಲಿ ಇಷ್ಟೆಲ್ಲ ಸಾಧನೆಯ ನಡುವೆಯೂ ಗಂಭೀರ್ ತಾನು ಕ್ರಿಕೆಟಿಗನಾಗಿದ್ದಕ್ಕೆ ಹೆಚ್ಚು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳುವ ಮೂಲಕ ಎಲ್ಲರನ್ನೂ ಅಚ್ಚರಿ ಮೂಡಿಸಿದ್ದಾರೆ. ವಾಸ್ತವವಾಗಿ ಇತ್ತೀಚಿಗೆ ಸಂದರ್ಶನವೊಂದರಲ್ಲಿ ನಿಮ್ಮ ಜೀವನದಲ್ಲಿ ದೊಡ್ಡ ವಿಷಾದ ಯಾವುದು ಎಂಬ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ನಾನು ಕ್ರಿಕೆಟಿಗನಾಗಿದ್ದಕ್ಕೆ ಹೆಚ್ಚು ಪಶ್ಚಾತ್ತಾಪ ಪಡುತ್ತೇನೆ ಎಂದಿದ್ದಾರೆ. ಗಂಭೀರ್ ಅವರ ಈ ಹೇಳಿಕೆ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಗಂಭೀರ್ ವೃತ್ತಿಜೀವನ

ಇನ್ನು ಗಂಭೀರ್ ಅವರ ವೃತ್ತಿಜೀವನದ ಬಗ್ಗೆ ಮಾತನಾಡುವುದಾದರೆ, 2003 ರ ಏಪ್ರಿಲ್ 11 ರಂದು ಬಾಂಗ್ಲಾದೇಶದ ವಿರುದ್ಧ ತಮ್ಮ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಗಂಭೀರ್​, ತಮ್ಮ ಮೊದಲ ಪಂದ್ಯದಲ್ಲಿ 22 ಎಸೆತಗಳಲ್ಲಿ 11 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಇನ್ನು ಟೀಂ ಇಂಡಿಯಾ ಒರ ಒಟ್ಟು 58 ಟೆಸ್ಟ್, 147 ಏಕದಿನ ಮತ್ತು 37 ಟಿ20 ಪಂದ್ಯಗಳನ್ನು ಗಂಭಿರ್ ಆಡಿದ್ದು, ಅದರಲ್ಲಿ ಕ್ರಮವಾಗಿ 4154, 5238 ಮತ್ತು 932 ರನ್ ಬಾರಿಸಿದ್ದಾರೆ.

ಇನ್ನು ಡಿಸೆಂಬರ್ 3, 2018 ರಂದು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಗಂಭೀರ್, ನವೆಂಬರ್ 2016 ರಲ್ಲಿ ತಮ್ಮ ಕೊನೆಯ ಟೆಸ್ಟ್ ಆಡಿದ್ದರು. ಗಂಭೀರ್ ಕೊನೆಯ ಬಾರಿಗೆ ಜನವರಿ 2013 ಮತ್ತು ಡಿಸೆಂಬರ್ 2012 ರಲ್ಲಿ ಭಾರತದ ಪರ ಏಕದಿನ ಮತ್ತು ಟಿ20 ಪಂದ್ಯಗಳನ್ನು ಆಡಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ