Team India: ಟೀಮ್ ಇಂಡಿಯಾ ಮಾಜಿ ಕೋಚ್ ಮನೆ ಮೇಲೆ ದಾಳಿ: ಕೋಟಿ ರೂ. ಪತ್ತೆ..!

Tushar Arothe: ಮಾಜಿ ಆಟಗಾರ ತುಷಾರ್ ಅರೋಥೆ ಭಾರತ ಮಹಿಳಾ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. 2018 ರಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದ ತುಷಾರ್ ಆ ಬಳಿಕ ಬೆಟ್ಟಿಂಗ್ ವಿಷಯದಲ್ಲಿ ಸುದ್ದಿಯಾಗಿದ್ದರು. ಇದೀಗ ಭಾರತ ತಂಡದ ಮಾಜಿ ಕೋಚ್ ವಿರುದ್ಧ ಕಾಳಧನದ ಆರೋಪ ಕೇಳಿ ಬಂದಿದೆ.

Team India: ಟೀಮ್ ಇಂಡಿಯಾ ಮಾಜಿ ಕೋಚ್ ಮನೆ ಮೇಲೆ ದಾಳಿ: ಕೋಟಿ ರೂ. ಪತ್ತೆ..!
Tushar Arothe
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 05, 2024 | 12:33 PM

ಭಾರತ ಮಹಿಳಾ ತಂಡದ ಮಾಜಿ ಕೋಚ್ ತುಷಾರ್ ಅರೋಥೆ (Tushar Arothe) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಟೀಮ್ ಇಂಡಿಯಾದ ಮಾಜಿ ಕೋಚ್ ಮನೆಯಲ್ಲಿ 1 ಕೋಟಿ ರೂ. ಮೊತ್ತ ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಖಚಿತ ಮಾಹಿತಿಯೊಂದಿಗೆ ವಡೋದರದ ಪತ್ಪರ್‌ಗಂಜ್ ಪ್ರದೇಶದಲ್ಲಿರುವ ತುಷಾರ್ ಅರೋಥೆ ಅವರ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಪೊಲೀಸರಿಗೆ ಒಂದು ಕೋಟಿ ರೂ. ಲಭಿಸಿದೆ. ಈ ಹಣ ಹೇಗೆ ಬಂತು, ಎಲ್ಲಿಂದ ಬಂತು, ಇದರ ಮೂಲ ಯಾವುದು, ಇಂತಹ ಪ್ರಶ್ನೆಗಳಿಗೆ ಭಾರತದ ಮಾಜಿ ಕೋಚ್‌ನಿಂದ ಸ್ಪಷ್ಟ ಉತ್ತರ ಸಿಕ್ಕಿಲ್ಲ.

ಈ ಕುರಿತು ವಡೋದರಾ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹಣದ ಮೂಲದ ಬಗ್ಗೆ ಅರೋಥೆ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ. ಮನೆಯ ಮೇಲೆ ದಾಳಿ ನಡೆಸಿ ಬೂದು ಬಣ್ಣದ ಬ್ಯಾಗ್‌ನಲ್ಲಿಟ್ಟಿದ್ದ ಒಟ್ಟು ಮೊತ್ತ 1.01 ಕೋಟಿ ರೂಪಾಯಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಂದಹಾಗೆ ಈ ಹಿಂದೆ ಕೂಡ ತುಷಾರ್ ಅರೋಥೆ ಸುದ್ದಿಯಾಗುತ್ತಿರುವುದು ಇದೇ ಮೊದಲೇನಲ್ಲ. ಐಪಿಎಲ್ 2019 ರ ಸಂದರ್ಭದಲ್ಲಿ ಕೆಫೆಯೊಂದರಲ್ಲಿ ದಾಳಿ ನಡೆಸಿದ ಗುಜರಾತ್ ಪೊಲೀಸರು 19 ಜನರನ್ನು ಬಂಧಿಸಿದಾಗ, ಅವರಲ್ಲಿ ಅರೋಥೆ ಕೂಡ ಇದ್ದರು. ನಂತರ ತುಷಾರ್ ಅರೋಥೆಯ ಫೋನ್ ಮತ್ತು ಕಾರನ್ನು ಸಹ ಜಪ್ತಿ ಮಾಡಲಾಗಿತ್ತು.

ಇದಾದ ಬಳಿಕ ಪೊಲೀಸರು ಅರೋಥೆ ಅವರ ಮೊಬೈಲ್‌ನಲ್ಲಿ ತಪಾಸಣೆ ನಡೆಸಿದಾಗ ಅದರಲ್ಲಿ ಯಾವುದೇ ಬೆಟ್ಟಿಂಗ್ ಆ್ಯಪ್ ಪತ್ತೆಯಾಗಿರಲಿಲ್ಲ. ಹೀಗಾಗಿ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಈ ಹಿಂದೆ ಟೀಮ್ ಇಂಡಿಯಾದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ತುಷಾರ್ ಅರೋಥೆ 2018ರಲ್ಲಿ ಈ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ 2017 ರಲ್ಲಿ ತುಷಾರ್ ಅವರ ಕೋಚಿಂಗ್ ಸಾರಥ್ಯದಲ್ಲಿ ಭಾರತ ಮಹಿಳಾ ತಂಡ ಐಸಿಸಿ ವಿಶ್ವಕಪ್‌ನಲ್ಲಿ ಫೈನಲ್​ಗೆ ಪ್ರವೇಶಿಸಿತ್ತು. ಆದರೆ ಇದಾದ ಬಳಿಕ ತುಷಾರ್ ಅರೋಥೆ ಪೊಲೀಸ್ ದಾಳಿಯೊಂದಿಗೆ ಸುದ್ದಿಯಾಗುತ್ತಿದ್ದಾರೆ.

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್