Har Ghar Tiramga Anthem: ಹರ್ ಘರ್ ತಿರಂಗಾ ಸ್ಫೂರ್ತಿ ಗೀತೆಯಲ್ಲಿ ಕನ್ನಡ ಕಲರವ; ಮನೆ ಮನೆಗೂ ತ್ರಿವರ್ಣ ಎಂದ ರಾಹುಲ್
Har Ghar Tiramga Anthem: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ಆಗಸ್ಟ್ 15ಕ್ಕೆ 75 ವರ್ಷಗಳು ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದಿಕ ಅಮೃತ ಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ವಿಶೇಷ ಅಭಿಯಾನ ನಡೆಸುತ್ತಿದೆ. ಆಗಸ್ಟ್ 13 ರಿಂದ 15 ರವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Azadi Ka Amrit Mahotsav) ದೇಶಾದ್ಯಂತ ಅದ್ಧೂರಿಯಾಗಿ ಆಚರಿಸಲು ಅದ್ಧೂರಿ ವ್ಯವಸ್ಥೆ ಮಾಡಲಾಗುತ್ತಿದೆ. ಹರ್ ಘರ್ ತಿರಂಗಾ (Har Ghar Tiranga) ಎಂಬ ಅಭಿಯಾನದಡಿಯಲ್ಲಿ ಪ್ರತಿ ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸುವಂತೆ ಪ್ರಧಾನಿ ಮೋದಿ (Prime Minister Modi) ಕರೆ ನೀಡಿರುವುದು ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಈ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೇಂದ್ರ ಸಂಸ್ಕೃತಿ ಇಲಾಖೆಯು ವಿಸ್ತೃತ ಯೋಜನೆಗಳನ್ನು ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗಷ್ಟೇ ಇದಕ್ಕೆ ಸಂಬಂಧಿಸಿದ ಹಾಡೊಂದು ಬಿಡುಗಡೆಯಾಗಿದೆ.
ಹರ್ ಘರ್ ತಿರಂಗಾ ಎಂಬ ಶೀರ್ಷಿಕೆಯ ಈ ಹಾಡನ್ನು ಬಿಡುಗಡೆ ಮಾಡಲಾಗಿದ್ದು, ಈ ಹಾಡಿನಲ್ಲಿ ಪ್ರಧಾನಿ ಮೋದಿ ಜೊತೆಗೆ ಸಿನಿಮಾ ನಟರಾದ ಅಮಿತಾಭ್ ಬಚ್ಚನ್, ಅಕ್ಷಯ್ ಕುಮಾರ್, ಪ್ರಭಾಸ್, ಅಜಯ್ ದೇವಗನ್, ಕೀರ್ತಿ ಸುರೇಶ್, ಅನುಷ್ಕಾ ಶರ್ಮಾ, ಕ್ರೀಡಾಪಟುಗಳಾದ ಕಪಿಲ್ ದೇವ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾರ್ದಿಕ್ ಪಾಂಡ್ಯ, ಪಿವಿ ಸಿಂಧು, ಇನ್ನೂ ಅನೇಕರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆಯಂತೆ. ಭಾರತದ ಎಲ್ಲಾ ಭಾಗಗಳನ್ನು ಒಂದುಗೂಡಿಸಲು ಈ ಹಾಡನ್ನು ರಚಿಸಲಾಗಿದೆ.
ಹರ್ ಘರ್ ತಿರಂಗಾ ಹಾಡಿನಲ್ಲಿ ಕನ್ನಡ ಕಲರವ
ಕೇಂದ್ರ ಸಂಸ್ಕೃತಿ ಇಲಾಖೆ ಬಿಡುಗಡೆ ಮಾಡಿರುವ ಈ ಹಾಡಿನಲ್ಲಿ ಕೆಲವು ಖ್ಯಾತ ಕ್ರಿಕೆಟಿಗರು ತಮ್ಮ ಮಾತೃಭಾಷೆಯಲ್ಲಿ ಬರುವ ಸಾಲುಗಳಿಗೆ ಧನಿಗೂಡಿಸಿದ್ದಾರೆ. ಅವರಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕೂಡ ಸೇರಿದ್ದು, ಕನ್ನಡದಲ್ಲಿ ಬರುವ ಮನೆ ಮನೆಗೂ ತಿರಂಗ ಎಂಬ ಸಾಲುಗಳಿಗೆ ಧನಿಗೂಡಿಸುವದರೊಂದಿಗೆ ನಟಿಸಿ ಜೀವತುಂಬಿದ್ದಾರೆ.
Har Ghar Tiranga…Ghar Ghar Tiranga… Celebrate our Tiranga with this melodious salute to our Tricolour , the symbol of our collective Pride & Unity as our Nation completes 75 years of independence ??#HarGharTiranga #AmritMahotsav pic.twitter.com/ECISkROddI
— Ministry of Culture (@MinOfCultureGoI) August 3, 2022
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು ಆಗಸ್ಟ್ 15ಕ್ಕೆ 75 ವರ್ಷಗಳು ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದಿಕ ಅಮೃತ ಮಹೋತ್ಸವ ಕಾರ್ಯಕ್ರಮದ ಹೆಸರಿನಲ್ಲಿ ವಿಶೇಷ ಅಭಿಯಾನ ನಡೆಸುತ್ತಿದೆ. ಆಗಸ್ಟ್ 13 ರಿಂದ 15 ರವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಕೇಂದ್ರ ಸಂಸ್ಕೃತಿ ಇಲಾಖೆ ಬಿಡುಗಡೆ ಮಾಡಿರುವ ಈ ವಿಡಿಯೋದಲ್ಲಿ ಹಿರಿಯ ನಟ ಅಮಿತಾಬ್ ಬಚ್ಚನ್ ಧ್ವನಿ ನೀಡಿದ್ದಾರೆ ಮತ್ತು ಅನುಷ್ಕಾ ಶರ್ಮಾ, ಅವರ ಪತಿ ವಿರಾಟ್ ಕೊಹ್ಲಿ, ದಕ್ಷಿಣದ ಸ್ಟಾರ್ ಪ್ರಬಾಸ್ ಕೂಡ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಗೀತೆಯ ವೀಡಿಯೊದಲ್ಲಿ ಕಾಣಿಸಿಕೊಂಡಿರುವ ದಕ್ಷಿಣ ಭಾರತದ ಏಕೈಕ ಪುರುಷ ನಟ ಪ್ರಭಾಸ್. ವೀಡಿಯೊದ ಕೊನೆಯಲ್ಲಿ, ಪ್ರಧಾನಿ ಮೋದಿ ತಮ್ಮ ವರ್ಚಸ್ವಿ ವ್ಯಕ್ತಿತ್ವದಿಂದ ಅದನ್ನು ಅಲಂಕರಿಸಿದ್ದಾರೆ.
‘ಹರ್ ಘರ್ ತಿರಂಗಾ’ ಎಂಬುದು ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ತಿರಂಗವನ್ನು ಮನೆಗೆ ತರಲು ಮತ್ತು ಭಾರತದ 75 ನೇ ಸ್ವಾತಂತ್ರ್ಯದ ವರ್ಷವನ್ನು ಸ್ಮರಣೀಯವಾಗಿಸುವಂತೆ ಜನರನ್ನು ಪ್ರೋತ್ಸಾಹಿಸಲು ಒಂದು ಅಭಿಯಾನವಾಗಿದೆ. ಆಗಸ್ಟ್ 2 ರಿಂದ ಆಗಸ್ಟ್ 15 ರ ನಡುವೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಅಥವಾ ಪ್ರದರ್ಶಿಸುವ ಮೂಲಕ ಮತ್ತು ನಮ್ಮ ರಾಷ್ಟ್ರಧ್ವಜವನ್ನು ಪ್ರತಿಯೊಬ್ಬರು ತಮ್ಮ ತಮ್ಮ ವೈಯಕ್ತಿಕ ಸೋಶಿಯಲ್ ಮೀಡಿಯಾ ಡಿಪಿಯಲ್ಲಿ ಹಾಕುವ ಮೂಲಕ ‘ಹರ್ ಘರ್ ತಿರಂಗ’ ಅಭಿಯಾನವನ್ನು ಸಾಮೂಹಿಕ ಆಂದೋಲನವಾಗಿ ಪರಿವರ್ತಿಸುವಂತೆ ಪಿಎಂ ಮೋದಿ ಭಾನುವಾರ ಎಲ್ಲಾ ನಾಗರಿಕರಿಗೆ ಕರೆ ನೀಡಿದ್ದರು.
Published On - 4:32 pm, Thu, 4 August 22