AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನಾಗಿ ಆಡು, ಇಲ್ಲಾ ರೈಟ್ ಹೇಳು… ಹರ್ಷಿತ್ ರಾಣಾಗೆ ಗಂಭೀರ್ ವಾರ್ನಿಂಗ್

Australia vs India: ಭಾರತದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 46.4 ಓವರ್​ಗಳಲ್ಲಿ 236 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (121) ಶತಕ ಬಾರಿಸಿದರೆ, ವಿರಾಟ್ ಕೊಹ್ಲಿ (74) ಅರ್ಧಶತಕ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ 38.3 ಓವರ್​​ಗಳಲ್ಲಿ 237 ರನ್​​ಗಳಿಸಿ 9 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ.

ಚೆನ್ನಾಗಿ ಆಡು, ಇಲ್ಲಾ ರೈಟ್ ಹೇಳು... ಹರ್ಷಿತ್ ರಾಣಾಗೆ ಗಂಭೀರ್ ವಾರ್ನಿಂಗ್
Gautam Gambhir - Harshit Rana
ಝಾಹಿರ್ ಯೂಸುಫ್
|

Updated on: Oct 26, 2025 | 12:30 PM

Share

ಆಸ್ಟ್ರೇಲಿಯಾ  ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 46.4 ಓವರ್​ಗಳಲ್ಲಿ 236 ರನ್​ಗಳಿಗೆ ಆಲೌಟ್ ಆಗಿತ್ತು. ಹೀಗೆ ಆಸೀಸ್ ಪಡೆ ಬಹುಬೇಗನೆ ಆಲೌಟ್ ಆಗಲು ಮುಖ್ಯ ಕಾರಣ ಯುವ ವೇಗಿ ಹರ್ಷಿತ್ ರಾಣಾ.

ಈ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಹರ್ಷಿತ್ ರಾಣಾ 8.4 ಓವರ್​ಗಳಲ್ಲಿ ಕೇವಲ 39 ರನ್​ಗಳಿಗೆ 4 ವಿಕೆಟ್ ಕಬಳಿಸಿದ್ದರು. ಆದರೆ ಈ ಪ್ರದರ್ಶನಕ್ಕೆ ಪರೋಕ್ಷ ಕಾರಣ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್. ಏಕೆಂದರೆ ಈ ಮ್ಯಾಚ್​ಗೂ ಮುನ್ನ ಗಂಭೀರ್ ಕಡೆಯಿಂದ ಹರ್ಷಿತ್ ರಾಣಾಗೆ ಖಡಕ್ ವಾರ್ನಿಂಗ್ ಲಭಿಸಿತ್ತು.

ಗೌತಮ್ ಗಂಭೀರ್ ಎಚ್ಚರಿಕೆ:

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಹರ್ಷಿತ್ ರಾಣಾ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಅಪಸ್ವರಗಳು ಕೇಳಿ ಬಂದಿದ್ದವು. ಅದರಲ್ಲೂ ಕೆಲ ಮಾಜಿ ಆಟಗಾರರು ಗೌತಮ್ ಗಂಭೀರ್ ಅವರನ್ನು ಗುರಿಯಾಗಿಸಿ ಹರ್ಷಿತ್ ರಾಣಾ ಆಯ್ಕೆ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು.

ಇದಕ್ಕೆ ಉತ್ತರ ನೀಡಬೇಕಾದ ಹರ್ಷಿತ್ ರಾಣಾ ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ರಾಣಾ ಮೇಲೆ ಗಂಭೀರ್​ಗೆ ಆಕ್ರೋಶವಿತ್ತು. ಇದಾಗ್ಯೂ ಮೂರನೇ ಏಕದಿನ ಪಂದ್ಯದಲ್ಲಿ ಹರ್ಷಿತ್ ರಾಣಾ ಅವರನ್ನು ಕಣಕ್ಕಿಳಿಸಲು ಗೌತಮ್ ಗಂಭೀರ್ ನಿರ್ಧರಿಸಿದ್ದರು.

ಆದರೆ ಅದಕ್ಕೂ ಮುನ್ನ ಹರ್ಷಿತ್ ರಾಣಾ ಅವರನ್ನು ತಮ್ಮ ಬಳಿ ಕರೆದಿದ್ದ ಗೌತಮ್ ಗಂಭೀರ್, ಇದುವೇ ಕೊನೆ… ಉತ್ತಮ ಪ್ರದರ್ಶನ ನೀಡಲೇಬೇಕು. ಇಲ್ಲದಿದ್ದರೆ ತಂಡದಿಂದ ಕೈ ಬಿಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ಈ ವಾರ್ನಿಂಗ್ ಫಲವಾಗಿ ಮೂರನೇ ಏಕದಿನ ಪಂದ್ಯದಲ್ಲಿ ಹರ್ಷಿತ್ ಅದ್ಭುತ ಪ್ರದರ್ಶನ ನೀಡಿದ್ದಾರೆ ಎಂದು ರಾಣಾ ಅವರ ಬಾಲ್ಯದ ಕೋಚ್ ಶರ್ವಣ್ ಬಹಿರಂಗಪಡಿಸಿದ್ದಾರೆ.

ಮೂರನೇ ಪಂದ್ಯಕ್ಕೂ ಮುನ್ನ ಬಾಲ್ಯದ ಕೋಚ್ ಶರ್ವಣ್ ಅವರಿಗೆ ಕರೆ ಮಾಡಿದ್ದ ಹರ್ಷಿತ್ ರಾಣಾ, ಒತ್ತಡದಲ್ಲಿರುವುದಾಗಿ ತಿಳಿಸಿದ್ದರು. ಈ ವೇಳೆ ಶರ್ವಣ್ ಟೀಮ್ ಇಂಡಿಯಾ ವೇಗಿಗೆ ಆತ್ಮ ವಿಶ್ವಾಸ ತುಂಬಿದ್ದರು. ಇದೇ ವೇಳೆ ಗೌತಮ್ ಗಂಭೀರ್ ನೀಡಿರುವ ಎಚ್ಚರಿಕೆಯನ್ನು ಹಂಚಿಕೊಂಡಿದ್ದಾರೆ.

ಈ ವೇಳೆ ನೀ ನಿನ್ನ ಮೇಲೆ ನಂಬಿಕೆಯಿಡು. ಗೌತಮ್ ಗಂಭೀರ್​ಗೆ ಪ್ರತಿಭೆಯನ್ನು ಹೇಗೆ ಗುರುತಿಸಬೇಕೆಂದು ಗೊತ್ತಿದೆ. ಹೀಗಾಗಿ ಅವರು ನಿನ್ನನ್ನು ಬೆಂಬಲಿಸುತ್ತಾರೆ. ಅವರು ಅನೇಕ ಕ್ರಿಕೆಟಿಗರನ್ನು ಬೆಂಬಲಿಸಿದ್ದಾರೆ, ಹಾಗೆ ಬೆಂಬಲಿಸಿದ ಆಟಗಾರರು ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಗೌತಮ್ ಗಂಭೀರ್ ಅವರ ಗದರಿಕೆಯನ್ನು ಪಾಸಿಟಿವ್ ಆಗಿ ತೆಗೆದುಕೊಳ್ಳುವಂತೆ ಸೂಚಿಸಿದ್ದೆ ಎಂದು ಶರ್ವಣ್ ತಿಳಿಸಿದ್ದಾರೆ.

ಇದನ್ನೂ ಓದಿ: ಹೀಗೂ ಉಂಟೆ… ಹೀಗೊಂದು ‘ನತದೃಷ್ಟ’ದ ವಿಶ್ವ ದಾಖಲೆ

ಅದರಂತೆ ಮೂರನೇ ಏಕದಿನ ಪಂದ್ಯದಲ್ಲಿ ಬೌನ್ಸರ್ ಎಸೆತಗಳ ಮೂಲಕ ಗಮನ ಸೆಳೆದ ಹರ್ಷಿತ್ ರಾಣಾ 39 ರನ್ ನೀಡಿ 4 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಗೌತಮ್ ಗಂಭೀರ್ ಇಟ್ಟಿದ್ದ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ತನ್ನ ಆಯ್ಕೆಯನ್ನು ಟೀಕಿಸಿದವರಿಗೆ ಪ್ರದರ್ಶನದ ಮೂಲಕವೇ ಉತ್ತರ ನೀಡಿದ್ದಾರೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ