India Playing 11: ಪಾಕ್ ವಿರುದ್ಧದ ಪಂದ್ಯಕ್ಕೆ ಗಂಭೀರ್ ಪ್ಲೇಯಿಂಗ್ 11: ಸ್ಟಾರ್ ಆಟಗಾರನಿಗೆ ಇಲ್ಲ ಸ್ಥಾನ
India vs Pakistan: ಗೌತಮ್ ಗಂಭೀರ್ ಅವರ ಪ್ಲೇಯಿಂಗ್ ಇಲೆವೆನ್ನಂತೆ ಟೀಮ್ ಇಂಡಿಯಾದ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ.
T20 World Cup 2022: ಟಿ20 ವಿಶ್ವಕಪ್ನಲ್ಲಿನ ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ರಣರೋಚಕ ಕದನ ನಾಳೆ (ಅ.23) ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ ಈ ಮಹತ್ವದ ಪಂದ್ಯದಲ್ಲಿ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತೆ ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ತಮ್ಮ ಪ್ಲೇಯಿಂಗ್ ಇಲೆವೆನ್ನನ್ನು ಪ್ರಕಟಿಸಿದ್ದಾರೆ. ವಿಶೇಷ ಎಂದರೆ ಟೀಮ್ ಇಂಡಿಯಾದ (Team India) ಖಾಯಂ ಸದಸ್ಯರಾಗಿರುವ ಸ್ಟಾರ್ ಆಟಗಾರನಿಗೆ ಗೌತಿ ಸ್ಥಾನ ನೀಡಿಲ್ಲ ಎಂಬುದು ವಿಶೇಷ.
ಗೌತಮ್ ಗಂಭೀರ್ ಅವರ ಪ್ಲೇಯಿಂಗ್ ಇಲೆವೆನ್ನಂತೆ ಟೀಮ್ ಇಂಡಿಯಾದ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. 4ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.
ಆದರೆ ಐದನೇ ಕ್ರಮಾಂಕದಲ್ಲಿ ರಿಷಭ್ ಪಂತ್ಗೆ ಸ್ಥಾನ ನೀಡಲಾಗಿದೆ. ಅಂದರೆ ದಿನೇಶ್ ಕಾರ್ತಿಕ್ ಅವರಿಗಿಂತ ಪಂತ್ ಉತ್ತಮ ಆಯ್ಕೆ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಡಿಕೆಯನ್ನು ಕೇವಲ 10 ಎಸೆತಗಳನ್ನು ಎದುರಿಸಲು ಆಯ್ಕೆ ಮಾಡಲಾಗುತ್ತಿದೆ. ಆದರೆ ಅದಕ್ಕೂ ಮುನ್ನ 5ನೇ ಕ್ರಮಾಂಕದಲ್ಲಿ ಆಡಲು ಉತ್ತಮ ಆಟಗಾರನನ್ನು ಆಯ್ಕೆ ಮಾಡಬೇಕು. ಹೀಗಾಗಿ ದಿನೇಶ್ ಕಾರ್ತಿಕ್ಗಿಂತ ರಿಷಭ್ ಪಂತ್ ನನ್ನ ಆಯ್ಕೆಯಾಗಿದೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.
ಇನ್ನು 6ನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡಿದರೆ, 7ನೇ ಕ್ರಮಾಂಕಕ್ಕೆ ಅಕ್ಷರ್ ಪಟೇಲ್ ಸೂಕ್ತ ಎಂದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಅವರನ್ನು ಕೈಬಿಟ್ಟು ಮೊಹಮ್ಮದ್ ಶಮಿಯನ್ನು ಆಯ್ಕೆ ಮಾಡಿದ್ದಾರೆ. ಹಾಗೆಯೇ ಹರ್ಷಲ್ ಪಟೇಲ್ಗೂ ಅವಕಾಶ ನೀಡಬೇಕು ಎಂದಿದ್ದಾರೆ. ಜೊತೆಗೆ ಎಡಗೈ ವೇಗಿಯಾಗಿ ಅರ್ಷದೀಪ್ ಸಿಂಗ್ಗೆ ಸ್ಥಾನ ನೀಡಿದ್ದಾರೆ. ಹಾಗೆಯೇ ಸ್ಪಿನ್ನರ್ ಸ್ಥಾನದಲ್ಲಿ ಯುಜ್ವೇಂದ್ರ ಚಹಾಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಗೌತಮ್ ಗಂಭೀರ್ ಅವರ ಪ್ಲೇಯಿಂಗ್ ಇಲೆವೆನ್ ಹೀಗಿದೆ.
- ಕೆಎಲ್ ರಾಹುಲ್
- ರೋಹಿತ್ ಶರ್ಮಾ
- ವಿರಾಟ್ ಕೊಹ್ಲಿ
- ಸೂರ್ಯಕುಮಾರ್
- ರಿಷಭ್ ಪಂತ್
- ಹಾರ್ದಿಕ್ ಪಾಂಡ್ಯ
- ಅಕ್ಷರ್ ಪಟೇಲ್
- ಮೊಹಮ್ಮದ್ ಶಮಿ
- ಹರ್ಷಲ್ ಪಟೇಲ್
- ಅರ್ಷದೀಪ್ ಸಿಂಗ್
- ಯುಜ್ವೇಂದ್ರ ಚಹಾಲ್
ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.
ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಶಾರ್ದೂಲ್ ಠಾಕೂರ್.