AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಚಿಕೆಗೇಡು… ಆತನನ್ನು ಬಿಟ್ಟು ಬಿಡಿ: ಗೌತಮ್ ಗಂಭೀರ್ ಗರಂ

India vs Australia Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು ಮೂರು ಪಂದ್ಯಗಳ ಏಕದಿನ ಸರಣಿ ಆಡಲಾಗುತ್ತದೆ. ಇದಾದ ಬಳಿಕ 5 ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಈ ಎರಡು ಸರಣಿಗಳಿಗೆ ಯುವ ವೇಗಿ ಹರ್ಷಿತ್ ರಾಣಾ ಆಯ್ಕೆಯಾಗಿದ್ದಾರೆ.

ನಾಚಿಕೆಗೇಡು... ಆತನನ್ನು ಬಿಟ್ಟು ಬಿಡಿ: ಗೌತಮ್ ಗಂಭೀರ್ ಗರಂ
Gautam Gambhir
ಝಾಹಿರ್ ಯೂಸುಫ್
|

Updated on: Oct 14, 2025 | 3:25 PM

Share

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಸಜ್ಜಾಗಬೇಕಿದೆ. ಈ ಸರಣಿಗಾಗಿ ಈಗಾಗಲೇ ಭಾರತ ತಂಡವನ್ನು ಘೋಷಿಸಲಾಗಿದ್ದು, 15 ಸದಸ್ಯರುಗಳ ಬಳಗದಲ್ಲಿ ಯುವ ವೇಗಿ ಹರ್ಷಿತ್ ರಾಣಾ ಕೂಡ ಆಯ್ಕೆಯಾಗಿದ್ದಾರೆ. ರಾಣಾ ಅವರ ಈ ಆಯ್ಕೆ ಬಗ್ಗೆ ಟೀಮ್ ಇಂಡಿಯಾದ ಕೆಲ ಮಾಜಿ ಆಟಗಾರರು ಪ್ರಶ್ನೆಗಳೆನ್ನೆತ್ತಿದ್ದರು. ಅಲ್ಲದೆ ಹರ್ಷಿತ್ ರಾಣಾ ಅವರ ಆಯ್ಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗಿತ್ತು. ಈ ಎಲ್ಲಾ ಟ್ರೋಲ್​ಗಳಿಗೆ ಇದೀಗ ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಗೌತಮ್ ಗಂಭೀರ್ ಅವರನ್ನು ಹರ್ಷಿತ್ ರಾಣಾ ಬಗ್ಗೆ ಕೇಳಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ಆತ ಇನ್ನೂ 23 ವರ್ಷದ ಹುಡುಗ. ಅವನನ್ನು  ವೈಯಕ್ತಿಕವಾಗಿ ಗುರಿಯಾಗಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

ಹರ್ಷಿತ್ ರಾಣಾ ಅವರ ತಂದೆ ಯಾವುದೇ ಸಂಸ್ಥೆಯ ಮಾಜಿ ಅಧ್ಯಕ್ಷನಲ್ಲ, ಮಾಜಿ ಕ್ರಿಕೆಟಿಗ ಅಥವಾ ಅಧಿಕಾರಿಯಲ್ಲ. ಇದಾಗ್ಯೂ ಆತ ಇಂದು ಈ ಸ್ಥಾನಕ್ಕೇರಿದ್ದಾರೆ. ಇಲ್ಲಿತನಕ ತಲುಪಿರುವುದು ಸ್ವಂತ ಅರ್ಹತೆಯಿಂದ. ಆದ್ದರಿಂದ ಹರ್ಷಿತ್​ನನ್ನು ಗುರಿಯಾಗಿಸುವುದು ಸಂಪೂರ್ಣವಾಗಿ ತಪ್ಪು. ಇದು ಸಾಮಾಜಿಕ ಮಾಧ್ಯಮ ಬಳಕೆದಾರರ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ ಎಂದು ಗೌತಮ್ ಗಂಭೀರ್ ಆಕ್ರೋಶ ಹೊರಹಾಕಿದ್ದಾರೆ.

ಯಾವುದೇ ಹುಡುಗ ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ, ಅವನ ಆದ್ಯತೆ ಉತ್ತಮವಾಗಿ ಆಡುವುದು ಮತ್ತು ತನ್ನ ದೇಶಕ್ಕಾಗಿ ಆಡುವುದಾಗಿರುತ್ತದೆ. ನೀವು ನಿಮ್ಮ ಯೂಟ್ಯೂಬ್ ಚಾನೆಲ್ ಅನ್ನು ಪ್ರಚಾರ ಮಾಡಲು ಯಾರ ಬಗ್ಗೆಯೂ ಏನನ್ನೂ ಹೇಳಬೇಡಿ. ನೀವು ಯಾರನ್ನಾದರೂ ಗುರಿಯಾಗಿಸಲು ಬಯಸಿದರೆ, ನನ್ನನ್ನು ಗುರಿಯಾಗಿಸಿ. ನಾನು ಅದನ್ನು ನಿಭಾಯಿಸುತ್ತೇನೆ. ಆದರೆ ಯುವ ಆಟಗಾರರನ್ನು ಬಿಟ್ಟುಬಿಡಿ ಎಂದು ಗೌತಮ್ ಗಂಭೀರ್ ಮನವಿ ಮಾಡಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ಸರಣಿ:

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಅಕ್ಟೋಬರ್ 19 ರಿಂದ 25 ರವರೆಗೆ ನಡೆಯಲಿರುವ ಈ ಸರಣಿಯಲ್ಲಿ ಮೂರು ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಅಕ್ಟೋಬರ್ 29 ರಿಂದ ಟಿ20 ಸರಣಿ ಶುರುವಾಗಲಿದ್ದು, ಈ ಸರಣಿಯಲ್ಲಿ ಐದು ಮ್ಯಾಚ್​ಗಳನ್ನಾಡಲಾಗುತ್ತದೆ. ಈ ಎರಡೂ ಸರಣಿಗಳಿಗೂ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ