T20 World Cup: ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡ ಹೀಗಿರಲಿದೆ; ಗೌತಮ್ ಗಂಭೀರ್

T20 World Cup: ಗಂಭೀರ್ ತನ್ನ ಪ್ಲೇಯಿಂಗ್ ಇಲೆವೆನ್ ನಲ್ಲಿ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಅವರನ್ನು ಆರಂಭಿಕರಾಗಿ ಆಯ್ಕೆ ಮಾಡಿದ್ದಾರೆ. ಹಾಗಾಗಿ ಅವರು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಮೂರನೇ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ.

T20 World Cup: ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡ ಹೀಗಿರಲಿದೆ; ಗೌತಮ್ ಗಂಭೀರ್
India vs Pakistan, T20 World cup 2021
Follow us
TV9 Web
| Updated By: ಪೃಥ್ವಿಶಂಕರ

Updated on: Sep 15, 2021 | 3:47 PM

ಪ್ರಸ್ತುತ ಟಿ 20 ವಿಶ್ವಕಪ್‌ ಭಾರೀ ಚರ್ಚೆ ಹುಟ್ಟು ಹಾಕಿದೆ. ಟೀಂ ಇಂಡಿಯಾ ಅಕ್ಟೋಬರ್ 24 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ತಮ್ಮ ಅಭಿಯಾನವನ್ನು ಆರಂಭಿಸಲಿದೆ. ವಿಶ್ವಕಪ್‌ಗಾಗಿ ಟೀಂ ಇಂಡಿಯಾವನ್ನು ಕೂಡ ಘೋಷಿಸಲಾಗಿದೆ. ಆದರೆ ಯಾವ ಆಟಗಾರ ವಿರಾಟ್ ಕೊಹ್ಲಿ ಪ್ಲೇಯಿಂಗ್ ಇಲೆವೆನ್ ಆಗಿ ಫೀಲ್ಡಿಂಗ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು. ಆದರೆ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡಿದ್ದಾರೆ.

ಗೌತಮ್ ಗಂಭೀರ್ ಆಯ್ಕೆ ಮಾಡಿರುವ ತಮ್ಮ್ ತಂಡದಲ್ಲಿ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್​ಗೆ ಅವಕಾಶ ನೀಡಿಲ್ಲ. ಗಂಭೀರ್ ಅಶ್ವಿನ್ ಬದಲಿಗೆ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಯನ್ನು ಆಯ್ಕೆ ಮಾಡಿದ್ದಾರೆ. ಟಿ 20 ವಿಶ್ವಕಪ್‌ಗಾಗಿ 15 ಜನರ ಭಾರತೀಯ ತಂಡದಲ್ಲಿ ಅಶ್ವಿನ್ ಅವರನ್ನು ಆಯ್ಕೆ ಮಾಡುವ ಮೂಲಕ ಆಯ್ಕೆದಾರರು ಎಲ್ಲರನ್ನೂ ಅಚ್ಚರಿಗೊಳಿಸಿದರು. ಅಶ್ವಿನ್ ನಾಲ್ಕು ವರ್ಷಗಳಿಂದ ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿಲ್ಲ. ಹಾಗಾಗಿ ಆತ ಆಯ್ಕೆಯಾಗುವ ಸಾಧ್ಯತೆ ಕಡಿಮೆ.

ಓಪನರ್ ಯಾರು? ಸ್ಟಾರ್ ಸ್ಪೋರ್ಟ್ಸ್ ಶೋ ಫಾಲೋ ದಿ ಬ್ಲೂಸ್ ಚರ್ಚೆಯ ಸಮಯದಲ್ಲಿ, ಗಂಭೀರ್ ತನ್ನ ಪ್ಲೇಯಿಂಗ್ ಇಲೆವೆನ್ ನಲ್ಲಿ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಅವರನ್ನು ಆರಂಭಿಕರಾಗಿ ಆಯ್ಕೆ ಮಾಡಿದ್ದಾರೆ. ಹಾಗಾಗಿ ಅವರು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಮೂರನೇ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಗಂಭೀರ್ ಸೂರ್ಯಕುಮಾರ್ ಯಾದವ್ ಅವರನ್ನು 4 ನೇ ಸ್ಥಾನಕ್ಕೆ ಮತ್ತು ಭಾರತೀಯ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು 5 ನೇ ಸ್ಥಾನದಲ್ಲಿ ಆಡಿಸುವ ಇಚ್ಚೆ ಹೊಂದಿದ್ದಾರೆ.

ಆಲ್ ರೌಂಡರ್ ಗಂಭೀರ್ ಆರನೇ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಏಳನೇ ಸ್ಥಾನದಲ್ಲಿ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿದರು. ಭಾರತದ ವೇಗದ ಬೌಲರ್ ಭುವನೇಶ್ವರ್ ಕುಮಾರ್ 8 ನೇ ಸ್ಥಾನದಲ್ಲಿದ್ದಾರೆ.

ವರುಣ್ ಚಕ್ರವರ್ತಿಗೂ ಅವಕಾಶ ಗಂಭೀರ್ 9 ನೇ ಸ್ಥಾನದಲ್ಲಿ ಸ್ಪಿನ್ನರ್ ವರುಣ್ ಚಕ್ರವರ್ತಿ, 10 ನೇ ಸ್ಥಾನದಲ್ಲಿ ಮೊಹಮ್ಮದ್ ಶಮಿ ಮತ್ತು 11 ನೇ ಸ್ಥಾನಕ್ಕೆ ಜಸ್ ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಿದರು.

ಇನ್ನೊಂದೆಡೆ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರನ್ನು ಆಲ್‌ರೌಂಡರ್ ಎಂದು ಹೆಸರಿಸಲಾಗಿದೆ. ಒಂದು ವೇಳೆ ಶಾರ್ದೂಲ್ ಠಾಕೂರ್ ಭಾರತ ತಂಡದ ಭಾಗವಾಗಿದ್ದರೆ, ಅವರು ಭುವನೇಶ್ವರ್ ಕುಮಾರ್ ಅವರ ಬದಲಿಯಾಗಿ ಆಡುತ್ತಿದ್ದರು ಎಂದು ಗಂಭೀರ್ ಹೇಳಿದ್ದಾರೆ. ಟಿ 20 ವಿಶ್ವಕಪ್‌ಗೆ ಆಯ್ಕೆಯಾದ ಮೀಸಲು ಆಟಗಾರರಲ್ಲಿ ಶಾರ್ದೂಲ್ ಒಬ್ಬರು.

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತ ತಂಡ ಹೀಗಿರಲಿದೆ- ಗೌತಮ್ ಗಂಭೀರ್ ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ ಮತ್ತು ಜಸ್ಪ್ರೀತ್ ಬುಮ್ರಾ

ಬಿಸಿಸಿಐ ವಿಶ್ವಕಪ್‌ಗಾಗಿ ಭಾರತೀಯ ತಂಡವನ್ನು ಪ್ರಕಟಿಸಿದೆ ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ರವೀಂದ್ರ ಜಡೇಜಾ, ರಾಹುಲ್ ಚಹರ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ಅಕ್ಷರ ಪಟೇಲ್, ಆರ್ ಅಶ್ವಿನ್

ಕಾಯ್ದಿರಿಸಲಾಗಿರುವ ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ ಮತ್ತು ಶಾರ್ದೂಲ್ ಠಾಕೂರ್

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ