ಪಾಕಿಸ್ತಾನದಲ್ಲೂ ಟ್ರೆಂಡ್​ ಆಗ್ತಿದೆ #IndiaNeedsOxygen.. ನಾವು ಸಹ ಭಾರತೀಯರಿಗಾಗಿ ಪ್ರಾರ್ಥಿಸುತ್ತಿದ್ದೇವೆ: ಶೋಯೆಬ್ ಅಖ್ತರ್

Shoaib Akhtar: ನಾನು ಭಾರತದ ಜನರಿಗಾಗಿ ಪ್ರಾರ್ಥಿಸುತ್ತೇನೆ. ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ ಮತ್ತು ಭಾರತ ಸರ್ಕಾರ ಶೀಘ್ರದಲ್ಲೇ ಅದನ್ನು ನಿಭಾಯಿಸುತ್ತದೆ ಎಂದು ನಾನು ಭಾವಿಸುತ್ತೇನೆ.

ಪಾಕಿಸ್ತಾನದಲ್ಲೂ ಟ್ರೆಂಡ್​ ಆಗ್ತಿದೆ #IndiaNeedsOxygen.. ನಾವು ಸಹ ಭಾರತೀಯರಿಗಾಗಿ ಪ್ರಾರ್ಥಿಸುತ್ತಿದ್ದೇವೆ: ಶೋಯೆಬ್ ಅಖ್ತರ್
ಶೋಯೆಬ್ ಅಖ್ತರ್
Follow us
ಪೃಥ್ವಿಶಂಕರ
|

Updated on: Apr 23, 2021 | 8:41 PM

ಕೊರೊನಾ ಮಹಾಮಾರಿ ಭಾರತದ ಹಣೆ ಬರಹವನ್ನೇ ಬದಲಾಯಿಸಿದೆ. ಪ್ರತಿದಿನ ಹೊಸ ಪ್ರಕರಣಗಳಲ್ಲಿ ದಾಖಲೆ ಹೆಚ್ಚುತ್ತಿದೆ. ಜನರು ಈ ಮಹಾಮಾರಿಯ ದಾಳಿಗೆ ಸಿಲುಕಿ ಇನ್ನಿಲ್ಲದಂತೆ ಬಳಲುತ್ತಿದ್ದಾರೆ. ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ವೈದ್ಯಕೀಯ ವ್ಯವಸ್ಥೆಯು ತೀರ ತಲೆಕಡೆಸಿಕೊಂಡಿದೆ. ಸರ್ಕಾರ ಈ ಸೋಂಕನ್ನು ತಡೆಕಟ್ಟಲು ನಾನಾ ಪ್ರಯತ್ನಗಳನ್ನು ಮಾಡುತ್ತಿದೆ. ಸೋಂಕಿತರ ಜೀವನವು ಆಮ್ಲಜನಕದ ಮೇಲೆ ನಿಂತಿದೆ. ಭಾರತದಲ್ಲಿ ಈಗಿರುವ ಸಂದರ್ಭಗಳು ಭಯ ಹುಟ್ಟಿಸುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ, ಜೀವವನ್ನು ಉಳಿಸುವುದು ಸರ್ಕಾರಕ್ಕೆ ದೊಡ್ಡ ಪ್ರಶ್ನೆಯಾಗಿದೆ.

ನೆರೆಹೊರೆಯ ರಾಷ್ಟ್ರಗಳಿಗೂ ಸಹಾಯ ಮಾಡಿದೆ ಈ ಕಠಿಣ ಪರಿಸ್ಥಿತಿಯನ್ನು ಎದುರಿಸುವುದರೊಂದಿಗೆ ಭಾರತವು ತನ್ನ ನೆರೆಹೊರೆಯ ರಾಷ್ಟ್ರಗಳಿಗೂ ಸಹಾಯ ಮಾಡಿದೆ. ಔಷಧಿ ಮತ್ತು ಆಮ್ಲಜನಕದ ನೆರವಿಗೆ ರಷ್ಯಾ ಕೆಲವು ಉಪಕ್ರಮಗಳನ್ನು ಕೈಗೊಳ್ಳಲಿದೆ ಎಂದು ವರದಿಯಾಗಿದೆ. ಅದೇ ಸಮಯದಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಕೂಡ ಭಾರತದ ಸದ್ಯದ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದಲ್ಲೂ ಭಾರತಕ್ಕಾಗಿ ಪ್ರಾರ್ಥನೆಗಳು ಹೌದು, ಅದು ರಾಜಕೀಯದ ಹಂತವಾಗಲಿ ಅಥವಾ ಕ್ರಿಕೆಟ್ ಕ್ಷೇತ್ರವಾಗಲಿ, ಭಾರತ-ಪಾಕಿಸ್ತಾನವು ಪ್ರಸ್ತುತ ಪರಿಸ್ಥಿತಿಯಲ್ಲಿ ನದಿಯ ಎರಡು ದಂಡೆಗಳಂತೆ. ಆದರೆ, ಕೊರೊನಾದಿಂದ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಪಾಕಿಸ್ತಾನದಲ್ಲೂ ಭಾರತದ ಸುಧಾರಣೆಗಾಗಿ ಪ್ರಾರ್ಥನೆ ನಡೆಸಲಾಗುತ್ತಿದೆ. ಮಾಜಿ ಕ್ರಿಕೆಟಿಗ ಬೌಲರ್ ಶೋಯೆಬ್ ಅಖ್ತರ್ ಕೂಡ ಭಾರತದ ಒಳಿತಿಗಾಗಿ ಪ್ರಾರ್ಥನೆ ಪ್ರಾರಂಭಿಸಿದ್ದಾರೆ.

ಶೋಯೆಬ್ ಅಖ್ತರ್ ಟ್ವೀಟ್ – ಒಟ್ಟಾಗಿ ನಾವು ತೊಂದರೆಯಲ್ಲಿದ್ದೇವೆ ನಾನು ಭಾರತದ ಜನರಿಗಾಗಿ ಪ್ರಾರ್ಥಿಸುತ್ತೇನೆ. ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ ಮತ್ತು ಭಾರತ ಸರ್ಕಾರ ಶೀಘ್ರದಲ್ಲೇ ಅದನ್ನು ನಿಭಾಯಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಈ ಕಷ್ಟದ ಕ್ಷಣದಲ್ಲಿ ನಾವೆಲ್ಲರೂ ಒಟ್ಟಾಗಿರುತ್ತೇವೆ ಎಂದು ಶೋಯೆಬ್ ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನದಲ್ಲಿ ಟ್ರೆಂಡ್​ ಆಗ್ತಿದೆ ಇಂಡಿಯಾನೀಡ್ಆಕ್ಸಿಜನ್ ಕೊರೊನಾದಿಂದ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಯನ್ನು ಗಮನಿಸಿದರೆ, ಭಾರತದಲ್ಲಿ ಆಮ್ಲಜನಕದ ಕೊರತೆಯಿದೆ. ದೇಶದ ಪ್ರತಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಸೋಂಕಿತರು ಬಳಲುತ್ತಿದ್ದಾರೆ. ಕೊರೊನಾ ಸೋಂಕಿತ ಅನೇಕ ರೋಗಿಗಳು ಆಮ್ಲಜನಕದ ಕೊರತೆಯಿಂದ ಸಾಯುತ್ತಿದ್ದಾರೆ. #Indianeedsoxygen ಭಾರತದಲ್ಲಿ ಮಾತ್ರವಲ್ಲದೆ ಪಾಕಿಸ್ತಾನದಲ್ಲೂ ಟ್ರೆಂಡ್ ಆಗಲು ಇದು ಕಾರಣವಾಗಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ