AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ 2 ವರ್ಷ ಗೌತಮ್ ಗಂಭೀರ್ ಕೋಚ್ ಸ್ಥಾನ ಸೇಫ್..!

Gautam Gambhir: ಗೌತಮ್ ಗಂಭೀರ್ ವೈಟ್ ಬಾಲ್ ಕ್ರಿಕೆಟ್​ನಲ್ಲಿ ಅತ್ಯುತ್ತಮ ಕೋಚ್ ಎಂಬುದರಲ್ಲಿ ಡೌಟೇ ಇಲ್ಲ. ಇದಕ್ಕೆ ಸಾಕ್ಷಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿರುವುದು. ಹಾಗೆಯೇ ಏಷ್ಯಾಕಪ್​ನಲ್ಲೂ ಅಮೋಘ ಗೆಲುವು ದಾಖಲಿಸಿರುವುದು. ಇದಾಗ್ಯೂ ಗಂಭೀರ್ ಸಾರಥ್ಯದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ ಎಂಬುದೇ ಸತ್ಯ.

ಇನ್ನೂ 2 ವರ್ಷ ಗೌತಮ್ ಗಂಭೀರ್ ಕೋಚ್ ಸ್ಥಾನ ಸೇಫ್..!
Gautam Gambhir
ಝಾಹಿರ್ ಯೂಸುಫ್
|

Updated on:Nov 27, 2025 | 11:54 AM

Share

ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಭವಿಷ್ಯದ ಬಗ್ಗೆ ಪ್ರಶ್ನೆಗಳೆದ್ದಿವು. ಈ ಪ್ರಶ್ನೆಗಳ ನಡುವೆ ಬಿಸಿಸಿಐ ನನ್ನ ಭವಿಷ್ಯವನ್ನು ನಿರ್ಧರಿಸಲಿ ಎಂಬ ಹೇಳಿಕೆ ನೀಡಿ ಗಂಭೀರ್ ಅಚ್ಚರಿ ಮೂಡಿಸಿದ್ದರು.

ಭಾರತ ತಂಡಕ್ಕೆ ನಾನು ಮುಖ್ಯವಲ್ಲ, ನನಗೆ ಭಾರತೀಯ ಕ್ರಿಕೆಟ್ ಮುಖ್ಯ. ಹೀಗಾಗಿ ಬಿಸಿಸಿಐ ಯಾವುದೇ ನಿರ್ಧಾರ ತೆಗೆದುಕೊಳ್ಳಲಿ, ನಾನು ಸ್ವಾಗತಿಸುವೆ. ಆದರೆ ಅದಕ್ಕೂ ಮುನ್ನ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಡ್ರಾ , ಚಾಂಪಿಯನ್ಸ್ ಟ್ರೋಫಿ ಮತ್ತು ಏಷ್ಯಾಕಪ್ ಗೆಲ್ಲಲು ತಂಡವನ್ನು ಮುನ್ನಡೆಸಿದ ಕೋಚ್ ನಾನೇ ಎಂಬುದು ನೆನಪಿಸಿಕೊಳ್ಳಬೇಕು ಎಂದು ಗಂಭೀರ್ ಹೇಳಿದ್ದರು.

ಈ ಹೇಳಿಕೆ ಬೆನ್ನಲ್ಲೇ ಬಿಸಿಸಿಐ ಮುಖ್ಯ ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ಅವರನ್ನು ವಜಾಗೊಳಿಸಲಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಆದರೀಗ ಈ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.

ಗೌತಮ್ ಗಂಭೀರ್ ಅವರ ಸ್ಥಾನ ಇನ್ನೂ ಎರಡು ವರ್ಷಗಳ ಕಾಲ ಸೇಫ್ ಎಂದು ತಿಳಿದು ಬಂದಿದೆ.  ಅಂದರೆ ಗಂಭೀರ್ ಅವರನ್ನು 2027 ರ ಏಕದಿನ ವಿಶ್ವಕಪ್​ವರೆಗೆ ಮುಂದುವರೆಸಲು ಬಿಸಿಸಿಐ ನಿರ್ಧರಿಸಿದೆ.

ವಿಶ್ವಕಪ್​ಗಳು ಹತ್ತಿರ ಬರುತ್ತಿರುವುದರಿಂದ ಕೋಚ್ ಬದಲಾವಣೆ ಬಗ್ಗೆ ಚಿಂತಿಸಲಾಗಿಲ್ಲ. ಅಲ್ಲದೆ ಅವರ ಗಂಭೀರ್ ಅವರನ್ನು ವಜಾಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2026 ರಲ್ಲಿ ಟಿ20 ವಿಶ್ವಕಪ್ ಜರುಗಲಿದ್ದು, ಇದಾದ ಬಳಿಕ 2027ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಈ ಎರಡು ವಿಶ್ವಕಪ್ ಮುಗಿಯುವರೆಗೂ ಗೌತಮ್ ಗಂಭೀರ್ ಅವರನ್ನು ಕೋಚ್ ಸ್ಥಾನದಿಂದ ವಜಾಗೊಳಿಸುವುದಿಲ್ಲ ಎಂಬುದು ಖಚಿತವಾಗಿದೆ.

ಆದರೆ 2027ರ ಏಕದಿನ ವಿಶ್ವಕಪ್ ಬೆನ್ನಲ್ಲೇ ಮುಖ್ಯ ಕೋಚ್ ಸ್ಥಾನಕ್ಕೆ ಹೊಸಬರು ಬರಲಿದ್ದಾರೆ. ಏಕೆಂದರೆ ಈ ಹಿಂದಿನಿಂದಲೂ ಬಿಸಿಸಿಐ ಐಸಿಸಿ ಟೂರ್ನಿ ಮುಕ್ತಾಯದ ಬಳಿಕ ಕೋಚ್ ಬದಲಿಸುವ ಸಾಂಪ್ರದಾಯವನ್ನು ಪಾಲಿಸುತ್ತಾ ಬಂದಿದೆ. ಹೀಗಾಗಿ 2027ರ ಏಕದಿನ ವಿಶ್ವಕಪ್ ಗೌತಮ್ ಗಂಭೀರ್ ಅವರ ಕೊನೆಯ ಟೂರ್ನಿ ಆಗಿರಲಿದೆ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ‘ಗಂಭೀರ’ ಸಮಸ್ಯೆ: ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು

ಇನ್ನು ಇದರ ನಡುವೆ ಟೀಮ್ ಇಂಡಿಯಾ ಕೇವಲ 9 ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಲಿದೆ. ಈ ಮ್ಯಾಚ್​ಗಳಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದರೆ 2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲಿದೆ. ಅದರಂತೆ ಮುಂದಿನ ಮೂರು ಐಸಿಸಿ ಟ್ರೋಫಿಗಳೊಂದಿಗೆ ಗೌತಮ್ ಗಂಭೀರ್ ಕೋಚಿಂಗ್ ಸ್ಥಾನಕ್ಕೆ ವಿದಾಯ ಹೇಳಲಿದ್ದಾರಾ ಕಾದು ನೋಡಬೇಕಿದೆ.

Published On - 11:53 am, Thu, 27 November 25

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ