AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir Pressmeet: ನಾನು ವಿಶ್ವ ಚಾಂಪಿಯನ್ ತಂಡದ ಕೋಚ್: ಗೌತಮ್ ಗಂಭೀರ್

Gautam Gambhir: ನಾನು ಅತ್ಯಂತ ಯಶಸ್ವಿ ತಂಡದ ಕೋಚ್. ಭಾರತ ತಂಡವು ಈಗಾಗಲೇ ಟಿ20 ಕ್ರಿಕೆಟ್​ನಲ್ಲಿ ವಿಶ್ವ ಚಾಂಪಿಯನ್ ಆಗಿದೆ. ಟೆಸ್ಟ್ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಟೀಮ್ ಇಂಡಿಯಾ ಎರಡು ಬಾರಿ ರನ್ನರ್ ಅಪ್ ಆಗಿದೆ. ಹಾಗೆಯೇ ಏಕದಿನ ವಿಶ್ವಕಪ್​ನಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಹೀಗಾಗಿ ವಿಶ್ವ ಚಾಂಪಿಯನ್ ತಂಡದ ಕೋಚ್ ಆಗಿ ನಾನು ಕಾರ್ಯ ನಿರ್ವಹಿಸಬೇಕಿದೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

Gautam Gambhir Pressmeet: ನಾನು ವಿಶ್ವ ಚಾಂಪಿಯನ್ ತಂಡದ ಕೋಚ್: ಗೌತಮ್ ಗಂಭೀರ್
ಗೌತಮ್ ಗಂಭೀರ್​
ಝಾಹಿರ್ ಯೂಸುಫ್
|

Updated on:Jul 22, 2024 | 11:23 AM

Share

ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಇದೇ ಮೊದಲ ಬಾರಿಗೆ ಹಲವು ವಿಷಯಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಸೋಮವಾರ ಬೆಳಿಗ್ಗೆ ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರೊಂದಿಗೆ ಕಾಣಿಸಿಕೊಂಡ ಗಂಭೀರ್, ಭಾರತ ತಂಡದ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಭಾರತ ತಂಡದ ಕೋಚ್​ ಆಗಿ ಬಿಸಿಸಿಐ ಅವಕಾಶ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಗಂಭೀರ್,  ನನಗೆ ನೀಡಿರುವ ಅವಕಾಶವನ್ನು ಜವಾಬ್ದಾರಿಯಿಂದ ನಿರ್ವಹಿಸುವೆ ಎಂಬ ವಿಶ್ವಾಸವಿದೆ. ಅಲ್ಲದೆ ಭಾರತ ತಂಡವನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಲಿದ್ದೇನೆ. ನನ್ನ ಕೋಚಿಂಗ್​ನಲ್ಲಿ ನಾನು  ಆಟಗಾರರಿಗೆ ಮುಕ್ತ ಅವಕಾಶ ನೀಡುವೆ. 15 ಆಟಗಾರರ ಒಂದು ತಂಡವನ್ನು ಒಟ್ಟಾಗಿ ಮುನ್ನಡೆಸಬೇಕು ಎಂಬುದು ನನ್ನ ಧ್ಯೇಯ ಎಂದು ಹೇಳಿದರು.

ನನಗೆ ಅತ್ಯಂತ ಮುಖ್ಯವಾದ ವಿಷಯವೆಂದರೆ ಪ್ರತಿಯೊಬ್ಬರು ಜೊತೆಯಾಗಿ ನಿಲ್ಲುವುದು. ಇಲ್ಲಿ ಡ್ರೆಸ್ಸಿಂಗ್ ರೂಮ್​ನಲ್ಲಿನ ಸಂತೋಷ ಬಹಳ ಮುಖ್ಯವಾಗುತ್ತದೆ. ಹೀಗಾಗಿ ಅಂತಹ ವಿಷಯಗಳನ್ನು ಸಂಕೀರ್ಣಗೊಳಿಸಲು ಬಯಸುವುದಿಲ್ಲ. ಏಕೆಂದರೆ ನಾನು ಅತ್ಯಂತ ಯಶಸ್ವಿ ತಂಡದ ಕೋಚ್ ಸ್ಥಾನವನ್ನು ವಹಿಸಿಕೊಂಡಿದ್ದೇನೆ. ಟಿ20 ವಿಶ್ವ ಚಾಂಪಿಯನ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ರನ್ನರ್​ ಅಪ್, ಏಕದಿನ ವಿಶ್ವಕಪ್​ನಲ್ಲಿ ಭಾರತ ರನ್ನರ್ ಅಪ್ ಆಗಿದೆ. ಇಲ್ಲಿಂದ ಭಾರತ ತಂಡವನ್ನು ಮುನ್ನಡೆಸಬೇಕಾದ ಜವಾಬ್ದಾರಿ ನನ್ನ ಮೇಲಿದೆ ಎಂದು ಗಂಭೀರ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಬಗ್ಗೆ ಕೇಳಲಾದ ಪ್ರಶ್ನೆಗೆ ಮಾತನಾಡಿದ ಗಂಭೀರ್, ಪ್ರಮುಖ ಪಂದ್ಯಗಳ ವೇಳೆ ಅವರು ಏನು ನೀಡಬಲ್ಲರು ಎಂಬುದನ್ನು ಅವರು ತೋರಿಸಿದ್ದಾರೆ. ಅದು ಟಿ20 ವಿಶ್ವಕಪ್ ಆಗಿರಲಿ ಅಥವಾ ಏಕದಿನ ವಿಶ್ವಕಪ್ ಆಗಿರಲಿ. ಆ ಇಬ್ಬರೂ ಇನ್ನೂ ಹೆಚ್ಚಿನ ಕೊಡುಗೆಗಳನ್ನು ನೀಡುತ್ತಾರೆ ಎಂದು ಭಾವಿಸುತ್ತೇನೆ.

ನಮ್ಮ ಮುಂದೆ ಈಗ ಚಾಂಪಿಯನ್ಸ್ ಟ್ರೋಫಿ ಇದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಇದೆ. ಈ ಪಂದ್ಯಗಳಲ್ಲೂ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಡೆಯಿಂದ ಅತ್ಯುತ್ತಮ ಪ್ರದರ್ಶನವನ್ನು ನಾನು ನಿರೀಕ್ಷಿಸುತ್ತಿದ್ದೇನೆ ಎಂದು ಗಂಭೀರ್ ಹೇಳಿದ್ದಾರೆ.

ಇದನ್ನೂ ಓದಿ: IPL 2025: RCB ತಂಡಕ್ಕೆ ಕೆಎಲ್ ರಾಹುಲ್ ರಿಎಂಟ್ರಿ?

ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ ಮುಂಬರುವ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಗಂಭೀರ್, 2027ರ ಏಕದಿನ ವಿಶ್ವಕಪ್ ವರೆಗೆ ಅವರು ತಮ್ಮ ಫಿಟ್​ನೆಸ್ ಅನ್ನು ಉಳಿಸಿಕೊಳ್ಳಬಹುದು. ಅವರಲ್ಲಿ ಎಷ್ಟು ಕ್ರಿಕೆಟ್ ಉಳಿದಿದೆ ಎಂದು ಹೇಳುವುದು ಕಷ್ಟ. ಪ್ರಮುಖ ಆಟಗಾರರು ತಂಡದ ಕಣಕ್ಕಿಳಿಯುವುದನ್ನು ಎಲ್ಲರೂ ಇಷ್ಟಪಡುತ್ತಾರೆ. ಹೀಗಾಗಿ ಕಾದು ನೋಡೋಣ ಎಂದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Mon, 22 July 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ