ವೆಂಕಟೇಶ್ ಅಯ್ಯರ್ ಆಯ್ಕೆ ಯಾಕೆ? ಗೌತಮ್ ಗಂಭೀರ ಪ್ರಶ್ನೆ

| Updated By: ಝಾಹಿರ್ ಯೂಸುಫ್

Updated on: Nov 11, 2021 | 9:12 PM

Team India: ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (WK), ಇಶಾನ್ ಕಿಶನ್ (WK), ವೆಂಕಟೇಶ್ ಅಯ್ಯರ್

ವೆಂಕಟೇಶ್ ಅಯ್ಯರ್ ಆಯ್ಕೆ ಯಾಕೆ? ಗೌತಮ್ ಗಂಭೀರ ಪ್ರಶ್ನೆ
gautam gambhir
Follow us on

ನ್ಯೂಜಿಲೆಂಡ್ ವಿರುದ್ದದ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಬಳಗದಲ್ಲಿ ಯುವ ಆಲ್​ರೌಂಡರ್ ವೆಂಕಟೇಶ್ ಅಯ್ಯರ್ ಕೂಡ ಸ್ಥಾನ ಪಡೆದಿದ್ದಾರೆ. ಆದರೆ ಅಯ್ಯರ್ ಅವರ ಆಯ್ಕೆಯ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದಾರೆ ಟೀಮ್ ಇಂಡಿಯಾ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್. ವೆಂಟಕೇಶ್ ಅಯ್ಯರ್ ಅವರನ್ನು ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂದು ಗಂಭೀರ್ ಪ್ರಶ್ನಿಸಿದ್ದಾರೆ. ಏಕೆಂದರೆ ಅವರು ಆಡಿರುವುದು 5-6 ಪಂದ್ಯಗಳು ಮಾತ್ರ. ಐದಾರು ಪಂದ್ಯಗಳನ್ನಾಡಿರುವ ಆಟಗಾರರಿಗೆ ನೇರವಾಗಿ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡಬಾರದು. ಇದರಿಂದ ಇತರೆ ಆಟಗಾರರಲ್ಲಿ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ಹೊಸ ಟೀಮ್ ಇಂಡಿಯಾ ಬಗ್ಗೆ ಮಾತನಾಡಿರುವ ಗಂಭೀರ್, ನನ್ನ ಪ್ರಕಾರ ವೆಂಕಟೇಶ್ ಅಯ್ಯರ್ ಆಯ್ಕೆ ತಪ್ಪು. ಐಪಿಎಲ್‌ನ 5-6 ಪಂದ್ಯಗಳಲ್ಲಿನ ಪ್ರದರ್ಶನದ ಆಧಾರದ ಮೇಲೆ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದ್ದು, ಇದು ಸರಿಯಲ್ಲ. ಅವರನ್ನು ಆಯ್ಕೆ ಮಾಡುವುದಾದರೆ, ಶಿವಂ ದುಬೆ ಮತ್ತೆ ಮಾಡಿದ ತಪ್ಪೇನು? ಎಂದು ಗಂಭೀರ್ ಪ್ರಶ್ನಿಸಿದ್ದಾರೆ.

ನಾನು ಹರ್ಷಲ್ ಪಟೇಲ್ ಅವರನ್ನು ಸರಿಯಾದ ಆಯ್ಕೆ ಎಂದು ಪರಿಗಣಿಸುತ್ತೇನೆ. ಏಕೆಂದರೆ ಅವರು ಐಪಿಎಲ್‌ಗೂ ಮುನ್ನ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಒಂದಷ್ಟು ಪಂದ್ಯಗಳನ್ನಾಡಿರುವ ವೆಂಕಟೇಶ್ ಅಯ್ಯರ್ ಅವರನ್ನು ಯಾವ ಆಧಾರದ ಮೇಲೆ ಆಯ್ಕೆ ಮಾಡಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಗಂಭೀರ್ ತಿಳಿಸಿದರು.

ಕೆಕೆಆರ್ ಪರ ಈ ಬಾರಿಯ ಐಪಿಎಲ್​ನಲ್ಲಿ 10 ಪಂದ್ಯಗಳನ್ನಾಡಿದ್ದ ವೆಂಕಟೇಶ್ ಅಯ್ಯರ್ 370 ರನ್ ಹಾಗೂ 3 ವಿಕೆಟ್ ಪಡೆದಿದ್ದರು. ಇದಾಗ್ಯೂ ಅಯ್ಯರ್ ಪ್ರಥಮ ದರ್ಜೆ ಕ್ರಿಕೆಟ್​ ಆಡಿಲ್ಲ ಎಂಬುದು ವಿಶೇಷ. ಹೀಗಾಗಿ ಕೇವಲ ಐಪಿಎಲ್​ ಪಂದ್ಯಗಳ ಆಧಾರ ಮೇಲೆ ಅಯ್ಯರ್ ಅವರನ್ನು ಆಯ್ಕೆ ಮಾಡಿದ್ದೀರಾ ಎಂದು ಗೌತಮ್ ಗಂಭೀರ್ ಗಂಭೀರವಾದ ಪ್ರಶ್ನೆಯನ್ನು ಆಯ್ಕೆ ಸಮಿತಿಯ ಮುಂದಿಟ್ಟಿದೆ.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (WK), ಇಶಾನ್ ಕಿಶನ್ (WK), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ:   IPL 2022: ಯುವ ನಾಯಕನ ಮೇಲೆ ಕಣ್ಣಿಟ್ಟಿರುವ CSK

(gautam gambhir says its wrong to place Venkatesh Iyer in team)