VIDEO: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮಧ್ಯದ ಬೆರಳು ತೋರಿಸಿದ ಗೌತಮ್ ಗಂಭೀರ್

Gautam Gambhir vs Virat Kohli: ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ಆರ್​ಸಿಬಿ ವಿರುದ್ಧದ ಪಂದ್ಯವನ್ನು ಗೆದ್ದ ಬಳಿಕ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡು ಇರಬೇಕೆಂದು ಸೂಚಿಸಿದ್ದರು. ಆ ನಂತರ ಲಕ್ನೋನಲ್ಲಿ ನಡೆದ ಆರ್​ಸಿಬಿ-ಎಲ್​ಎಸ್​ಜಿ ನಡುವಣ ಪಂದ್ಯವು ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಮಾತಿನ ಚಕಮಕಿಗೆ ಕಾರಣವಾಗಿತ್ತು.

VIDEO: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮಧ್ಯದ ಬೆರಳು ತೋರಿಸಿದ ಗೌತಮ್ ಗಂಭೀರ್
Gautam Gambhir
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 04, 2023 | 9:12 PM

ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ವಿರಾಟ್ ಕೊಹ್ಲಿ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಏಷ್ಯಾ ಕಪ್ 2023 ರಲ್ಲಿ ನಡೆಯುತ್ತಿರುವ ಭಾರತ ಮತ್ತು ನೇಪಾಳ ಪಂದ್ಯದ ವೇಳೆ ಈ ಘಟನೆ ನಡೆದಿದ್ದು, ಇದೀಗ ಈ ಅನುಚಿತ ವರ್ತನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್​ನಲ್ಲಿ ಗೌತಮ್ ಗಂಭೀರ್ ಪ್ಯಾನೆಲಿಸ್ಟ್ ಮತ್ತು ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನೇಪಾಳ ವಿರುದ್ಧದ ಪಂದ್ಯದ ವೇಳೆ ಮೈದಾನದಲ್ಲಿ ಕಾಣಿಸಿಕೊಂಡಿದ್ದ ಗಂಭೀರ್ ಸ್ಟೇಡಿಯಂಗೆ ಹಿಂತಿರುಗುತ್ತಿದ್ದಾಗ ಅಭಿಮಾನಿಗಳು ಕೊಹ್ಲಿ-ಕೊಹ್ಲಿ ಎಂದು ಘೋಷಣೆ ಕೂಗಿದರು.

ಇದರಿಂದ ಕುಪಿತಗೊಂಡ ಗಂಭೀರ್ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿ ನಡೆದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಗಂಭೀರ್ ವರ್ತನೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ಆರ್​ಸಿಬಿ ವಿರುದ್ಧದ ಪಂದ್ಯವನ್ನು ಗೆದ್ದ ಬಳಿಕ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡು ಇರಬೇಕೆಂದು ಸೂಚಿಸಿದ್ದರು. ಆ ನಂತರ ಲಕ್ನೋನಲ್ಲಿ ನಡೆದ ಆರ್​ಸಿಬಿ-ಎಲ್​ಎಸ್​ಜಿ ನಡುವಣ ಪಂದ್ಯವು ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಮಾತಿನ ಚಕಮಕಿಗೆ ಕಾರಣವಾಗಿತ್ತು.

ಅಷ್ಟೇ ಅಲ್ಲದೆ ಮೈದಾನದಲ್ಲೇ ಗಂಭೀರ್ ಹಾಗೂ ಕೊಹ್ಲಿ ಜಗಳಕ್ಕಿಳಿದಿದ್ದರು. ಈ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಐಪಿಎಲ್ ಆಡಳಿತ ಮಂಡಳಿ ಇಬ್ಬರಿಗೆ ಪಂದ್ಯದ ಶೇ.100 ರಷ್ಟು ದಂಡ ವಿಧಿಸಿದ್ದರು.

ಇದನ್ನೂ ಓದಿ: Virat Kohli: ಕ್ಯಾಚ್ ಹಿಡಿದು ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ

ಇದೀಗ ಮತ್ತೊಮ್ಮೆ ವಿರಾಟ್ ಕೊಹ್ಲಿಯ ಹೆಸರು ಕೇಳುತ್ತಿದ್ದಂತೆ ಗಂಭೀರ್ ಕೆಂಡಮಂಡಲರಾಗಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಘನತೆಯನ್ನು ಮರೆತು ವರ್ತಿಸಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.