ಗೌತಮ್ ಗಂಭೀರ್ ಎಂಟ್ರಿ: ರೋಹಿತ್ ಶರ್ಮಾಗೆ ಗಡುವು ಫಿಕ್ಸ್, ವಿರಾಟ್ ಕೊಹ್ಲಿ ಇನ್ನೆಷ್ಟು ವರ್ಷ?

Virat Kohli and Rohit Sharma: ಟೀಮ್ ಇಂಡಿಯಾದ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇನ್ಮುಂದೆ ಏಕದಿನ ಮತ್ತು ಟೆಸ್ಟ್ ತಂಡಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿರುವ ರೋಹಿತ್ ಶರ್ಮಾ ನಿವೃತ್ತಿಗೆ ಗಡುವು ವಿಧಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಹಾಗೆಯೇ ವಿರಾಟ್ ಕೊಹ್ಲಿ ಕೂಡ ಕೆಲ ವರ್ಷಗಳಲ್ಲಿ ವಿದಾಯ ಹೇಳುವ ಸಾಧ್ಯತೆಯಿದೆ.

ಗೌತಮ್ ಗಂಭೀರ್ ಎಂಟ್ರಿ: ರೋಹಿತ್ ಶರ್ಮಾಗೆ ಗಡುವು ಫಿಕ್ಸ್, ವಿರಾಟ್ ಕೊಹ್ಲಿ ಇನ್ನೆಷ್ಟು ವರ್ಷ?
Virat-Gautam Gambhir-RohitImage Credit source: Sportskeeda
Follow us
|

Updated on:Jul 10, 2024 | 12:20 PM

ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಿದ್ದಾರೆ. ಈ ಆಯ್ಕೆ ಬೆನ್ನಲ್ಲೇ ಭಾರತ ತಂಡದ ಇಬ್ಬರು ದಿಗ್ಗಜರ ಭವಿಷ್ಯದ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ರೋಹಿತ್ ಶರ್ಮಾ ಇನ್ನೊಂದು ವರ್ಷ ಮಾತ್ರ ಟೀಮ್ ಇಂಡಿಯಾ ಪರ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಅಂದರೆ ಗೌತಮ್ ಗಂಭೀರ್ ಅವರ ಕೋಚಿಂಗ್​ನಲ್ಲಿ ರೋಹಿತ್ ಶರ್ಮಾ 2025 ರವರೆಗೆ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಅದರಲ್ಲೂ ಮುಂದಿನ ವರ್ಷ ಜೂನ್​ ತಿಂಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸುವ ಸಾಧ್ಯತೆಯಿದೆ ಎಂದು ಕೆಲ ವರದಿಗಳು ತಿಳಿಸಿವೆ.

ಇದೇ ಕಾರಣದಿಂದಾಗಿ ಇತ್ತೀಚೆಗೆ ಜಯ್ ಶಾ ಕೂಡ ಮುಂದಿನ ಎರಡು ಐಸಿಸಿ ಟೂರ್ನಿಗಳಲ್ಲಿ ರೋಹಿತ್ ಶರ್ಮಾ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಬಹಿರಂಗ ಹೇಳಿಕೆ ನೀಡಿದ್ದರು. ಈ ಹೇಳಿಕೆಯಂತೆ ಹಿಟ್​ಮ್ಯಾನ್ ಚಾಂಪಿಯನ್ಸ್ ಟ್ರೋಫಿ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನವರೆಗೆ ಮಾತ್ರ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

ಇದಾದ ಬಳಿಕ ಗೌತಮ್ ಗಂಭೀರ್ ಸೂಚಿಸುವವರಿಗೆ ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕತ್ವ ಒಲಿಯಲಿದೆ. ಅಂದರೆ ಜೂನ್​ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಬಳಿಕ ಟೀಮ್ ಇಂಡಿಯಾ ನಾಯಕತ್ವದಲ್ಲಿ ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ ಎನ್ನಬಹುದು.

ಹಿಟ್​ಮ್ಯಾನ್ ನಿವೃತ್ತಿಗೆ ಗಡುವು?

37 ವರ್ಷದ ರೋಹಿತ್ ಶರ್ಮಾ ಮುಂದಿನ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಒಂದು ವೇಳೆ ನಿವೃತ್ತಿ ನೀಡದಿದ್ದರೂ 38 ವರ್ಷದ ರೋಹಿತ್ ಶರ್ಮಾ ಅವರನ್ನು ಆ ಬಳಿಕ ತಂಡದ ಆಯ್ಕೆಗೆ ಪರಿಗಣಿಸುವುದಿಲ್ಲ ಎಂದೇ ಹೇಳಬಹುದು. ಏಕೆಂದರೆ ಗೌತಮ್ ಗಂಭೀರ್ ಕೋಚ್ ಹುದ್ದೆ ಅಲಂಕರಿಸುವ ಮುನ್ನವೇ ಹಿರಿಯ ಆಟಗಾರರನ್ನು ಕೈ ಬಿಟ್ಟು ಹೊಸ ತಂಡ ಕಟ್ಟಲು ಅವಕಾಶ ನೀಡಬೇಕೆಂಬ ಬೇಡಿಕೆಯನ್ನು ಬಿಸಿಸಿಐ ಮುಂದಿಟ್ಟಿದ್ದಾರೆ.

ಈ ಬೇಡಿಕೆಯನ್ನು ಪೂರೈಸುವುದಾಗಿ ಬಿಸಿಸಿಐ ಕೂಡ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಅದರಂತೆ ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ಭಾರತ ಏಕದಿನ ತಂಡದಲ್ಲೂ ಮಹತ್ವದ ಬದಲಾವಣೆಯಾಗಬಹುದು. ಏಕೆಂದರೆ ಗೌತಮ್ ಗಂಭೀರ್ ಅವರ ಅತೀ ದೊಡ್ಡ ಕನಸು 2027ರ ಏಕದಿನ ವಿಶ್ವಕಪ್ ಗೆಲ್ಲೋದು. ಅದಕ್ಕಾಗಿ ಮುಂದಿನ ವರ್ಷದಿಂದಲೇ ಹೊಸ ತಂಡ ಕಟ್ಟಲು ಮುಂದಾಗಲಿದ್ದಾರೆ.

ಹೀಗಾಗಿ 2025 ರ ಚಾಂಪಿಯನ್ಸ್ ಟ್ರೋಫಿ ಬಳಿಕ ರೋಹಿತ್ ಶರ್ಮಾ ಏಕದಿನ ತಂಡದಿಂದ ಹೊರಬೀಳುವುದು ಖಚಿತ ಎನ್ನಬಹುದು. ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಬಳಿಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ. ಅಂದರೆ ರೋಹಿತ್ ಶರ್ಮಾ ಮುಂದಿನ ಒಂದು ವರ್ಷ ಮಾತ್ರ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ ಎಂದೇ ಹೇಳಬಹುದು.

ವಿರಾಟ್ ಕೊಹ್ಲಿಯ ಕಥೆಯೇನು?

ಈಗಾಗಲೇ ಟಿ20 ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ವಿರಾಟ್ ಕೊಹ್ಲಿ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯುವ ಇರಾದೆಯಲ್ಲಿದ್ದಾರೆ. ಆದರೆ ಚಾಂಪಿಯನ್ಸ್ ಟ್ರೋಫಿ ಬಳಿಕ ಮುಂದಿನ ಏಕದಿನ ವಿಶ್ವಕಪ್​ಗಾಗಿ ಹೊಸ ತಂಡ ಕಟ್ಟುವ ಇರಾದೆಯಲ್ಲಿರುವ ಗಂಭೀರ್, ಕೊಹ್ಲಿಯನ್ನು ಏಕದಿನ ತಂಡದ ಆಯ್ಕೆಗೆ ಪರಿಗಣಿಸುತ್ತಾರಾ ಎಂಬುದೇ ಪ್ರಶ್ನೆ.

ಏಕೆಂದರೆ ವಿರಾಟ್ ಕೊಹ್ಲಿಗೆ ಈಗ 35 ವರ್ಷ. 2027ರ ಏಕದಿನ ವಿಶ್ವಕಪ್ ವೇಳೆಗೆ ಅವರಿಗೆ 38 ವರ್ಷ ಆಗಿರಲಿದೆ. ಹೀಗಾಗಿಯೇ ಚಾಂಪಿಯನ್ಸ್ ಟ್ರೋಫಿ ಬಳಿಕ ಕಿಂಗ್ ಕೊಹ್ಲಿಯನ್ನು ಏಕದಿನ ತಂಡದಲ್ಲಿರಿಸಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ. ಇದಾಗ್ಯೂ ಟೆಸ್ಟ್ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಒಂದಷ್ಟು ವರ್ಷಗಳ ಕಾಲ ಮುಂದುವರೆಯಬಹುದು.

ಇದನ್ನೂ ಓದಿ: Gautam Gambhir: ಗೌತಮ್ ಗಂಭೀರ್ ಮುಂದಿದೆ 4 ಬಿಗ್ ಟಾಸ್ಕ್

ಹೀಗಾಗಿ ಗೌತಮ್ ಗಂಭೀರ್ ಗರಡಿಯಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೆಚ್ಚು ಕಾಲ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು. ಇಲ್ಲಿ ಹಿಟ್​ಮ್ಯಾನ್​ಗೆ ಜೂನ್​ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಗಡುವಾಗಿದ್ದರೆ, ವಿರಾಟ್ ಕೊಹ್ಲಿಯ ಭವಿಷ್ಯವು ಅವರ ಪ್ರದರ್ಶನದ ಮೇಲೆ ನಿರ್ಧಾರವಾಗಲಿದೆ.

Published On - 12:18 pm, Wed, 10 July 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ