AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್ ಗಂಭೀರ್ ಸುದ್ದಿಗೋಷ್ಠಿ: 10 ವಿಷಯಗಳ ಬಗ್ಗೆ ಮನ ಬಿಚ್ಚಿದ ಟೀಮ್ ಇಂಡಿಯಾ ಕೋಚ್

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿವೆ. ವಿಶೇಷ ಎಂದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾ 4-0 ಅಂತರದಿಂದ ಗೆದ್ದರೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ ಫೈನಲ್​ಗೆ ಪ್ರವೇಶಿಸಲಿದೆ.

ಗೌತಮ್ ಗಂಭೀರ್ ಸುದ್ದಿಗೋಷ್ಠಿ: 10 ವಿಷಯಗಳ ಬಗ್ಗೆ ಮನ ಬಿಚ್ಚಿದ ಟೀಮ್ ಇಂಡಿಯಾ ಕೋಚ್
Gautam Gambhir
ಝಾಹಿರ್ ಯೂಸುಫ್
|

Updated on: Nov 11, 2024 | 11:33 AM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದೆ. ನವೆಂಬರ್ 22 ರಿಂದ ಆರಂಭವಾಗಲಿರುವ ಈ ಸರಣಿಗಾಗಿ ತೆರಳಲು ಟೀಮ್ ಇಂಡಿಯಾ ಸಜ್ಜಾಗಿದೆ. ಇದಕ್ಕೂ ಮುನ್ನ ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಕಾಣಿಸಿಕೊಂಡಿದ್ದಾರೆ. ಈ ವೇಳೆ ಟೀಮ್ ಇಂಡಿಯಾ ಕೋಚ್ 10 ವಿಷಯಗಳನ್ನು ಪ್ರಸ್ತಾಪಿಸಿ, ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಈ ಸುದ್ದಿಗೋಷ್ಠಿಯ ಸಂಕ್ಷಿಪ್ತ ವಿವರಗಳು ಈ ಕೆಳಗಿನಂತಿದೆ…

  • ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಪರ್ತ್​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್​ಗೆ ಅಲಭ್ಯರಾಗುವ ಸಾಧ್ಯತೆಯಿದೆ. ಈ ಬಗ್ಗೆ ಮಾತನಾಡಿದ ಗಂಭೀರ್, ರೋಹಿತ್ ಶರ್ಮಾ ಇನ್ನೂ ಸಹ ಈ ವಿಚಾರವನ್ನು ದೃಢಪಡಿಸಿಲ್ಲ. ಹೀಗಾಗಿ ಖಚಿತ ಮಾಹಿತಿ ನೀಡಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.
  • ಇನ್ನು ರೋಹಿತ್ ಶರ್ಮಾ ಹೊರಗುಳಿದರೆ, ಟೀಮ್ ಇಂಡಿಯಾ ಪರ ಯಾರು ಇನಿಂಗ್ಸ್ ಆರಂಭಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ತಂಡದಲ್ಲಿ ಕೆಎಲ್ ರಾಹುಲ್ ಹಾಗೂ ಅಭಿಮನ್ಯು ಈಶ್ವರನ್ ಇದ್ದಾರೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಬದಲಿ ಆರಂಭಿಕರಾಗಿ ಕಾಣಿಸಿಕೊಳ್ಳಬಹುದು ಎಂದಿದ್ದಾರೆ.
  • ಶುಭ್​ಮನ್ ಗಿಲ್ ಅವರ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡುತ್ತೀರಾ ಎಂಬ ಪ್ರಶ್ನೆಗೆ, ನಾನು ಈಗಲೇ ಪ್ಲೇಯಿಂಗ್ ಇಲೆವೆನ್ ಬಹಿರಂಗಪಡಿಸುವುದಿಲ್ಲ. ಅದು ಪರಿಸ್ಥಿತಿಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಗಂಭೀರ್ ಹೇಳಿದ್ದಾರೆ.
  • ಇದೇ ವೇಳೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಪ್ರಸ್ತುತ ಫಾರ್ಮ್ ಆತಂಕಕಾರಿ ವಿಷಯವಲ್ಲ ಎಂದಿರುವ ಗಂಭೀರ್, ಇಬ್ಬರೂ ಆಟಗಾರರು ಸಾಕಷ್ಟು ಅನುಭವ ಹೊಂದಿದ್ದಾರೆ. ಅದರಲ್ಲೂ ಅವರಿಬ್ಬರೂ ಈಗಲೂ ಕೂಡ ರನ್​ಗಳಿಸುವ ತುಡಿತ ಹೊಂದಿದ್ದಾರೆ ಎಂದು ತಿಳಿಸಿದರು.
  • ರೋಹಿತ್ ಶರ್ಮಾ ಪರ್ತ್​ ಟೆಸ್ಟ್​ನಿಂದ ಹೊರಗುಳಿದರೆ ಟೀಮ್ ಇಂಡಿಯಾ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ಉಪನಾಯಕರಾಗಿರುವ ಜಸ್​ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ ಎಂದಿದ್ದಾರೆ.
  • ಇನ್ನು ತಂಡದಲ್ಲಿ ಅನುಭವಿ ಮತ್ತು ಯುವ ಆಟಗಾರರ ಉತ್ತಮ ಸಂಯೋಜನೆ ಇದೆ. ಮೊದಲ ಬಾರಿಗೆ ಆಸ್ಟ್ರೇಲಿಯಾ ಪ್ರವಾಸ ಮಾಡುತ್ತಿರುವ ಯುವ ಆಟಗಾರರಿಗೆ ಹಿರಿಯರ ಅನುಭವವನ್ನು ಸಹಾಯಕವಾಗಲಿದೆ ಎಂದು ಗಂಭೀರ್ ತಿಳಿಸಿದ್ದಾರೆ.
  • ಆಸ್ಟ್ರೇಲಿಯಾದಲ್ಲಿನ ಪಿಚ್​ಗಾಗಿ ಸಿದ್ಧತೆ ಹೇಗಿದೆ ಎಂಬ ಪ್ರಶ್ನೆಗೆ, ಅಲ್ಲಿ ನೀಡಲಾಗುವ ಪಿಚ್‌ನ ಮೇಲೆ ನಮಗೆ ನಿಯಂತ್ರಣವಿಲ್ಲ. ಆದರೆ, ನಾವು ಯಾವುದೇ ಪರಿಸ್ಥಿತಿಯಲ್ಲಿ ಆಡಲು ಸಿದ್ಧರಿದ್ದೇವೆ ಎಂದು ಕೋಚ್ ಗಂಭೀರ್ ಹೇಳಿದ್ದಾರೆ.
  • ನಮ್ಮ ಯೋಜನೆಯಲ್ಲಿ ವೈಯಕ್ತಿಕ ಮೈಲಿಗಲ್ಲುಗಳಿಗಿಂತ ತಂಡದ ಹಿತಾಸಕ್ತಿಯನ್ನು ಮುಂದಿಡುವುದು ನಮ್ಮ ಮೂಲ ಮಂತ್ರ. ಹೀಗಾಗಿ ಪ್ರತಿಯೊಬ್ಬರು ತಂಡದ ಗೆಲುವಿಗಾಗಿ ಈ ಮೂಲ ಮಂತ್ರದೊಂದಿಗೆ ಕಣಕ್ಕಿಳಿಯಲಿದ್ದಾರೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.
  • ಇನ್ನು ಭಾರತ ತಂಡದಲ್ಲಿ 5 ವೇಗಿಗಳ ಆಯ್ಕೆಗಳಿವೆ. ಅದರಲ್ಲಿ ಹರ್ಷಿತ್ ರಾಣಾಗೆ ರಾಷ್ಟ್ರೀಯ ಅನುಭವ ಇಲ್ಲದಿದ್ದರೂ, ಅವರು ಪ್ರಥಮ ದರ್ಜೆ ಕ್ರಿಕೆಟ್‌ನ ಅನುಭವ ಚೆನ್ನಾಗಿದೆ. ಹೀಗಾಗಿ ಅವರನ್ನು ಸಹ ನಾವು ಬಳಸಿಕೊಳ್ಳಬಹುದು ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.
  • ನ್ಯೂಝಿಲೆಂಡ್ ವಿರುದ್ಧದ ಸರಣಿ ಸೋಲಿನ ಬಳಿಕ ಟೀಮ್ ಇಂಡಿಯಾ ಕೋಚ್ ಮೇಲೆ ಒತ್ತಡವಿದೆಯೇ? ಎಂಬ ಪ್ರಶ್ನೆಗೆ, ನನ್ನ ಮೇಲೆ ಅಂತಹ ಯಾವುದೇ ಒತ್ತಡವಿಲ್ಲ ಎಂದು ಗೌತಮ್ ಗಂಭೀರ್ ಸ್ಪಷ್ಟ ಉತ್ತರ ನೀಡಿದ್ದಾರೆ.

Follow Us
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ