Gautam Gambhir Quit Politics: ಗೌತಮ್ ಗಂಭೀರ್ ರಾಜಕೀಯಕ್ಕೆ ಗುಡ್ ಬೈ: ಕಾರಣ ಇಲ್ಲಿದೆ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪೂರ್ವ ದೆಹಲಿ ಬಿಜೆಪಿ ಸಂಸದ ಗೌತಮ್ ಗಂಭೀರ್ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ರಾಜಕೀಯ ಚಟುವಟಿಕೆಗಳಿಂದ ಬಿಡುಗಡೆ ಕೋರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಮನವಿ ಮಾಡಿರುವ ಅವರು, ಮುಂಬರುವ ದಿನಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚು ಬದ್ಧತೆ ಪ್ರದರ್ಶಿಸಲು ಇದರಿಂದ ಅನುಕೂಲವಾಗಲಿದೆ ಎಂದಿದ್ದಾರೆ.

Gautam Gambhir Quit Politics: ಗೌತಮ್ ಗಂಭೀರ್ ರಾಜಕೀಯಕ್ಕೆ ಗುಡ್ ಬೈ: ಕಾರಣ ಇಲ್ಲಿದೆ
ಗೌತಮ್ ಗಂಭೀರ್ Image Credit source: ANI
Follow us
Ganapathi Sharma
|

Updated on:Mar 02, 2024 | 11:22 AM

ನವದೆಹಲಿ, ಮಾರ್ಚ್​ 1: ಪೂರ್ವ ದೆಹಲಿಯ ಬಿಜೆಪಿ ಸಂಸದ (BJP MP) ಗೌತಮ್ ಗಂಭೀರ್ (Gautam Gambhir) ಸಕ್ರಿಯ ರಾಜಕೀಯಕ್ಕೆ (Politics) ಗುಡ್ ಬೈ ಹೇಳುವುದಾಗಿ ಶನಿವಾರ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಜಕೀಯ ಕರ್ತವ್ಯಗಳಿಂದ ಬಿಡುಗಡೆ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಳಿ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. 2019 ರ ಲೋಕಸಭಾ ಚುನಾವಣೆ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದ ಅವರು, ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದ್ದರು.

ರಾಜಕೀಯ ಚಟುವಟಿಕೆಗಳಿಂದ ಮುಕ್ತಿ ನೀಡುವಂತೆ ಜೆಪಿ ನಡ್ಡಾ ಅವರಿಗೆ ಮನವಿ ಮಾಡುತ್ತಿದ್ದೇನೆ. ಇದರಿಂದಾಗಿ ನಾನು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚು ಗಮನಹರಿಸಬಹುದಾಗಿದೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮತ್ತು ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಜೈ ಹಿಂದ್! ಎಂದು ಗಂಭೀರ್ ಎಕ್ಸ್​ ಸಂದೇಶದಲ್ಲಿ ತಿಳಿಸಿದ್ದಾರೆ.

ಗೌತಮ್ ಗಂಭೀರ್ ಎಕ್ಸ್​ ಸಂದೇಶ

ಗಂಭೀರ್ 2019 ರಲ್ಲಿ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅರವಿಂದರ್ ಸಿಂಗ್ ಲವ್ಲಿ ಅವರನ್ನು 3,91,222 ಮತಗಳಿಂದ ಸೋಲಿಸಿದ್ದರು.

ಗೌತಮ್ ಗಂಭೀರ್ 2007 ರ ಟಿ20 ವಿಶ್ವಕಪ್ ಮತ್ತು 2011 ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿದ್ದರು. ಗೌತಮ್ ಗಂಭೀರ್ ಎರಡೂ ಪಂದ್ಯಾವಳಿಗಳ ಫೈನಲ್‌ನಲ್ಲಿ ಭಾರತ ತಂಡದ ಪರವಾಗಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದರು. ಟಿ20 ವಿಶ್ವಕಪ್ ಫೈನಲ್‌ನಲ್ಲಿ ಗಂಭೀರ್ 54 ಎಸೆತಗಳಲ್ಲಿ 75 ರನ್ ಗಳಿಸಿದ್ದರು. ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ 97 ರನ್ ಗಳಿಸಿದ್ದರು.

ಗಂಭೀರ್ 2016 ರಲ್ಲಿ ಭಾರತ ತಂಡದ ಪರ ಇಂಗ್ಲೆಂಡ್ ವಿರುದ್ಧ ರಾಜ್‌ಕೋಟ್‌ನಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದ್ದರು. ಅವರು ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ 58 ಟೆಸ್ಟ್ ಪಂದ್ಯಗಳಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿದ್ದಾರೆ ಮತ್ತು 41.95 ರ ಸರಾಸರಿಯಲ್ಲಿ 4154 ರನ್​​ ಗಳಿಸಿದ್ದಾರೆ. ಇದರಲ್ಲಿ ಒಂಬತ್ತು ಶತಕಗಳು ಸೇರಿವೆ.

ಗಂಭೀರ್ 147 ಏಕದಿನ ಅಂತರಾಷ್ಟ್ರೀಯ ಪಂದ್ಯಗಳಲ್ಲಿ 39.68 ಸರಾಸರಿಯಲ್ಲಿ 5238 ರನ್ ಗಳಿಸಿದ್ದಾರೆ. ಇದರಲ್ಲಿ 2011 ರ ವಿಶ್ವಕಪ್ ಫೈನಲ್‌ನಲ್ಲಿ 97 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಸೇರಿದೆ. ಅವರು ಏಕದಿನದಲ್ಲಿ 11 ಶತಕ ದಾಖಲಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Sat, 2 March 24

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ