AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಟೀಮ್ ಇಂಡಿಯಾಗೆ ಎಚ್ಚರಿಕೆ ನೀಡಿದ ಗೌತಮ್ ಗಂಭೀರ್

India vs Afghanistan: ಗ್ರೂಪ್-2 ರಿಂದ ಈಗಾಗಲೇ ಪಾಕಿಸ್ತಾನ್ ತಂಡ ಸೆಮಿಫೈನಲ್ ಪ್ರವೇಶಿಸಿದೆ. ಇನ್ನು ಇದೇ ಗ್ರೂಪ್​ನಿಂದ ಸೆಮಿಫೈನಲ್ ಪ್ರವೇಶಿಸಲಿರುವ 2ನೇ ತಂಡ ಯಾವುದೆಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ.

T20 World Cup 2021: ಟೀಮ್ ಇಂಡಿಯಾಗೆ ಎಚ್ಚರಿಕೆ ನೀಡಿದ ಗೌತಮ್ ಗಂಭೀರ್
Gautam Gambhir
TV9 Web
| Updated By: ಝಾಹಿರ್ ಯೂಸುಫ್|

Updated on: Nov 03, 2021 | 2:53 PM

Share

T20 ವಿಶ್ವಕಪ್‌ನ (T20 World Cup 2021) 33ನೇ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಹಾಗೂ ಅಫ್ಘಾನಿಸ್ತಾನ್ (Afghanistan) ಮುಖಾಮುಖಿಯಾಗಲಿದೆ. ಮೊದಲ ಎರಡು ಪಂದ್ಯಗಳನ್ನು ಸೋತಿರುವ ಭಾರತ ಇಂದಿನ ಪಂದ್ಯದಲ್ಲಿ ಗೆದ್ದು ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ. ಆದರೆ ಭಾರತ ತಂಡಕ್ಕೆ ಅಫ್ಘಾನ್ ವಿರುದ್ದ ಕೂಡ ಗೆಲುವು ಸುಲಭವಲ್ಲ ಎಂದು ಎಚ್ಚರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir ).

ಈ ಬಗ್ಗೆ ಚಾನೆಲ್​ ಚರ್ಚೆಯೊಂದರಲ್ಲಿ ಮಾತನಾಡಿದ ಗಂಭೀರ್, ಅಫ್ಘಾನಿಸ್ತಾನ ತಂಡವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಅವರ ಬೌಲಿಂಗ್ ಬಾಂಗ್ಲಾದೇಶ ಮತ್ತು ಶ್ರೀಲಂಕಾಕ್ಕಿಂತ ಉತ್ತಮವಾಗಿದೆ. ಹೀಗಾಗಿ ಅವರನ್ನು ನಾವು ಸೋಲಿಸುತ್ತೀವಿ ಅಂದುಕೊಳ್ಳುವಷ್ಟು ಕಳಪೆ ತಂಡವಲ್ಲ. ಅಫ್ಘಾನಿಸ್ತಾನ್ ಕೂಡ ಬಲಿಷ್ಠವಾಗಿದೆ. ಹೀಗಾಗಿ ಟೀಮ್ ಇಂಡಿಯಾ ಎಚ್ಚರಿಕೆಯಿಂದ ಆಡಬೇಕೆಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

ಗ್ರೂಪ್-2 ರಿಂದ ಈಗಾಗಲೇ ಪಾಕಿಸ್ತಾನ್ ತಂಡ ಸೆಮಿಫೈನಲ್ ಪ್ರವೇಶಿಸಿದೆ. ಇನ್ನು ಇದೇ ಗ್ರೂಪ್​ನಿಂದ ಸೆಮಿಫೈನಲ್ ಪ್ರವೇಶಿಸಲಿರುವ 2ನೇ ತಂಡ ಯಾವುದೆಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿದೆ. ಏಕೆಂದರೆ ಸೆಮಿಫೈನಲ್ ರೇಸ್​ನಲ್ಲಿ ನ್ಯೂಜಿಲೆಂಡ್, ಅಫ್ಘಾನಿಸ್ತಾನ್ ಹಾಗೂ ಭಾರತ ತಂಡಗಳಿವೆ. ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳನ್ನು ಅಫ್ಘಾನಿಸ್ತಾನ್, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ವಿರುದ್ದ ಆಡಲಿದೆ. ಒಂದು ವೇಳೆ ಮುಂದಿನ ಮೂರು ಪಂದ್ಯಗಳಲ್ಲಿ ನ್ಯೂಜಿಲೆಂಡ್ ತಂಡ ಒಂದರಲ್ಲಿ ಸೋತರೆ ಟೀಮ್ ಇಂಡಿಯಾಗೆ ನೆಟ್​ ರನ್​ ರೇಟ್​ ಮೂಲಕ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ.

ಇದಾಗ್ಯೂ ಪ್ರಸ್ತುತ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ನೆಟ್ ರನ್​ ರೇಟ್​ ಹೆಚ್ಚಿಸುವ ಬದಲಿಗೆ ಪಂದ್ಯಗಳನ್ನು ಗೆಲ್ಲುವತ್ತಾ ಯೋಚಿಸಬೇಕೆಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ. ಪಂದ್ಯದ ಮೇಲೆ ಬಲವಾದ ಹಿಡಿತ ಸಾಧಿಸಿದ ಮೇಲೆ ನೀವು ಪರಿಸ್ಥಿತಿಗೆ ಅನುಗುಣವಾಗಿ ಆಡಬಹುದು. ಹಾಗಾಗಿ ಪ್ರಸ್ತುತ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಗೆಲುವಿನತ್ತ ಗಮನ ಕೇಂದ್ರೀಕರಿಸಬೇಕಿದೆ ಎಂದು ಗಂಭೀರ್ ತಿಳಿಸಿದರು.

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(Gautam Gambhir Warned Team India said Afghanistan have better bowling than Sri Lanka and Bangladesh)