Ambati Rayudu: ಒಂದೇ ವಾರದಲ್ಲಿ ಪಕ್ಷ ತೊರೆದ ಅಂಬಾಟಿ ರಾಯುಡು

Ambati Rayudu: ಟೀಮ್ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನಾಡಿರುವ ಅಂಬಾಟಿ ರಾಯುಡು 3 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 1694 ರನ್ ಕಲೆಹಾಕಿದ್ದಾರೆ. ಹಾಗೆಯೇ 6 ಟಿ20 ಪಂದ್ಯಗಳಿಂದ 42 ರನ್ ಬಾರಿಸಿದ್ದರು.

Ambati Rayudu: ಒಂದೇ ವಾರದಲ್ಲಿ ಪಕ್ಷ ತೊರೆದ ಅಂಬಾಟಿ ರಾಯುಡು
Ambati Rayudu - CM Jagan
Follow us
TV9 Web
| Updated By: Digi Tech Desk

Updated on:Feb 14, 2024 | 3:17 PM

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu) ವೈಎಸ್​ಆರ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ವಾರದ ಹಿಂದೆಯಷ್ಟೇ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಮ್ಮುಖದಲ್ಲಿ ಅವರು YSRC ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಪಕ್ಷವನ್ನು ತೊರೆಯುತ್ತಿರುವುದಾಗಿ ಅಂಬಾಟಿ ರಾಯುಡು ತಿಳಿಸಿದ್ದಾರೆ.

ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತ್ಯಜಿಸಲು ನಿರ್ಧರಿಸಿದ್ದೇನೆ. ಅಲ್ಲದೆ ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ಬಯಸಿದ್ದೇನೆ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ. ನನ್ನ ಮುಂದಿನ ನಡೆಯನ್ನು ಸರಿಯಾದ ಸಮಯದಲ್ಲಿ ತಿಳಿಸಲಾಗುವುದು, ಎಲ್ಲರಿಗೂ ಧನ್ಯವಾದಗಳು ಎಂದು ಅಂಬಾಟಿ ರಾಯುಡು ಸೋಷಿಯಲ್ ಮೀಡಿಯದಲ್ಲಿ ಬರೆದುಕೊಂಡಿದ್ದಾರೆ.

ಈ ಹಿಂದಿನಿಂದಲೂ ಆಂಧ್ರ ಸಿಎಂ ಜೊತೆ ಆತ್ಮೀಯತೆ ಹೊಂದಿದ್ದ ಅಂಬಾಟಿ ರಾಯುಡು ನಿರೀಕ್ಷೆಯಂತೆ ವೈಎಸ್​ಆರ್​ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗುಂಟೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.

ಬೇರೆ ಪಕ್ಷಕ್ಕೆ ರಾಯುಡು?

ವೈಎಸ್​ಆರ್​ ಕಾಂಗ್ರೆಸ್ ಪಕ್ಷದಿಂದ ಅಂಬಾಟಿ ರಾಯುಡುಗೆ ಲೋಕಸಭಾ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಅವರು ಪಕ್ಷ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಇತ್ತ ವೈಎಸ್​ಆರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿರುವುದಾಗಿ ಹೇಳಿರುವ ರಾಯುಡು ತಮ್ಮ ಹೇಳಿಕೆಯಲ್ಲಿ ಶೀಘ್ರದಲ್ಲೇ ಮುಂದಿನ ನಡೆಯನ್ನು ತಿಳಿಸುತ್ತೇನೆ ಎಂದಿದ್ದಾರೆ. ಹೀಗಾಗಿಯೇ ಅಂಬಾಟಿ ರಾಯುಡು ಹೊಸ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೂಡ ಹರಿದಾಡುತ್ತಿದೆ. ಒಟ್ಟಿನಲ್ಲಿ ವೈಎಸ್​ಆರ್​ ಕಾಂಗ್ರೆಸ್ ಮೂಲಕ 2ನೇ ಇನಿಂಗ್ಸ್ ಆರಂಭಿಸಿದ ರಾಯುಡು ಒಂದೇ ವಾರದಲ್ಲಿ ರಾಜಕೀಯ ನಡೆಯನ್ನು ಬದಲಿಸಿರುವುದು ಅಚ್ಚರಿಯೇ ಸರಿ.

ಅಂಬಾಟಿ ರಾಯುಡು ವೃತ್ತಿಜೀವನ:

ಟೀಮ್ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನಾಡಿರುವ ಅಂಬಾಟಿ ರಾಯುಡು 3 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 1694 ರನ್ ಕಲೆಹಾಕಿದ್ದಾರೆ. ಹಾಗೆಯೇ 6 ಟಿ20 ಪಂದ್ಯಗಳಿಂದ 42 ರನ್ ಬಾರಿಸಿದ್ದರು.

ಇದನ್ನೂ ಓದಿ: Virat Kohli: ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೆರಡು ದಾಖಲೆ ಸೇರ್ಪಡೆ

ಇದಲ್ಲದೆ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್​ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಪರ 203 ಪಂದ್ಯಗಳನ್ನಾಡಿರುವ ರಾಯುಡು 1 ಶತಕ ಹಾಗೂ 22 ಅರ್ಧಶತಕಗಳೊಂದಿಗೆ ಒಟ್ಟು 4348 ರನ್ ಕಲೆಹಾಕಿದ್ದಾರೆ. ಅಲ್ಲದೆ  2023 ರ ಫೈನಲ್ ಪಂದ್ಯದಲ್ಲಿ ಸಿಎಸ್​ಕೆ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್​ ಕ್ರಿಕೆಟ್​ಗೆ ರಾಯುಡು ವಿದಾಯ ಹೇಳಿದ್ದಾರೆ.

Published On - 11:55 am, Sat, 6 January 24

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು