AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asad Rauf Death: ಹೃದಯಾಘಾತದಿಂದ ಪಾಕಿಸ್ತಾನದ ಮಾಜಿ ಅಂಪೈರ್ ಅಸದ್ ರೌಫ್ ನಿಧನ

Asad Rauf passes away: ಅಂತಾರಾಷ್ಟ್ರೀಯ ಕ್ರಿಕೆಟ್‌ನ ಒಟ್ಟು 231 ಪಂದ್ಯಗಳಲ್ಲಿ ಅಸದ್ ರೌಫ್ ಅಂಪೈರಿಂಗ್ ಮಾಡಿದ್ದಾರೆ. ಇದರಲ್ಲಿ 64 ಟೆಸ್ಟ್, 28 ಟಿ20 ಮತ್ತು 139 ಏಕದಿನ ಪಂದ್ಯಗಳು ಸೇರಿವೆ.

Asad Rauf Death: ಹೃದಯಾಘಾತದಿಂದ ಪಾಕಿಸ್ತಾನದ ಮಾಜಿ ಅಂಪೈರ್ ಅಸದ್ ರೌಫ್ ನಿಧನ
Asad Rauf
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 15, 2022 | 10:28 AM

Asad Rauf Death: ಐಸಿಸಿಯ ಎಲೈಟ್ ಪ್ಯಾನೆಲ್‌ನ ಭಾಗವಾಗಿದ್ದ ಪಾಕಿಸ್ತಾನದ ಅಂಪೈರ್ ಅಸದ್ ರೌಫ್ (66) ಹಠಾತ್ ಹೃದಯಾಘಾತದಿಂದ ಬುಧವಾರ ಲಾಹೋರ್‌ನಲ್ಲಿ ನಿಧನರಾಗಿದ್ದಾರೆ. ನಿಧನದ ಸುದ್ದಿಯನ್ನು ಅವರ ಸಹೋದರ ತಾಹಿರ್ ಖಚಿತಪಡಿಸಿದ್ದು, ಹೃದಯ ಸ್ತಂಭನದಿಂದ ಸಹೋದರ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅಂಪೈರ್ ವೃತ್ತಿಯಿಂದ ನಿವೃತ್ತರಾಗಿದ್ದ ರೌಫ್ ಆ ಬಳಿಕ ಪಾಕಿಸ್ತಾನದಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಎಂದಿನಂತೆ ಬುಧವಾರ ಅಂಗಡಿ ಮುಚ್ಚಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾದರೂ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಸಹೋದರ ತಿಳಿಸಿದ್ದಾರೆ.

ಅಸದ್ ರೌಫ್ 2006 ರಿಂದ 2013 ರವರೆಗೆ ಐಸಿಸಿಯ ಎಲೈಟ್ ಅಂಪೈರ್ ಪ್ಯಾನೆಲ್‌ನ ಸದಸ್ಯರಾಗಿದ್ದರು. ಮ್ಯಾಚ್ ಫಿಕ್ಸಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್​ನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅದರಲ್ಲೂ 2013ರ ಐಪಿಎಲ್ ಬೆಟ್ಟಿಂಗ್ ಹಗರಣದಲ್ಲಿ ಪಾಕಿಸ್ತಾನದ ಅಂಪೈರ್ ಅವರನ್ನು ಮುಂಬೈ ಪೊಲೀಸರು ಔಪಚಾರಿಕವಾಗಿ ಆರೋಪಿ ಎಂದು ಗುರುತಿಸಿದ್ದರು. ಅಲ್ಲದೆ 2016 ರಲ್ಲಿ ಬಿಸಿಸಿಐ ಅಸದ್ ರೌಫ್ ತಪ್ಪಿತಸ್ಥರೆಂದು ತೀರ್ಪು ನೀಡುತ್ತಿದ್ದಂತೆ, ಅವರನ್ನು ಐದು ವರ್ಷಗಳ ಕಾಲ ಕ್ರಿಕೆಟ್‌ನಿಂದ ನಿಷೇಧಿಸಲಾಗಿತ್ತು.

ಅಂತಾರಾಷ್ಟ್ರೀಯ ಕ್ರಿಕೆಟ್‌ನ ಒಟ್ಟು 231 ಪಂದ್ಯಗಳಲ್ಲಿ ಅಸದ್ ರೌಫ್ ಅಂಪೈರಿಂಗ್ ಮಾಡಿದ್ದಾರೆ. ಇದರಲ್ಲಿ 64 ಟೆಸ್ಟ್, 28 ಟಿ20 ಮತ್ತು 139 ಏಕದಿನ ಪಂದ್ಯಗಳು ಸೇರಿವೆ. 2013 ರಲ್ಲಿ ಅಂಪೈರ್ ಫಿಕ್ಸಿಂಗ್ ಆರೋಪ ಕೇಳಿ ಬಂದ ನಂತರ ಅವರು ಮತ್ತೆ ಮೈದಾನದಲ್ಲಿ ಕಾಣಿಸಿಕೊಂಡಿರಲಿಲ್ಲ. ಇನ್ನು ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು 2016 ರಲ್ಲಿ 5 ವರ್ಷಗಳ ಕಾಲ ನಿಷೇಧಿಸಲಾಗಿತ್ತು.

ವಿಶೇಷ ಎಂದರೆ ಅಸದ್ ರೌಫ್ ಪ್ರಥಮ ದರ್ಜೆ ಕ್ರಿಕೆಟಿಗರಾಗಿದ್ದರು. 71 ಪ್ರಥಮ ದರ್ಜೆ ಮತ್ತು 40 ಲಿಸ್ಟ್ ಎ ಪಂದ್ಯಗಳನ್ನಾಡಿದ್ದರು. ಈ ವೇಳೆ 3 ಶತಕ ಹಾಗೂ 26 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದರು. ಈ ಮೂಲಕ ಪ್ರಥಮ ದರ್ಜೆಯಲ್ಲಿ 4 ಸಾವಿರಕ್ಕೂ ಅಧಿಕ ರನ್​ ಕಲೆಹಾಕಿದ್ದರು.

ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್