ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾದ ಮುಖ್ಯ ಕೋಚ್; ಬೌಲಿಂಗ್, ಫೀಲ್ಡಿಂಗ್ ಕೋಚ್ ಯಾರು ಗೊತ್ತಾ?

|

Updated on: Aug 27, 2023 | 12:18 PM

Asian Games 2023: ವಿಶ್ವಕಪ್ ದೃಷ್ಟಿಯಿಂದ ಆಟಗಾರರೊಂದಿಗೆ ಟೀಂ ಇಂಡಿಯಾದ ಕೋಚಿಂಗ್ ಸಿಬ್ಬಂದಿಗಳು ಸಹ ಏಷ್ಯನ್ ಗೇಮ್ಸ್​ಗೆ ಹೋಗುತ್ತಿಲ್ಲ. ಪ್ರಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಸೇರಿದಂತೆ ಇತರ ಸಿಬ್ಬಂದಿಗಳು ಭಾರತ ಮುಖ್ಯ ತಂಡದೊಂದಿಗೆ ಇರಲಿದ್ದಾರೆ. ಹೀಗಾಗಿ ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್ ಯುವ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾದ ಮುಖ್ಯ ಕೋಚ್; ಬೌಲಿಂಗ್, ಫೀಲ್ಡಿಂಗ್ ಕೋಚ್ ಯಾರು ಗೊತ್ತಾ?
ಟೀಂ ಇಂಡಿಯಾ (ಪ್ರಾತಿನಿಧಿಕ ಚಿತ್ರ)
Follow us on

ಸೆಪ್ಟೆಂಬರ್ 3 ರಿಂದ ಅಕ್ಟೋಬರ್ 8 ರವರೆಗೆ ಚೀನಾದ ಹ್ಯಾಂಗ್‌ಝೌ ನಗರದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್​ನಲ್ಲಿ (Asian Games 2023) ಭಾರತದ ಪುರುಷ ಮತ್ತು ಮಹಿಳಾ ಕ್ರಿಕೆಟ್ ತಂಡಗಳು ಭಾಗವಹಿಸುತ್ತಿವೆ. ಇದೇ ಮೊದಲ ಬಾರಿಗೆ ಭಾರತ ಕ್ರಿಕೆಟ್ ತಂಡ (Indian Cricket Team) ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಈ ಕ್ರೀಡಾಕೂಟಕ್ಕೆ ಈಗಾಗಲೇ ಉಭಯ ತಂಡಗಳನ್ನು ಪ್ರಕಟಿಸಲಾಗಿದೆ. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಪುರುಷ ತಂಡದ ಮುಖ್ಯ ಕೋಚ್ ಆಗಿ ಟೀಂ ಇಂಡಿಯಾದ (Team India) ಮಾಜಿ ಆಟಗಾರ ಹಾಗೂ ಪ್ರಸ್ತುತ ಎನ್​ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ (VVS Laxman) ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.

ಕೆಲವು ತಿಂಗಳ ಅಂತರದಲ್ಲಿ ಟೀಂ ಇಂಡಯಾ ಎರಡು ಪ್ರಮುಖ ಈವೆಂಟ್​ಗಳಾದ ಏಷ್ಯಾಕಪ್ ಹಾಗೂ ವಿಶ್ವಕಪ್​ ಅನ್ನು ಆಡಬೇಕಿದೆ. ಈ ನಡುವೆ ಏಷ್ಯನ್ ಗೇಮ್ಸ್​ ಕೂಡ ನಡೆಯುತ್ತಿದೆ. ಹೀಗಾಗಿ ಈ ಕ್ರೀಡಾಕೂಟಕ್ಕೆ ಭಾರತ ಯುವ ಪಡೆಯನ್ನು ಆಯ್ಕೆ ಮಾಡಲಾಗಿದೆ. ಏಕೆಂದರೆ ಟೀಂ ಇಂಡಿಯಾದ ಪ್ರಮುಖ ಆಟಗಾರರು ಏಷ್ಯಾಕಪ್ ಹಾಗೂ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಲಿದ್ದಾರೆ. ಅನುಭವಿಗಳ ಅನುಪಸ್ಥಿತಿಯಲ್ಲಿ ಯುವ ಆಟಗಾರರಿಗೆ ಆಯ್ಕೆ ಮಂಡಳಿ ಅವಕಾಶ ನೀಡಲಾಗಿದ್ದು, ಈ ಯುವ ತಂಡದಲ್ಲಿ ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಜಿತೇಶ್ ಶರ್ಮಾ, ತಿಲಕ್ ವರ್ಮಾ, ಶಿವಂ ದುಬೆ ಮತ್ತು ಅರ್ಷದೀಪ್ ಸಿಂಗ್ ಮುಂತಾದ ಆಟಗಾರರು ಸೇರಿದ್ದಾರೆ. ಈ ತಂಡದ ನಾಯಕತ್ವವನ್ನು ಯುವ ಸ್ಟಾರ್ ಓಪನರ್ ರುತುರಾಜ್ ಗಾಯಕ್ವಾಡ್​ಗೆ ವಹಿಸಲಾಗಿದೆ.

Asian Games 2023: ಏಷ್ಯನ್ ಗೇಮ್ಸ್​ಗೆ ಟೀಂ ಇಂಡಿಯಾವನ್ನು ಕಳುಹಿಸಲು ಗ್ರೀನ್ ಸಿಗ್ನಲ್ ನೀಡಿದ ಬಿಸಿಸಿಐ

ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್​ಗೆ ಪಟ್ಟ

ವಿಶ್ವಕಪ್ ದೃಷ್ಟಿಯಿಂದ ಹಿರಿಯ ಆಟಗಾರರನ್ನು ಸೇರಿದಂತೆ ಟೀಂ ಇಂಡಿಯಾದ ಕೋಚಿಂಗ್ ಸಿಬ್ಬಂದಿಗಳು ಸಹ ಏಷ್ಯನ್ ಗೇಮ್ಸ್​ಗೆ ಹೋಗುತ್ತಿಲ್ಲ. ಪ್ರಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಸೇರಿದಂತೆ ಇತರ ಸಿಬ್ಬಂದಿಗಳು ಭಾರತ ಮುಖ್ಯ ತಂಡದೊಂದಿಗೆ ಇರಲಿದ್ದಾರೆ. ಹೀಗಾಗಿ ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್ ಯುವ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಲಕ್ಷ್ಮಣ್ ಈ ಹಿಂದೆಯೂ ದ್ರಾವಿಡ್ ಅವರ ಅನುಪಸ್ಥಿತಿಯಲ್ಲಿ ಭಾರತದ ಮುಖ್ಯ ಕೋಚ್ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು, ಅವರು 2023 ರ ಏಷ್ಯನ್ ಗೇಮ್ಸ್‌ಗೆ ಮುಖ್ಯ ಕೋಚ್ ಆಗಿ ತಂಡದೊಂದಿಗೆ ಚೀನಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಮಹಿಳಾ ತಂಡಕ್ಕೆ ಯಾರು ಕೋಚ್?

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಅನುಭವಿ ಲಕ್ಷ್ಮಣ್ ಏಷ್ಯನ್ ಗೇಮ್ಸ್​ಗೆ ಭಾರತೀಯ ಪುರುಷರ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದು, ಮಾಜಿ ಬ್ಯಾಟರ್ ಹೃಷಿಕೇಶ್ ಕಾನಿಟ್ಕರ್ ಅವರು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಹಂಗಾಮಿ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ವರದಿಯ ಪ್ರಕಾರ, ಲಕ್ಷ್ಮಣ್ ಹೊರತುಪಡಿಸಿ, ಮಾಜಿ ಸ್ಪಿನ್ನರ್ ಸಾಯಿರಾಜ್ ಬಹುತುಲೆ ಏಷ್ಯನ್ ಗೇಮ್ಸ್‌ಗೆ ತಂಡದ ಬೌಲಿಂಗ್ ಕೋಚ್ ಜವಬ್ದಾರಿಯನ್ನು ನಿರ್ವಹಿಸಲಿದ್ದು, ಮುನಿಶ್ ಬಾಲಿ ಫೀಲ್ಡಿಂಗ್ ಕೋಚ್ ಆಗಿರಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Sun, 27 August 23