ಆಸ್ಟ್ರೇಲಿಯಾಗೆ ತೆರಳಿದ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಡಿಸೆಂಬರ್ 6 ರಿಂದ ಶುರುವಾಗಲಿದೆ. ಶುಕ್ರವಾರದಿಂದ ಆರಂಭವಾಗಲಿರುವ ಈ ಪಂದ್ಯವು ಹೊನಲು ಬೆಳಕಿನ ಟೆಸ್ಟ್ ಮ್ಯಾಚ್ ಎಂಬುದು ವಿಶೇಷ.
ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಮಂಗಳವಾರ (ಡಿ.3) ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಪರ್ತ್ ಟೆಸ್ಟ್ ಪಂದ್ಯದ ಬಳಿಕ ವೈಯುಕ್ತಿಕ ಕಾರಣಗಳಿಂದಾಗಿ ಗಂಭೀರ್ ಅವರು ಭಾರತಕ್ಕೆ ವಾಪಾಸ್ಸಾಗಿದ್ದರು. ಇದೀಗ ಆಸ್ಟ್ರೇಲಿಯಾಗೆ ತೆರಳಿರುವ ಗಂಭೀರ್ ಮಂಗಳವಾರ ಅಡಿಲೇಡ್ನಲ್ಲಿ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಡಿಸೆಂಬರ್ 6 ರಿಂದ ಶುರುವಾಗಲಿದೆ. ಶುಕ್ರವಾರದಿಂದ ಆರಂಭವಾಗಲಿರುವ ಈ ಪಂದ್ಯವು ಹೊನಲು ಬೆಳಕಿನ ಟೆಸ್ಟ್ ಮ್ಯಾಚ್ ಎಂಬುದು ವಿಶೇಷ.
ಅದರಲ್ಲೂ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ನಲ್ಲಿ ಎರಡು ಬದಲಾವಣೆ ಕಂಡು ಬರಲಿದೆ. ಏಕೆಂದರೆ ಪರ್ತ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಭಾರತ ತಂಡದ ಆಡುವ ಬಳಗದಲ್ಲಿ ಎರಡು ಬದಲಾವಣೆ ನಿರೀಕ್ಷಿಸಬಹುದು.
ಇಂದು (ಡಿ.3) ಭಾರತ ತಂಡವನ್ನು ಕೂಡಿಕೊಳ್ಳಲಿರುವ ಗಂಭಿರ್ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಚರ್ಚಿಸಿ ಪ್ಲೇಯಿಂಗ್ ಇಲೆವೆನ್ ಅಂತ್ಯಗೊಳಿಸಲಿದ್ದಾರೆ. ಅದರಂತೆ ದೇವದತ್ ಪಡಿಕ್ಕಲ್ ಜೊತೆ ಆಡುವ ಬಳಗದಿಂದ ಹೊರಬೀಳುವ ಮತ್ತೋರ್ವ ಆಟಗಾರ ಯಾರೆಂಬುದು ಇಂದು ನಿರ್ಧಾರವಾಗಲಿದೆ.
1-0 ಮುನ್ನಡೆ:
ಬಾರ್ಡರ್ – ಗವಾಸ್ಕರ್ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಪರ್ತ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಪರಾಕ್ರಮ ಮೆರೆದ ಟೀಮ್ ಇಂಡಿಯಾ ಬೌಲರ್‌ಗಳು ಭಾರತ ತಂಡಕ್ಕೆ 295 ರನ್ ಗಳ ಭರ್ಜರಿ ಜಯ ತಂದು ಕೊಟ್ಟಿದ್ದರು.
ಇದನ್ನೂ ಓದಿ: IPL 2025: ಐಪಿಎಲ್ ಅಖಾಡದಲ್ಲಿ 13 ಕನ್ನಡಿಗರು
ಇದೀಗ ಉಭಯ ತಂಡಗಳು ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದೆ. ಈ ಪಂದ್ಯದಲ್ಲೂ ಗೆಲ್ಲುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸುವ ಇರಾದೆಯಲ್ಲಿದೆ. ಅತ್ತ ಆಸೀಸ್ ಪಡೆ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಹೀಗಾಗಿ ಅಡಿಲೇಡ್ ಓವಲ್ ಮೈದಾನದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:
2ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ (D/N) | ಶುಕ್ರವಾರ, 6 ಡಿಸೆಂಬರ್ 2024 | 9:30 AM | ಅಡಿಲೇಡ್ |
3ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ | ಶನಿವಾರ, 14 ಡಿಸೆಂಬರ್ 2024 | 5:50 AM | ಬ್ರಿಸ್ಬೇನ್ |
4ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ | ಗುರುವಾರ, 26 ಡಿಸೆಂಬರ್ 2024 | 5 AM | ಮೆಲ್ಬೋರ್ನ್ |
5ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ | ಶುಕ್ರವಾರ, 3 ಜನವರಿ 2025 | 5 AM | ಸಿಡ್ನಿ |