AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟು, ಕೊಹ್ಲಿಗೆ ಐಪಿಎಲ್ ಪಾಠ ಕಲಿಸಿದ ಗುರು ಈಗ ಪಾಕ್ ತಂಡದ ಕೋಚ್?

ಕರ್ಸ್ಟನ್ ಈ ಹಿಂದೆ ಭಾರತ ತಂಡದ ಕೋಚ್ ಆಗಿದ್ದರು. ಅವರು 2008 ರಿಂದ 2011 ರವರೆಗೆ ಈ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಅವರ ಕೋಚಿಂಗ್​ ಅಡಿಯಲ್ಲಿ ಟೀಮ್ ಇಂಡಿಯಾ ODI ವಿಶ್ವಕಪ್ ಗೆದ್ದಿದೆ.

ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟು, ಕೊಹ್ಲಿಗೆ ಐಪಿಎಲ್ ಪಾಠ ಕಲಿಸಿದ ಗುರು ಈಗ ಪಾಕ್ ತಂಡದ ಕೋಚ್?
ಪಾಕ್ ತಂಡ
TV9 Web
| Edited By: |

Updated on: Oct 28, 2021 | 3:28 PM

Share

ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಸ್ತುತ ICC T20 ವಿಶ್ವಕಪ್-2021 ನಲ್ಲಿ ಭಾಗವಹಿಸುತ್ತಿದೆ. ಭಾರತವನ್ನು ಸೋಲಿಸುವ ಮೂಲಕ ತಂಡವು ತಮ್ಮ ಅಭಿಯಾನವನ್ನು ಉತ್ತಮವಾಗಿ ಪ್ರಾರಂಭಿಸಿತು ಮತ್ತು ನಂತರ ನ್ಯೂಜಿಲೆಂಡ್ ತಂಡವನ್ನು ಸೋಲಿಸಿತು. ಇದರೊಂದಿಗೆ ಸೆಮಿಫೈನಲ್ ಹಾದಿಯನ್ನು ಸುಗಮಗೊಳಿಸಿಕೊಂಡಿದೆ. ಏತನ್ಮಧ್ಯೆ, ಈ ವಿಶ್ವಕಪ್ ನಂತರ ತಂಡದಲ್ಲಿ ಬದಲಾವಣೆಗಳನ್ನು ಕಾಣಬಹುದು. ಆಂಗ್ಲ ಪತ್ರಿಕೆ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಈ ವಿಶ್ವಕಪ್ ನಂತರ, ಪಾಕಿಸ್ತಾನ ಕ್ರಿಕೆಟ್ ತಂಡದ ಖಾಯಂ ಮುಖ್ಯ ಕೋಚ್ ದಕ್ಷಿಣ ಆಫ್ರಿಕಾದ ಗ್ಯಾರಿ ಕರ್ಸ್ಟನ್ ಆಗಿರಬಹುದು. ಪತ್ರಿಕೆಯ ವರದಿಯ ಪ್ರಕಾರ, ವಿಶ್ವಕಪ್ ನಂತರ ಕರ್ಸ್ಟನ್ ಪಾಕಿಸ್ತಾನದ ಮುಖ್ಯ ಕೋಚ್ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು.

ಕರ್ಸ್ಟನ್ ಅಲ್ಲದೆ, ವಿರಾಟ್ ಕೊಹ್ಲಿ ಅವರ ಐಪಿಎಲ್ ತಂಡದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೈಮನ್ ಕಟಿಜ್ ಮತ್ತು ಎರಡು ಬಾರಿ ಇಂಗ್ಲೆಂಡ್ ಕೋಚ್ ಪೀಟರ್ ಮೊರೇಸ್ ಅವರ ಹೆಸರುಗಳೂ ಈ ರೇಸ್‌ನಲ್ಲಿ ಸೇರಿವೆ. ಮೂಲಗಳ ಪ್ರಕಾರ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರಮೀಜ್ ರಾಜಾ ವಿದೇಶಿ ಕೋಚ್ ಹೊಂದುವ ಪರವಾಗಿದ್ದಾರೆ. ಕರ್ಸ್ಟನ್ ಈ ಹಿಂದೆ ಭಾರತ ತಂಡದ ಕೋಚ್ ಆಗಿದ್ದರು. ಅವರು 2008 ರಿಂದ 2011 ರವರೆಗೆ ಈ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಅವರ ಕೋಚಿಂಗ್​ ಅಡಿಯಲ್ಲಿ ಟೀಮ್ ಇಂಡಿಯಾ ODI ವಿಶ್ವಕಪ್ ಗೆದ್ದಿದೆ. ಜೊತೆಗೆ ಭಾರತ ತಂಡ ಟೆಸ್ಟ್​ನಲ್ಲಿ ನಂಬರ್-1 ಆಯಿತು. ಕರ್ಸ್ಟನ್ ಐಪಿಎಲ್‌ನಲ್ಲಿ ಆರ್‌ಸಿಬಿ ಜೊತೆಗೆ ಕೆಲಸ ಮಾಡಿದ್ದಾರೆ ಮತ್ತು ಆ ಸಮಯದಲ್ಲಿ ಕೊಹ್ಲಿ ತಂಡದ ನಾಯಕರಾಗಿದ್ದರು.

ಮಿಸ್ಬಾ ಅವರು ಹುದ್ದೆ ತೊರೆದಿದ್ದರು ರಾಜಾ ಅವರು ಮಂಡಳಿಗೆ ಪ್ರವೇಶಿಸಿದ ನಂತರ ಮಿಸ್ಬಾ-ಉಲ್-ಹಕ್ ವಿಶ್ವಕಪ್‌ಗೆ ಮೊದಲು ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರ ಜೊತೆಗೆ ಬೌಲಿಂಗ್ ಕೋಚ್ ವಕಾರ್ ಯೂನಿಸ್ ಕೂಡ ತಮ್ಮ ಸ್ಥಾನವನ್ನು ತೊರೆದಿದ್ದಾರೆ. ನಂತರ ತಂಡವು ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್ ಅವರನ್ನು ಕೋಚಿಂಗ್ ಸ್ಟಾಫ್‌ನಲ್ಲಿ ಸೇರಿಸಿತು. ಪ್ರಸ್ತುತ, ಪಾಕಿಸ್ತಾನದ ಮಾಜಿ ಆಫ್ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ಅವರು ತಂಡದ ಹಂಗಾಮಿ ಕೋಚ್ ಆಗಿದ್ದು, ಅವರ ಮಾರ್ಗದರ್ಶನದಲ್ಲಿ ತಂಡವು ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿದೆ. ವಿಶ್ವಕಪ್‌ನಲ್ಲಿ ಪಾಕಿಸ್ತಾನವು ಭಾರತವನ್ನು ಎಂದಿಗೂ ಸೋಲಿಸಿರಲಿಲ್ಲ, ಆದರೆ ಈ ಬಾರಿ ಬಾಬರ್ ಅಜಮ್ ನಾಯಕತ್ವದಲ್ಲಿ ತಂಡವು ಈ ಇತಿಹಾಸವನ್ನು ಬದಲಾಯಿಸಿತು.

ಏಕದಿನ ಮತ್ತು ಟಿ20 ಎರಡೂ ಮಾದರಿಗಳ ವಿಶ್ವಕಪ್‌ನಲ್ಲಿ ನಾವು ನೋಡುವುದಾದರೆ, ಈ ವರ್ಷದ ಪಂದ್ಯಕ್ಕೂ ಮೊದಲು ಎರಡೂ ತಂಡಗಳು 12 ಬಾರಿ ಮುಖಾಮುಖಿಯಾಗಿದ್ದವು ಆದರೆ ಪಾಕಿಸ್ತಾನ ಒಂದು ಬಾರಿಯೂ ಗೆದ್ದಿಲ್ಲ. 24 ಅಕ್ಟೋಬರ್ 2021 ರಂದು ಪಾಕಿಸ್ತಾನವು ಈ ಅಂಕಿಅಂಶವನ್ನು 12-1 ಕ್ಕೆ ಮಾಡಿತು. ಟಿ20 ವಿಶ್ವಕಪ್‌ನಲ್ಲಿ ಭಾರತ ಐದು ಬಾರಿ ಪಾಕಿಸ್ತಾನ ವಿರುದ್ಧ ಗೆದ್ದಿದ್ದರೆ, ಪಾಕಿಸ್ತಾನ ಒಂದು ಬಾರಿ ಗೆದ್ದಿದೆ. ಏಕದಿನದಲ್ಲಿ ಭಾರತ ಮತ್ತು ಪಾಕಿಸ್ತಾನ ವಿಶ್ವಕಪ್‌ನಲ್ಲಿ ಏಳು ಬಾರಿ ಮುಖಾಮುಖಿಯಾಗಿದ್ದು, ಭಾರತ ಏಳು ಬಾರಿ ಗೆದ್ದಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ