AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮನೆಯಲ್ಲಿ ಕಳ್ಳತನ

Mohammed Azharuddin's House Robbed: ಲೋನಾವಾಲಾದಲ್ಲಿರುವ ಮಾಜಿ ಕ್ರಿಕೆಟ್ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಬಂಗಲೆಯಲ್ಲಿ ಜುಲೈ 7 ರಿಂದ 18ರ ನಡುವೆ ಕಳ್ಳತನ ನಡೆದಿದೆ. ಕಳ್ಳರು ರೂ. 50,000 ನಗದು ಮತ್ತು ಟಿವಿ ಕದ್ದಿದ್ದಾರೆ. ಹಿಂಬಾಗಿಲ ಜಾಲರಿಯನ್ನು ಕತ್ತರಿಸಿ ಕಳ್ಳರು ನುಸುಳಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮನೆಯಲ್ಲಿ ಕಳ್ಳತನ
Mohammad Azharuddin
ಪೃಥ್ವಿಶಂಕರ
|

Updated on:Jul 19, 2025 | 7:11 PM

Share

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ (Mohammed Azharuddin) ಅವರ ಮಡದಿ ಸಂಗೀತಾ ಬಿಜಲಾನಿ (Sangeeta Bijlani) ಅವರ ಒಡೆತನದಲ್ಲಿರುವ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದು ವರದಿಯಾಗಿದೆ. ಲೋನಾವಾಲಾದಲ್ಲಿರುವ ಅವರ ಐಷಾರಾಮಿ ಬಂಗಲೆಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಬಂಗಲೆಯಿಂದ ಕೆಲವು ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ನೀಡಿರುವ ಹೇಳಿಕೆಯ ಪ್ರಕಾರ, ಜುಲೈ 7 ರಿಂದ 18 ರ ನಡುವೆ ಬಂಗಲೆ ಖಾಲಿಯಾಗಿದ್ದ ಸಮಯದಲ್ಲಿ ಕಳ್ಳರು ತಮ್ಮ ಕೈಚೆಳಕ ತೊರಿರುವುದಾಗಿ ಹೇಳಲಾಗುತ್ತಿದೆ. ಕಳ್ಳರು ಮನೆಯೊಳಗಿದ್ದ ವಸ್ತುಗಳನ್ನು ಕದ್ದಿರುವುದು ಮಾತ್ರವಲ್ಲದೆ ಬಂಗಲೆಯೊಳಗಿನ ಆಸ್ತಿಗೂ ಹಾನಿ ಮಾಡಿದ್ದಾರೆ.

57 ಸಾವಿರ ರೂ ಮೌಲ್ಯದ ವಸ್ತುಗಳ ಕಳ್ಳತನ

ಪುಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಮಾಹಿತಿ ಪ್ರಕಾರ, ‘ಕಳ್ಳರು ಹಿಂಭಾಗದ ಗೋಡೆಯ ಜಾಲರಿಯನ್ನು ಕತ್ತರಿಸಿ ಬಂಗಲೆಯೊಳಗೆ ನುಸುಳಿದ್ದಾರೆ. ಮೊದಲು ಮೊದಲ ಮಹಡಿಯಲ್ಲಿರುವ ಗ್ಯಾಲರಿಗೆ ಹತ್ತಿರುವ ಕಳ್ಳರು ಆ ನಂತರ ಕಿಟಕಿಯ ಗ್ರಿಲ್ ಅನ್ನು ಧ್ವಂಸಗೊಳಿಸಿ ಮನೆಯ ಒಳಗೆ ಪ್ರವೇಶಿಸಿದ್ದಾರೆ. ನಂತರ ಮನೆಯಲ್ಲಿದ್ದ ರೂ. 50 ಸಾವಿರ ನಗದು ಮತ್ತು ಸುಮಾರು ರೂ. 7 ಸಾವಿರ ಮೌಲ್ಯದ ಟಿವಿಯನ್ನು ಕದ್ದಿದ್ದಾರೆ ಎಂದು ವರದಿಯಾಗಿದೆ.

ತನಿಖೆ ಆರಂಭಿಸಿರುವ ಪೊಲೀಸರು

ಅಜರುದ್ದೀನ್ ಅವರ ಆಪ್ತರಾದ ಮುಹಮ್ಮದ್ ಮುಜೀಬ್ ಖಾನ್ ಅವರು ಬಂಗಲೆಯಲ್ಲಿ ಕಳ್ಳತನ ನಡೆದ ಬಗ್ಗೆ ದೂರು ನೀಡಿದ್ದಾರೆ. ಮುಜೀಬ್ ಖಾನ್ ಅವರ ಪ್ರಕಾರ, ಬಂಗಲೆಯಲ್ಲಿ ಯಾರೂ ಇಲ್ಲದಿದ್ದಾಗ, ಅಂದರೆ ಜುಲೈ 7 ರಿಂದ 18 ರ ನಡುವೆ ಕಳ್ಳತನ ನಡೆದಿದೆ. ಲೋನಾವಾಲ ಗ್ರಾಮೀಣ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 331 (3), 331 (4), 305 (ಎ), 324 (4), 324 (5) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿಯವರೆಗೆ, ಕದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿಲ್ಲ. ಪೊಲೀಸರು ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನಾದರಿಸಿ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಅಪರಾಧಿಗಳನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಇದರ ಜೊತೆಗೆ, ಸುತ್ತಮುತ್ತಲಿನ ಜನರನ್ನು ಸಹ ಪ್ರಶ್ನಿಸುತ್ತಿದ್ದಾರೆ.

ಅಜರುದ್ದೀನ್ ವೃತ್ತಿಜೀವನ

ಭಾರತದ ಪರ 99 ಟೆಸ್ಟ್‌ಗಳನ್ನಾಡಿರುವ ಅಜರುದ್ದೀನ್, 147 ಇನ್ನಿಂಗ್ಸ್‌ಗಳಲ್ಲಿ 45.03 ಸರಾಸರಿಯಲ್ಲಿ 6215 ರನ್ ಗಳಿಸಿದ್ದಾರೆ. ಇದರಲ್ಲಿ 21 ಅರ್ಧಶತಕಗಳು ಹಾಗೂ 22 ಶತಕಗಳು ಸೇರಿವೆ. ಹಾಗೆಯೇ 334 ಏಕದಿನ ಪಂದ್ಯಗಳನ್ನು ಆಡಿರುವ ಅಜರುದ್ದೀನ್ 308 ಏಕದಿನ ಇನ್ನಿಂಗ್ಸ್‌ಗಳಲ್ಲಿ 9378 ರನ್ ಗಳಿಸಿದ್ದಾರೆ. ಇದರಲ್ಲಿ 58 ಅರ್ಧಶತಕ ಮತ್ತು 7 ಶತಕಗಳು ಸೇರಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Sat, 19 July 25

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ