AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ವೆಸ್ಟ್ ಇಂಡೀಸ್ ನಂಬರ್ 1 ತಂಡವಾಗಲಿದೆ: ಗೌತಮ್ ಗಂಭೀರ್ ವಿಶ್ವಾಸ

West Indies: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ತಂಡ ವಿಶ್ವಕಪ್​ನ ಭಾಗವಾಗಿಲ್ಲ. ಅಂದರೆ 1975 ಹಾಗೂ 1979 ರಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ವೆಸ್ಟ್ ಇಂಡೀಸ್ ಕಳೆದ 12 ವಿಶ್ವಕಪ್​ಗಳಲ್ಲಿ ಕಣಕ್ಕಿಳಿದಿತ್ತು.

Gautam Gambhir: ವೆಸ್ಟ್ ಇಂಡೀಸ್ ನಂಬರ್ 1 ತಂಡವಾಗಲಿದೆ: ಗೌತಮ್ ಗಂಭೀರ್ ವಿಶ್ವಾಸ
West Indies-Gautam Gambhir
TV9 Web
| Edited By: |

Updated on: Jul 02, 2023 | 10:10 PM

Share

ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್​ ಟೂರ್ನಿಯಿಂದ ವೆಸ್ಟ್ ಇಂಡೀಸ್ (West Indies) ತಂಡವು ಹೊರಬಿದ್ದಿದೆ. ಝಿಂಬಾಬ್ವೆಯಲ್ಲಿ ನಡೆದ ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಮೂರು ಪಂದ್ಯಗಳನ್ನು ಸೋತಿರುವ ಕೆರಿಬಿಯನ್ ತಂಡ ಏಕದಿನ ವಿಶ್ವಕಪ್​ 2023 ಕ್ಕೆ ಅರ್ಹತೆ ಪಡೆಯಲು ವಿಫಲವಾಗಿದೆ. ಇದಾಗ್ಯೂ ವಿಂಡೀಸ್ ಪಡೆ ಕಂಬ್ಯಾಕ್ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್.

ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ನಾನು ವೆಸ್ಟ್ ಇಂಡೀಸ್ ಅನ್ನು ಪ್ರೀತಿಸುತ್ತೇನೆ. ನಾ ವೆಸ್ಟ್ ಇಂಡಿಯನ್ ಕ್ರಿಕೆಟ್ ಅನ್ನು ಇಷ್ಟಪಡುತ್ತೇನೆ. ​ಅವರು ಮತ್ತೆ ವಿಶ್ವ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಲಿದೆ ಎಂದು ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.

ಇತ್ತ ವರ್ಷದಿಂದ ವರ್ಷಕ್ಕೆ ಕುಸಿತದತ್ತ ಸಾಗುತ್ತಿರುವ ವೆಸ್ಟ್ ಇಂಡೀಸ್ ತಂಡಕ್ಕೆ ಬೆಂಬಲ ಸೂಚಿಸಿ ಗೌತಮ್ ಗಂಭೀರ್ ಮಾಡಿರುವ ಟ್ವೀಟ್ ಪರ ಹಾಗೂ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಏಕೆಂದರೆ ಕಳೆದ ಐದಾರು ವರ್ಷಗಳಿಂದ ವೆಸ್ಟ್ ಇಂಡೀಸ್ ಯಾವುದೇ ಟೂರ್ನಿಗಳಲ್ಲೂ ಉತ್ತಮ ಪ್ರದರ್ಶನ ನೀಡಿಲ್ಲ.

ಅದರಲ್ಲೂ ಈ ಬಾರಿಯ ವಿಶ್ವಕಪ್​ ಅರ್ಹತಾ ಸುತ್ತಿನ ಪಂದ್ಯದಲ್ಲಿ ಝಿಂಬಾಬ್ವೆ, ನೆದರ್​ಲ್ಯಾಂಡ್ಸ್ ಹಾಗೂ ಸ್ಕಾಟ್​ಲ್ಯಾಂಡ್ ವಿರುದ್ಧ ಹೀನಾಯವಾಗಿ ಸೋತಿದೆ. ಇದಾಗ್ಯೂ ಗಂಭೀರ್ ಅವರು ನಂಬರ್ 1 ತಂಡವಾಗಿ ಹೊರಹೊಮ್ಮಲಿದೆ ಎಂದಿರುವುದು ಎಷ್ಟು ವರ್ಷಗಳ ಬಳಿಕ ಎಂದು ಅನೇಕರು ಕಾಲೆಳೆದಿದ್ದಾರೆ.

ಅಂದಹಾಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ತಂಡ ವಿಶ್ವಕಪ್​ನ ಭಾಗವಾಗಿಲ್ಲ. ಅಂದರೆ 1975 ಹಾಗೂ 1979 ರಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ವೆಸ್ಟ್ ಇಂಡೀಸ್ ಕಳೆದ 12 ವಿಶ್ವಕಪ್​ಗಳಲ್ಲಿ ಕಣಕ್ಕಿಳಿದಿತ್ತು. ಆದರೆ ಈ ಬಾರಿ ಅರ್ಹತಾ ಸುತ್ತಿನಲ್ಲೇ ನಿರ್ಗಮಿಸುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಇದನ್ನೂ ಓದಿ: IND vs AUS: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್..!

ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ವೆಸ್ಟ್ ಇಂಡೀಸ್ ತಂಡ ಹೀಗಿದೆ: ಬ್ರಾಂಡನ್ ಕಿಂಗ್ , ಜಾನ್ಸನ್ ಚಾರ್ಲ್ಸ್ , ಶಮರ್ ಬ್ರೂಕ್ಸ್ , ಶಾಯ್ ಹೋಪ್ (ನಾಯಕ) , ನಿಕೋಲಸ್ ಪೂರನ್ , ಕೈಲ್ ಮೇಯರ್ಸ್ , ಕೆವಿನ್ ಸಿಂಕ್ಲೇರ್ , ಜೇಸನ್ ಹೋಲ್ಡರ್ , ರೊಮಾರಿಯೋ ಶೆಫರ್ಡ್ , ಅಕೀಲ್ ಹೋಸೇನ್ , ಅಲ್ಝಾರಿ ಜೋಸೆಫ್, ರೋವ್​ಮನ್ ಪೊವೆಲ್ , ಕೀಸಿ ಕಾರ್ಟಿ , ಯಾನಿಕ್ ಕ್ಯಾರಿಯಾ , ಕೀಮೋ ಪಾಲ್ , ರೋಸ್ಟನ್ ಚೇಸ್.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು