IND vs AUS: ಭಾರತದಲ್ಲಿ ಸೂರ್ಯ ಉದಯಿಸುವುದಕ್ಕೂ ಮುನ್ನವೇ ಆರಂಭವಾಗಲಿದೆ ಗಾಬಾ ಟೆಸ್ಟ್
India vs Australia 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ಡಿಸೆಂಬರ್ 14 ರಿಂದ 18 ರವರೆಗೆ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 5:50ಕ್ಕೆ ಪಂದ್ಯ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರ ಮತ್ತು ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪಲು ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು 295 ರನ್ ಗಳಿಂದ ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ಕಾಂಗರೂ ತಂಡ ಪ್ರತಿದಾಳಿ ನಡೆಸಿ ಭಾರತವನ್ನು 10 ವಿಕೆಟ್ ಗಳಿಂದ ಸೋಲಿಸಿತು. ಈ ಮೂಲಕ ಉಭಯ ತಂಡಗಳ ನಡುವಿನ ಸರಣಿ ಸದ್ಯ 1-1ರಲ್ಲಿ ಸಮಬಲಗೊಂಡಿದೆ. ಹೀಗಾಗಿ ಗಾಬಾ ಟೆಸ್ಟ್ ಗೆಲುವಿನ ಮೇಲೆ ಉಭಯ ತಂಡಗಳು ಕಣ್ಣಿಟ್ಟಿದ್ದು, ಯಾವ ತಂಡ ಗೆಲುವು ಸಾಧಿಸುತ್ತದೋ ಆ ತಂಡ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲಿದೆ. ಅದಕ್ಕೂ ಮುನ್ನ ಬ್ರಿಸ್ಬೇನ್ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್ ಪಂದ್ಯ ಯಾವಾಗ, ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್‌ನಲ್ಲಿ ನೇರಪ್ರಸಾರ ಎಂಬುದರ ಬಗ್ಗೆ ಒಂದಿಷ್ಟು ವಿವರ ಇಲ್ಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ ಡಿಸೆಂಬರ್ 18 ರವರೆಗೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭ?
ಉಭಯ ತಂಡಗಳ ನಡುವಿನ 2ನೇ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ, ಬೆಳಿಗ್ಗೆ 9:30 ರಿಂದ ಪ್ರಾರಂಭವಾಗಿತ್ತು. ಆದರೆ ಮೂರನೇ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 5:50ಕ್ಕೆ ಆರಂಭವಾಗಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯುತ್ತದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಪ್ರಸಿದ್ಧ ಗಾಬಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ನೇರ ಪ್ರಸಾರ ಲಭ್ಯವಿರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.
ಉಭಯ ತಂಡಗಳು
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್‌ವುಡ್.
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:59 pm, Fri, 13 December 24