AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಿಂದ ನಾಲ್ವರು ಔಟ್: ಶ್ರೇಯಸ್ ಅಯ್ಯರ್ ನಾಯಕ!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಐದು ಪಂದ್ಯಗಳ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯವು ಮಳೆಯ ಕಾರಣದಿಂದಾಗಿ ರದ್ದಾಗಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯಕ್ಕಾಗಿ ಸಜ್ಜಾಗುತ್ತಿವೆ. ಅದಕ್ಕೂ ಮುನ್ನವೇ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಟೀಮ್ ಇಂಡಿಯಾದಿಂದ ನಾಲ್ವರು ಔಟ್: ಶ್ರೇಯಸ್ ಅಯ್ಯರ್ ನಾಯಕ!
Team India Image Credit source: GettyImages
ಝಾಹಿರ್ ಯೂಸುಫ್
|

Updated on: Nov 11, 2026 | 2:02 PM

Share

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪರಿಷ್ಕೃತ ತಂಡವನ್ನು ಪ್ರಕಟಿಸಿದೆ. ಮುಂಬರುವ ಮಹತ್ವದ ಟೆಸ್ಟ್ ಸರಣಿಯ ಸಿದ್ಧತೆಯ ದೃಷ್ಟಿಯಿಂದ ಭಾರತ ಏಕದಿನ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಮೊದಲ ಮೂರು ಪಂದ್ಯಗಳ ತಂಡದಲ್ಲಿದ್ದ ನಾಲ್ವರು ಆಟಗಾರರು ಕೊನೆಯ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.

ತಂಡದಿಂದ ಹೊರಬಿದ್ದ ನಾಲ್ವರು ಯಾರು?

ನವೆಂಬರ್ 19ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯ ಅಭ್ಯಾಸಕ್ಕಾಗಿ ಕೆಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಅದರಂತೆ ಮೊದಲ 3 ಪಂದ್ಯಗಳ ಸ್ಕ್ವಾಡ್‌ನಲ್ಲಿದ್ದ ಈ ನಾಲ್ವರು ಅಂತಿಮ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅವರೆಂದರೆ…

  1. ಶುಭ್​ಮನ್ ಗಿಲ್ (ನಾಯಕ)
  2.  ಕೆ.ಎಲ್. ರಾಹುಲ್ (ವಿಕೆಟ್ ಕೀಪರ್)
  3.  ಅನ್ಶುಲ್ ಕಂಬೋಜ್ (ವೇಗದ ಬೌಲರ್)
  4.  ಪ್ರಸಿದ್ಧ್ ಕೃಷ್ಣ (ವೇಗದ ಬೌಲರ್)

ಟೀಮ್ ಇಂಡಿಯಾದಿಂದ ಹೊರಗುಳಿದಿರುವ ನಾಲ್ವರು ಆಟಗಾರರ ಸ್ಥಾನಕ್ಕೆ ಯುವ ಪ್ರತಿಭೆಗಳಿಗೆ ಮಣೆ ಹಾಕಲಾಗಿದೆ. ಅದರಂತೆ ತಿಲಕ್ ವರ್ಮಾ, ವಿಕೆಟ್ ಕೀಪರ್ ಕುಮಾರ್ ಕುಶಾಗ್ರ, ವೇಗಿ ಯಶ್ ಠಾಕೂರ್ ಹಾಗೂ ಆಖಿಬ್ ನಬಿ ಅಂತಿಮ ಎರಡು ಪಂದ್ಯಗಳ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಶ್ರೇಯಸ್ ಅಯ್ಯರ್ ಕ್ಯಾಪ್ಟನ್:

ನಾಯಕ ಶುಭ್​ಮನ್ ಗಿಲ್ ಅನುಪಸ್ಥಿತಿಯಲ್ಲಿ ಮಧ್ಯಮ ಕ್ರಮಾಂಕದ ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇವರಿಗೆ ಸಾಥ್ ನೀಡಲು ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.

ಭಾರತ ಏಕದಿನ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್ (ಉಪ ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಯಶ್ ಠಾಕೂರ್, ಗುರ್ನೂರ್ ಬ್ರಾರ್ ಮತ್ತು ಆಖಿಬ್ ನಬಿ.

ಕೊನೆಯ ಎರಡು ಪಂದ್ಯಗಳು ಯಾವಾಗ?

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳು ನವೆಂಬರ್ 13 ಮತ್ತು ನವೆಂಬರ್ 15, 2026 ರಂದು ನಡೆಯಲಿವೆ. ಈ ಎರಡೂ ಪಂದ್ಯಗಳಿಗೆ ಮೌಂಟ್ ಮೌಂಗನುಯಿಯ ಬೇ ಓವಲ್  ಮೈದಾನ ಆತಿಥ್ಯ ವಹಿಸಲಿದೆ.

ಇದನ್ನೂ ಓದಿ: ಬರೋಬ್ಬರಿ 487 ರನ್… ಇಂಗ್ಲೆಂಡ್ ದಾಂಡಿಗರ ಆರ್ಭಟಕ್ಕೆ ವಿಶ್ವ ದಾಖಲೆ ಉಡೀಸ್!

ಈ ಎರಡೂ ಪಂದ್ಯಗಳು ಸರಣಿ ನಿರ್ಣಾಯಕವಾಗಿವೆ. ಅಂದರೆ, ಮೊದಲ ಮೂರು ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ನಾಲ್ಕನೇ ಪಂದ್ಯದಲ್ಲಿ ಜಯ ಸಾಧಿಸಿದರೆ ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಅತ್ತ ಸರಣಿಯನ್ನು ಡ್ರಾನಲ್ಲಿ ಕೊನೆಗೊಳಿಸಬೇಕಿದ್ದರೆ ಅಂತಿಮ ಎರಡೂ ಪಂದ್ಯಗಳಲ್ಲಿ ನ್ಯೂಝಿಲೆಂಡ್ ಜಯಗಳಿಸಲೇಬೇಕು. ಹೀಗಾಗಿ ಕೊನೆಯ ಎರಡು ಪಂದ್ಯಗಳಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್
ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ ಮಾಡಿಸಿದ ವಿಜಯಲಕ್ಷ್ಮಿ ದರ್ಶನ್: ವಿಡಿಯೋ
ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ ಮಾಡಿಸಿದ ವಿಜಯಲಕ್ಷ್ಮಿ ದರ್ಶನ್: ವಿಡಿಯೋ
ಇಲ್ಲಿ ಪರಸ್ಪರ ಸಗಣಿ ಗಟ್ಟಿ ಎಸೆದುಕೊಳ್ಳೋದೇ ಹಬ್ಬದ ಮಜಾ!
ಇಲ್ಲಿ ಪರಸ್ಪರ ಸಗಣಿ ಗಟ್ಟಿ ಎಸೆದುಕೊಳ್ಳೋದೇ ಹಬ್ಬದ ಮಜಾ!
ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚುವ ಬಗ್ಗೆ ದೇಗುಲದ ಅರ್ಚಕ ಹೇಳಿದ್ದೇನು?
ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚುವ ಬಗ್ಗೆ ದೇಗುಲದ ಅರ್ಚಕ ಹೇಳಿದ್ದೇನು?
ಪಟಾಕಿ ಶಬ್ದದಿಂದ ಹೃದಯಾಘಾತವಾಗಿ 6 ವರ್ಷದ ಡಾಬರ್​ಮನ್​​​​ ನಾಯಿ ಸಾವು
ಪಟಾಕಿ ಶಬ್ದದಿಂದ ಹೃದಯಾಘಾತವಾಗಿ 6 ವರ್ಷದ ಡಾಬರ್​ಮನ್​​​​ ನಾಯಿ ಸಾವು
ಅಂಗವಿಕಲನಂತೆ ನಟಿಸಿ ಭಿಕ್ಷಾಟನೆ ; ಯುವಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು
ಅಂಗವಿಕಲನಂತೆ ನಟಿಸಿ ಭಿಕ್ಷಾಟನೆ ; ಯುವಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು
ಹಾಸನಾಂಬೆ ದರ್ಶನಕ್ಕೆ ಇಂದು ತೆರೆ: ಕೊನೆಯ ದಿನದ ದರ್ಶನಕ್ಕೆ ಭಕ್ತರ ಸಾಲು
ಹಾಸನಾಂಬೆ ದರ್ಶನಕ್ಕೆ ಇಂದು ತೆರೆ: ಕೊನೆಯ ದಿನದ ದರ್ಶನಕ್ಕೆ ಭಕ್ತರ ಸಾಲು
ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮಂಜು-ಯಶಸ್ ಕಿರಿಕ್; ಮರುಕಳಿಸುತ್ತಾ ಇತಿಹಾಸ?
ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮಂಜು-ಯಶಸ್ ಕಿರಿಕ್; ಮರುಕಳಿಸುತ್ತಾ ಇತಿಹಾಸ?