AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ನಾನೂ ಮನುಷ್ಯ, ಕೆಲ ತಪ್ಪುಗಳನ್ನು ಮಾಡಿದ್ದೇನೆ..!

Gautam Gambhir: ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಆದ ಬಳಿಕ ಭಾರತ ತಂಡವು ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಇದಾಗ್ಯೂ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಪ್ರದರ್ಶನ ಅಷ್ಟಕ್ಕಷ್ಟೇ. ಅದರಲ್ಲೂ ಭಾರತ ತಂಡವು ಗಂಭೀರ್ ಗರಡಿಯಲ್ಲಿ ನ್ಯೂಝಿಲೆಂಡ್ ಹಾಗೂ ಸೌತ್ ಆಫ್ರಿಕಾ ವಿರುದ್ಧ ಸರಣಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿತ್ತು.

Gautam Gambhir: ನಾನೂ ಮನುಷ್ಯ, ಕೆಲ ತಪ್ಪುಗಳನ್ನು ಮಾಡಿದ್ದೇನೆ..!
Gautam Gambhir
ಝಾಹಿರ್ ಯೂಸುಫ್
|

Updated on: Mar 17, 2026 | 8:42 AM

Share

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಈ ಒಂದು ಪ್ರಶ್ನೆ ಮತ್ತೆ ಉದ್ಭವಿಸಲು ಮುಖ್ಯ ಕಾರಣ ಇತ್ತೀಚೆಗೆ ಗಂಭೀರ್ ನೀಡಿದ ಹೇಳಿಕೆ.  ಕೋಲ್ಕತ್ತಾದಲ್ಲಿ ನಡೆದ ‘ರೇವ್‌ಸ್ಪೋರ್ಟ್ಜ್ ಟ್ರೇಲ್‌ಬ್ಲೇಝರ್ಸ್ ಕಾನ್ಕ್ಲೇವ್ 4.0’ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಗಂಭೀರ್​ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವಣ ಸಂಬಂಧದ ಬಗ್ಗೆಗಿನ ಪ್ರಶ್ನೆ ಎದುರಾಗಿದೆ.

ಈ ಪ್ರಶ್ನೆಗೆ ಉತ್ತರಿಸಿದರ ಗಂಭೀರ್,  ಆಟಗಾರರಂತೆ ತರಬೇತುದಾರರೂ ಕೂಡ ಮನುಷ್ಯರು. ಕಳೆದ 18 ತಿಂಗಳಲ್ಲಿ ನಾನು ಕೆಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿರಬಹುದು. ಅದನ್ನು ಒಪ್ಪಿಕೊಳ್ಳಲು ನನಗೆ ಯಾವುದೇ ಸಂಕೋಚವಿಲ್ಲ.

ಆದರೆ ಒಳ್ಳೆಯ ಉದ್ದೇಶದಿಂದ ತೆಗೆದುಕೊಂಡ ತಪ್ಪು ನಿರ್ಧಾರವನ್ನು ಒಪ್ಪಬಹುದು, ಆದರೆ ಕೆಟ್ಟ ಉದ್ದೇಶದಿಂದ ತೆಗೆದುಕೊಳ್ಳುವ ಯಾವುದೇ ತಪ್ಪು ನಿರ್ಧಾರವನ್ನು ಡ್ರೆಸ್ಸಿಂಗ್ ರೂಮ್‌ನಲ್ಲಿ ಸಹಿಸುವುದಿಲ್ಲ ಎಂದು ಗಂಭೀರ್ ಖಡಕ್ಕಾಗಿ ಹೇಳಿದ್ದಾರೆ.

ನಾನು ತಂಡದ ಸಹಾಯಕ ಸಿಬ್ಬಂದಿಯಿಂದ, ಮಸಾಜ್ ಮಾಡುವವರಿಂದ ಹಿಡಿದು ಸಹಾಯಕ ತರಬೇತುದಾರರವರೆಗೆ… ಪ್ರತಿಯೊಬ್ಬರ ಕಣ್ಣಲ್ಲೂ ಕಣ್ಣಿಟ್ಟು ಮಾತನಾಡುವಷ್ಟು ಪ್ರಾಮಾಣಿಕವಾಗಿ ತಾನು ಕೆಲಸ ಮಾಡುತ್ತಿದ್ದೇನೆ. ನಾನು ಅವರ ಕಣ್ಣಲ್ಲಿ ಕಣ್ಣಿಟ್ಟು ನೋಡಬಹುದಾದರೆ, ನಾನು ನ್ಯಾಯಯುತ ಕೆಲಸ ಮಾಡುತ್ತಿದ್ದೇನೆ ಎಂದರ್ಥ.

ಹೀಗಾಗಿ ನಾನು ತಪ್ಪು ಮಾಡಿದ್ದರೂ ಅದು ಸರಿಯಾದ ನಿರ್ಧಾರ ಎಂಬುದು ನನ್ನ ಅನಿಸಿಕೆ. ಸರಿಯಾದ ಉದ್ದೇಶದಿಂದ ತೆಗೆದುಕೊಂಡ ತಪ್ಪು ನಿರ್ಧಾರ ಸ್ವೀಕಾರಾರ್ಹ. ನನ್ನ ಕೋಚಿಂಗ್ ಅವಧಿಯಲ್ಲಿ ನಾನು ತಪ್ಪುಗಳನ್ನು ಮಾಡಿರಬಹುದು. ಆದರೆ ಆ ನಿರ್ಧಾರಗಳು ಕೂಡ ಒಳ್ಳೆಯ ಉದ್ದೇಶಕ್ಕಾಗಿ. ಹೀಗಾಗಿ ಇಂತಹ ನಿರ್ಧಾರಗಳಿಂದ ನಾನು ಹಿಂದೆ ಸರಿಯುವುದಿಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲತಾಣಗಳ ಟೀಕೆಗಿಂತ ತಂಡದ ಒಳಗಿನ 30 ಜನರ ನಂಬಿಕೆ ನನಗೆ ಮುಖ್ಯ ಎಂದು ಪ್ರತಿಪಾದಿಸಿದ ಗಂಭೀರ್, ನನ್ನ ಅವಧಿಯಲ್ಲಿ ಭಾರತ ತಂಡ ಗೆದ್ದ ಪ್ರಮುಖ ಪ್ರಶಸ್ತಿಗಳನ್ನು ಸ್ಮರಿಸಿದರು. ಇದು ನಾನು ಕೋಚ್ ಆಗಿ ಯಶಸ್ಸು ಸಾಧಿಸಿದ್ದೇನೆ ಎಂಬುದಕ್ಕೆ ಸಾಕ್ಷಿ ಎಂದು ತಿಳಿಸಿದರು.

ಇತ್ತ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ನಡುವಣ ಸಂಬಂಧಗಳ ಬಗ್ಗೆ ಕೇಳಿದ ಪ್ರಶ್ನೆಗೆ ತಪ್ಪು ನಿರ್ಧಾರಗಳ ಉತ್ತರ ನೀಡಿದ ಗಂಭೀರ್, ದಿಗ್ಗಜರಿಬ್ಬರನ್ನು ಟೆಸ್ಟ್ ಕ್ರಿಕೆಟ್​ನಿಂದ ಹೊರಗಿಟ್ಟಿರುವುದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ SRH ತಂಡಕ್ಕೆ ಆಘಾತ

ಒಟ್ಟಿನಲ್ಲಿ ವೈಟ್ ಬಾಲ್​ ಕ್ರಿಕೆಟ್​ನಲ್ಲಿ ಗಂಭೀರ್ ಗರಡಿಯಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಇಂತಹದ್ದೇ ಪ್ರದರ್ಶನವನ್ನು ರೆಡ್ ಬಾಲ್​ ಕ್ರಿಕೆಟ್​ನಲ್ಲೂ ಎದುರು ನೋಡಲಾಗುತ್ತಿದೆ. ಅದರಲ್ಲೂ ಟೀಮ್ ಇಂಡಿಯಾ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವಲ್ಲಿ ವಿಫಲವಾದರೆ, ಭಾರತ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ಅವರನ್ನು ವಜಾಗೊಳಿಸಬಹುದು. ಅಲ್ಲದೆ ಏಕದಿನ ಮತ್ತು ಟಿ20 ತಂಡಗಳಿಗೆ ಗಂಭೀರ್ ಅವರನ್ನು ಕೋಚ್ ಆಗಿ ಮುಂದುವರೆಸಿ ಟೆಸ್ಟ್ ತಂಡಕ್ಕೆ ಹೊಸ ಕೋಚ್ ಅನ್ನು ನೇಮಿಸಿಕೊಳ್ಳುವ ಸಾಧ್ಯತೆಯಿದೆ.

Follow Us
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!