AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀನ್ಯಾ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ದೊಡ್ಡ ಗಣೇಶ್ ನೇಮಕ

Dodda Ganesh: ಕರ್ನಾಟಕದ ವೇಗದ ಬೌಲರ್​ ದೊಡ್ಡ ಗಣೇಶ್ ಅವರು ಟೀಮ್ ಇಂಡಿಯಾ ಪರ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯವನ್ನಾಡಿದ್ದಾರೆ. ಈ ವೇಳೆ ಒಟ್ಟು 6 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅಲ್ಲದೆ ನಿವೃತ್ತಿಯ ಬಳಿಕ ಗೋವಾ ತಂಡದ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ಕೀನ್ಯಾ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಒಂದು ವರ್ಷದ ಒಪ್ಪಂದ ಮಾಡಿಕೊಂಡಿದ್ದಾರೆ.

ಕೀನ್ಯಾ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ದೊಡ್ಡ ಗಣೇಶ್ ನೇಮಕ
Dodda Ganesh - Kenya Team
ಝಾಹಿರ್ ಯೂಸುಫ್
|

Updated on: Aug 14, 2024 | 11:35 AM

Share

ಟೀಮ್ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ದೊಡ್ಡ ಗಣೇಶ್ ಅವರು ಕೀನ್ಯಾ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ. 2012-13 ರಲ್ಲಿ ಗೋವಾ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಕರ್ನಾಟಕ ವೇಗಿ ಇದೀಗ ರಾಷ್ಟ್ರೀಯ ತಂಡದ ಪರ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ದೊಡ್ಡ ಗಣೇಶ್ ಅವರ ನೇತೃತ್ವದಲ್ಲಿ ಕೀನ್ಯಾ ತಂಡವು ಮುಂಬರುವ ಐಸಿಸಿ ಡಿವಿಷನ್ 2 ಚಾಲೆಂಜ್ ಲೀಗ್​​ನಲ್ಲಿ ಕಣಕ್ಕಿಳಿಯಲಿದೆ. ಈ ಲೀಗ್​ನಲ್ಲಿ ಕೀನ್ಯಾ ತಂಡದ ಎದುರಾಳಿಗಳಾಗಿ ಪಪುವಾ ನ್ಯೂಗಿನಿಯಾ, ಕತಾರ್, ಡೆನ್ಮಾರ್ಕ್ ಮತ್ತು ಜರ್ಸಿ ತಂಡಗಳು ಕಾಣಿಸಿಕೊಳ್ಳಲಿದೆ.

ಅಕ್ಟೋಬರ್ ತಿಂಗಳಲ್ಲಿ ಟಿ20 ವಿಶ್ವಕಪ್ ಆಫ್ರಿಕಾ ವಿಭಾಗದ ಅರ್ಹತಾ ಸುತ್ತು ನಡೆಯಲಿದ್ದು, ಈ ಸುತ್ತಿನಲ್ಲಿ ಕೀನ್ಯಾ ತಂಡ ಕಾಣಿಸಿಕೊಳ್ಳಲಿದೆ. ಹೀಗಾಗಿ ಒಂದು ಕಾಲದ ಬಲಿಷ್ಠ ತಂಡ ಎನಿಸಿಕೊಂಡಿದ್ದ ಕೀನ್ಯಾ ತಂಡವನ್ನು ಮತ್ತೆ ಮುನ್ನಲೆಗೆ ತರುವ ಮಹತ್ವದ ಜವಾಬ್ದಾರಿ ದೊಡ್ಡ ಗಣೇಶ್ ಅವರ ಮುಂದಿದೆ.

ದೊಡ್ಡ ಗಣೇಶ್ ವೃತ್ತಿಜೀವನ:

1990-2000 ರಲ್ಲಿ ದೇಶೀಯ ಅಂಗಳದಲ್ಲಿ ಸಂಚಲನ ಸೃಷ್ಟಿಸಿದ್ದ ದೊಡ್ಡ ಗಣೇಶ್ ಟೀಮ್ ಇಂಡಿಯಾ ಪರ ಒಟ್ಟು 5 ಪಂದ್ಯಗಳನ್ನಾಡಿದ್ದಾರೆ. ಭಾರತದ ಪರ 4 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕರ್ನಾಟಕ ವೇಗಿ 5 ವಿಕೆಟ್ ಕಬಳಿಸಿದ್ದರು. ಹಾಗೆಯೇ 1997 ರಲ್ಲಿ ನಡೆದ ಝಿಂಬಾಬ್ವೆ ವಿರುದ್ಧ ಏಕೈಕ ಏಕದಿನ ಪಂದ್ಯವಾಡಿದ್ದ ದೊಡ್ಡ ಗಣೇಶ್ ಅವರು ಒಂದು ವಿಕೆಟ್ ಪಡೆದಿದ್ದರು.

ಇನ್ನು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 104 ಪಂದ್ಯಗಳಲ್ಲಿ 20355 ಎಸೆತಗಳನ್ನು ಎಸೆದಿರುವ ದೊಡ್ಡ ಗಣೇಶ್ 10739 ರನ್​ಗಳನ್ನು ನೀಡಿ 365 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 89 ಲೀಸ್ಟ್ ಎ ಕ್ರಿಕೆಟ್​ನಲ್ಲಿ 4346 ಎಸೆತಗಳ ಮೂಲಕ ಒಟ್ಟು 128 ವಿಕೆಟ್ ಉರುಳಿಸಿದ್ದಾರೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಹರಾಜಿನಲ್ಲಿ ಕಾಣಿಸಿಕೊಂಡರೆ 30 ಕೋಟಿ ರೂ. ಗ್ಯಾರಂಟಿ..!

ವಿಶೇಷ ಎಂದರೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ದೊಡ್ಡ ಗಣೇಶ್ 6 ಬಾರಿ 10 ಕ್ಕೂ ಅಧಿಕ ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 20 ಬಾರಿ 5+ ವಿಕೆಟ್ ಉರುಳಿಸಿ ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಕೀನ್ಯಾ ತಂಡದ ನೂತನ ಕೋಚ್ ಆಗಿ ದೊಡ್ಡ ಗಣೇಶ್ ಅವರು ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?