AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ಆತ ನಾಯಕನಾದ್ರೆ, ನಾನಿಲ್ಲ ಎಂದ ಗೌತಮ್ ಗಂಭೀರ್..!

Hardik Pandya - Suryakumar Yadav: ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 15 ಪಂದ್ಯಗಳಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು 7 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಇಲ್ಲಿ ಅನುಭವದ ವಿಷಯದಲ್ಲಿ ಹಾರ್ದಿಕ್ ಪಾಂಡ್ಯ ಮುಂದಿದ್ದರೂ, ಇದೀಗ ಗೌತಮ್ ಗಂಭೀರ್ ಅವರ ನಿಲುವಿನಿಂದಾಗಿ ಸೂರ್ಯಕುಮಾರ್ ಯಾದವ್​ಗೆ ನಾಯಕತ್ವ ಒಲಿಯುವ ಸಾಧ್ಯತೆ ಹೆಚ್ಚಿದೆ.

Gautam Gambhir: ಆತ ನಾಯಕನಾದ್ರೆ, ನಾನಿಲ್ಲ ಎಂದ ಗೌತಮ್ ಗಂಭೀರ್..!
Team India -Gautam Gambhir
ಝಾಹಿರ್ ಯೂಸುಫ್
|

Updated on:Jul 18, 2024 | 2:16 PM

Share

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಭಾರತ ಟಿ20 ತಂಡದ ಮುಂದಿನ ಯಾರು ಪ್ರಶ್ನೆಗೆ ಕೇಳಿ ಬಂದ ಉತ್ತರ ಹಾರ್ದಿಕ್ ಪಾಂಡ್ಯ. ಟಿ20 ವಿಶ್ವಕಪ್​ನಲ್ಲಿ ಉಪನಾಯಕನಾಗಿದ್ದರಿಂದ ಹಾರ್ದಿಕ್​ಗೆ ನಾಯಕತ್ವ ಒಲಿಯುವುದು ಬಹುತೇಕ ಖಚಿತವಾಗಿತ್ತು. ಆದರೆ ಕೋಚ್ ಗೌತಮ್ ಗಂಭೀರ್ ಎಂಟ್ರಿಯೊಂದಿಗೆ ಎಲ್ಲವೂ ಬದಲಾಗಿದೆ.

ನಾಯಕನ ಸ್ಥಾನಕ್ಕೆ ಈವರೆಗೆ ಕೇಳಿ ಬರದಿದ್ದ ಸೂರ್ಯಕುಮಾರ್ ಹೆಸರು ಮುಂಚೂಣಿಗೆ ಬಂದಿದೆ. ಇದಕ್ಕೆ ಮುಖ್ಯ ಕಾರಣ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ತೆರೆಮರೆಯ ಶಿಫಾರಸ್ಸು ಎನ್ನಲಾಗುತ್ತಿದೆ. ಏಕೆಂದರೆ ಆಯ್ಕೆ ಸಮಿತಿ ಸದಸ್ಯರು ಹಾರ್ದಿಕ್ ಪಾಂಡ್ಯ ಅವರನ್ನೇ ನಾಯಕರನ್ನಾಗಿ ಮಾಡಲು ತುದಿಗಾಲಲ್ಲಿ ನಿಂತಿದ್ದರು.

ಆದರೆ  ನೂತನ ಕೋಚ್ ಗೌತಮ್ ಗಂಭೀರ್ ತಮ್ಮ ಅಭಿಪ್ರಾಯಗಳಲ್ಲಿ ಕೆಲ ಮುಖ್ಯ ವಿಷಯಗಳನ್ನು ಆಯ್ಕೆ ಸಮಿತಿಯ ಮುಂದಿಟ್ಟಿದ್ದಾರೆ. ಈ ಮುಖ್ಯ ವಿಷಯಗಳಲ್ಲಿ ಪಾಂಡ್ಯ ಅವರ ಫಿಟ್​ನೆಸ್ ಸಮಸ್ಯೆ ಕೂಡ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪರ ಖಾಯಂ ಆಗಿ ಕಾಣಿಸಿಕೊಳ್ಳುವ ಆಟಗಾರನಿಗೆ ನಾಯಕತ್ವ ನೀಡುವಂತೆ ಗಂಭೀರ್ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಚರ್ಚೆಯ ನಡುವೆ ಗೌತಮ್ ಗಂಭೀರ್ ಎಲ್ಲಿಯೂ ಸೂರ್ಯಕುಮಾರ್ ಯಾದವ್​ಗೆ ನಾಯಕತ್ವ ನೀಡುವಂತೆ ಬೇಡಿಕೆಯಿಟ್ಟಿಲ್ಲ. ಬದಲಾಗಿ ಹಾರ್ದಿಕ್ ಪಾಂಡ್ಯ ನಾಯಕನಾದರೆ, ಅವರೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂಬುದನ್ನು ಗಂಭೀರ್ ಖಂಡತುಂಡವಾಗಿ ಹೇಳಿದ್ದಾರೆ.

ಇದೇ ಕಾರಣದಿಂದಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಟೀಮ್ ಇಂಡಿಯಾ ಟಿ20 ತಂಡದ ನಾಯಕನಾಗಿ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿದೆ ಎಂದು ವರದಿಗಳು ಹೇಳಿವೆ.

ಭಾರತ ತಂಡದ ನಾಯಕನ ನೇಮಕದಲ್ಲಾದ ಕೊನೆಯ ಕ್ಷಣದ ಬದಲಾವಣೆಯ ಬಗ್ಗೆ ಗೌತಮ್ ಗಂಭೀರ್ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಹಾರ್ದಿಕ್ ಪಾಂಡ್ಯ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇದೇ ವೇಳೆ ಪಾಂಡ್ಯಗೆ ನಾಯಕತ್ವದ ಬದಲಾವಣೆ ಏಕೆ ಎಂಬುದನ್ನು ಮನವರಿಕೆ ಮಾಡಿಕೊಡಲು ಗಂಭೀರ್ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಆಯ್ಕೆಯಾಗುವುದು ಬಹುತೇಕ ಖಚಿತ. ಅಲ್ಲದೆ ಏಕದಿನ ಮತ್ತು ಟೆಸ್ಟ್ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ.

Published On - 2:13 pm, Thu, 18 July 24

Follow Us
ಪಂಚಮಸಾಲಿ ಪೀಠದ ಲೆಕ್ಕ ಕೊಡುವ ವೇಳೆ ಉಮಾಪತಿಗೆ ಸೋಮಣ್ಣ ಕರೆ
ಪಂಚಮಸಾಲಿ ಪೀಠದ ಲೆಕ್ಕ ಕೊಡುವ ವೇಳೆ ಉಮಾಪತಿಗೆ ಸೋಮಣ್ಣ ಕರೆ
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!