T20 World Cup: ಧೋನಿ ಟು ಬಟ್ಲರ್; ಟಿ20 ವಿಶ್ವಕಪ್ ಗೆದ್ದಿರುವ 7 ಚಾಂಪಿಯನ್ ತಂಡಗಳ ನಾಯಕರಿವರು

T20 World Cup: 2007 ರಿಂದ ಇಲ್ಲಿಯವರೆಗೆ, ಟಿ20 ಮಾದರಿಯಲ್ಲಿ ಎರಡು ಬಾರಿ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗಿದೆ.

T20 World Cup: ಧೋನಿ ಟು ಬಟ್ಲರ್; ಟಿ20 ವಿಶ್ವಕಪ್ ಗೆದ್ದಿರುವ 7 ಚಾಂಪಿಯನ್ ತಂಡಗಳ ನಾಯಕರಿವರು
T20 World Cup winners list
Follow us
TV9 Web
| Updated By: ಪೃಥ್ವಿಶಂಕರ

Updated on:Nov 13, 2022 | 7:30 PM

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಪಾಕಿಸ್ತಾನ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ವಿಶ್ವಕಪ್ (T20 World Cup 2022) ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಜೋಸ್ ಬಟ್ಲರ್ ನಾಯಕತ್ವದ ಈ ತಂಡವು ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. 2016ರಲ್ಲಿ ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್‌ನಿಂದ ಗೆಲುವನ್ನು ಕಸಿದುಕೊಂಡಿದ್ದ ಬೆನ್ ಸ್ಟೋಕ್ಸ್ (Ben Stokes), ಇಂದು ತನ್ನ ಬ್ಯಾಟಿಂಗ್ ಬಲದಿಂದ ತಂಡವನ್ನು ಚಾಂಪಿಯನ್ ಮಾಡಿದರು. ಈ ಗೆಲುವಿನೊಂದಿಗೆ ಜೋಸ್ ಬಟ್ಲರ್ ವಿಶ್ವ ಚಾಂಪಿಯನ್ ನಾಯಕರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

2007 ರಿಂದ ಇಲ್ಲಿಯವರೆಗೆ, ಟಿ20 ಮಾದರಿಯಲ್ಲಿ ಎರಡು ಬಾರಿ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗಿದೆ. 2010ರಲ್ಲಿ ಪಾಲ್ ಕಾಲಿಂಗ್‌ವುಡ್‌ ನಾಯಕತ್ವದಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ವಿಶ್ವಕಪ್ ಗೆದ್ದುಕೊಂಡಿತ್ತು. ಈಗ ಜೋಸ್ ಬಟ್ಲರ್ ನಾಯಕತ್ವದಲ್ಲಿ ಆಂಗ್ಲ ಪಡೆ ವಿಶ್ವಕಪ್ ಎತ್ತಿಹಿಡಿದಿದೆ. ಮಹೇಂದ್ರ ಸಿಂಗ್ ಧೋನಿ ನಂತರ, ಬಟ್ಲರ್ ಅವರು ತಮ್ಮ ಮೊದಲ ನಾಯಕತ್ವದಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಎರಡನೇ ನಾಯಕ ಎನಿಸಿಕೊಂಡಿದ್ದಾರೆ.

ಟಿ20 ವಿಶ್ವಕಪ್‌ನ 7 ಚಾಂಪಿಯನ್ ತಂಡಗಳ ನಾಯಕರ ಪಟ್ಟಿ

  1. 2007 ರಲ್ಲಿ ಐಸಿಸಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಯೋಜನೆ ಮಾಡಿತ್ತು. ಆ ವರ್ಷ ಭಾರತ ತಂಡದ ನಾಯಕತ್ವವನ್ನು ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿಗೆ ನೀಡಲಾಗಿತ್ತು. ಎಲ್ಲರನ್ನೂ ಅಚ್ಚರಿಗೊಳಿಸುವಂತೆ ಭಾರತ ತಂಡ ಯಾವುದೇ ದೊಡ್ಡ ಹೆಸರುಗಳಿಲ್ಲದೆ ವಿಶ್ವಕಪ್ ಗೆದ್ದುಕೊಂಡಿತು. ಇಲ್ಲಿಂದ ಧೋನಿ ನಾಯಕತ್ವದಲ್ಲಿ ಭಾರತದ ಹೊಸ ಯುಗ ಪ್ರಾರಂಭವಾಯಿತು.
  2. 2007 ರಲ್ಲಿ ಪಾಕಿಸ್ತಾನ ತಂಡವು ಭಾರತದ ವಿರುದ್ಧ ಫೈನಲ್‌ನಲ್ಲಿ ಸೋತಿತ್ತು. ಆದಾಗ್ಯೂ, ಶಾಹೀನ್ ಅಫ್ರಿದಿ ನಾಯಕತ್ವದಲ್ಲಿ, ಈ ತಂಡ ಮುಂದಿನ ವರ್ಷದಲ್ಲಿ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಈ ಸಾಧನೆಯನ್ನು ಮಾಡಿತು.
  3. 2010 ರಲ್ಲಿ ಇಂಗ್ಲೆಂಡ್ ತಂಡ ಮೊದಲ ಬಾರಿಗೆ ಚಾಂಪಿಯನ್ ಆಯಿತು. ಈ ತಂಡದ ಕಮಾಂಡ್ ಅನ್ನು ಪಾಲ್ ಕಾಲಿಂಗ್‌ವುಡ್‌ ವಹಿಸಿಕೊಂಡಿದ್ದರು. ಇಡೀ ಪಂದ್ಯಾವಳಿಯಲ್ಲಿ ಕಾಲಿಂಗ್‌ವುಡ್​ಗೆ ಬ್ಯಾಟಿಂಗ್ ಅಥವಾ ಬೌಲ್ ಮಾಡುವ ಅವಕಾಶವೇ ಸಿಗಲಿಲ್ಲ. ಆದರೆ ಇಂಗ್ಲೆಂಡ್ ಫೈನಲ್​ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ತನ್ನ ಮೊದಲ ವಿಶ್ವಕಪ್ ಗೆದ್ದುಕೊಂಡಿತ್ತು.
  4. 2012 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವಲ್ಲಿ ವೆಸ್ಟ್ ಇಂಡೀಸ್ ತಂಡ ಯಶಸ್ವಿಯಾಗಿತ್ತು. ಡ್ಯಾರೆನ್ ಸಾಮಿ ನಾಯಕತ್ವದಲ್ಲಿ, ತಂಡ ಪಂದ್ಯಾವಳಿಯುದ್ದಕ್ಕೂ ಉತ್ತಮ ಆಟವನ್ನು ಪ್ರದರ್ಶಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದು 2004 ರ ನಂತರ ವೆಸ್ಟ್ ಇಂಡೀಸ್‌ ತಂಡದ ಮೊದಲ ಐಸಿಸಿ ಪ್ರಶಸ್ತಿಯಾಗಿತ್ತು.
  5. ಸತತ ಎರಡು ಫೈನಲ್‌ಗಳಲ್ಲಿ ಸೋತ ಶ್ರೀಲಂಕಾ 2014ರಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಾಲ್ ತಂಡದ ಸಾರಥ್ಯ ವಹಿಸಿದ್ದರೂ, ವೇಗದ ಬೌಲರ್ ಲಸಿತ್ ಮಾಲಿಂಗ ತಂಡದ ಜವಬ್ದಾರಿ ನಿರ್ವಹಿಸಿದ್ದರು. ಭಾರತದ ವಿರುದ್ಧದ ಪ್ರಶಸ್ತಿ ಸಮರದಲ್ಲಿ, ಮಾಲಿಂಗ ಈ ಜವಾಬ್ದಾರಿಯನ್ನು ಹೊತ್ತುಕೊಂಡು ತಮ್ಮ ತಂಡವನ್ನು ಚಾಂಪಿಯನ್ ಮಾಡಿದ್ದರು.
  6. 2016 ರಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಮಾಡುವ ಮೂಲಕ ಡ್ಯಾರೆನ್ ಸಾಮಿ ಇತಿಹಾಸ ಸೃಷ್ಟಿಸಿದರು. ಇದರೊಂದಿಗೆ ವೆಸ್ಟ್ ಇಂಡೀಸ್ ಎರಡು ಬಾರಿ ಪ್ರಶಸ್ತಿ ಗೆದ್ದ ಮೊದಲ ತಂಡವಾಯಿತು.
  7. 2016 ರ ನಂತರ, ಮುಂದಿನ ಟಿ20 ವಿಶ್ವಕಪ್ 2021 ರಲ್ಲಿ ನಡೆಯಿತು. ಇಲ್ಲಿ ಅನೇಕ ತಂಡಗಳು ವಿಜಯಕ್ಕಾಗಿ ಸ್ಪರ್ಧಿಗಳಾಗಿದ್ದವು ಆದರೆ ಆರೋನ್ ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿತ್ತು.

Published On - 7:30 pm, Sun, 13 November 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್