AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಚ್ ಗೌತಮ್ ಗಂಭೀರ್ ಮೇಲೆ ತೂಗುಗತ್ತಿ..!

ಗೌತಮ್ ಗಂಭೀರ್ ಕೋಚ್ ಆದ ಬಳಿಕ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋಲನುಭವಿಸಿದೆ. ಅಂದರೆ 27 ವರ್ಷಗಳ ಬಳಿಕ ಭಾರತ ತಂಡವನ್ನು ಏಕದಿನ ಸರಣಿಯಲ್ಲಿ ಸೋಲಿಸುವಲ್ಲಿ ಲಂಕಾ ಪಡೆ ಯಶಸ್ವಿಯಾಗಿದೆ. ಹಾಗೆಯೇ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನ್ಯೂಝಿಲೆಂಡ್ ತಂಡವು ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿದೆ. ಹೀಗಾಗಿಯೇ ಇದೀಗ ಗಂಭೀರ್ ಅವರ ಕೋಚಿಂಗ್ ಬಗ್ಗೆ ಪ್ರಶ್ನೆಗಳೆದ್ದಿವೆ.

ಕೋಚ್ ಗೌತಮ್ ಗಂಭೀರ್ ಮೇಲೆ ತೂಗುಗತ್ತಿ..!
Gautam Gambhir
ಝಾಹಿರ್ ಯೂಸುಫ್
|

Updated on: Nov 04, 2024 | 12:54 PM

Share

ನ್ಯೂಝಿಲೆಂಡ್ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ ತರಬೇತುದಾರ ಗೌತಮ್ ಗಂಭೀರ್ ಅವರ ಕೋಚಿಂಗ್ ವಿರುದ್ಧ ಪ್ರಶ್ನೆಗಳೆದ್ದಿವೆ. ಇದರ ಬೆನ್ನಲ್ಲೇ ಗಂಭೀರ್ ಅವರ ಯೋಜನೆಗಳ ಮೇಲೆ ನಿಗಾವಹಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ. ಅಂದರೆ ಭಾರತ-ಆಸ್ಟ್ರೇಲಿಯಾ ನಡುವಣ ಸರಣಿಯಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಎಂಬುದನ್ನು ಪರಿಶೀಲಿಸಲಿದೆ.

ಏಕೆಂದರೆ ಟೀಮ್ ಇಂಡಿಯಾ ಆಯ್ಕೆ ವಿಚಾರದಲ್ಲಿ ಗೌತಮ್ ಗಂಭೀರ್‌ಗೆ ಮುಕ್ತ ಅವಕಾಶ ನೀಡಲಾಗಿದೆ. ಇದರ ಜೊತೆ ಗಂಭೀರ್ ಬೇಡಿಕೆಯಿಟ್ಟ ಸಿಬ್ಬಂದಿ ವರ್ಗಗಳನ್ನು ಸಹ ನೀಡಲಾಗಿತ್ತು. ಇದಾಗ್ಯೂ ಭಾರತ ತಂಡವು ಸತತ ವೈಫಲ್ಯ ಅನುಭವಿಸಿದೆ.

ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ತಂಡದ ಆಯ್ಕೆಯಲ್ಲೂ ಗೌತಮ್ ಗಂಭೀರ್ ಭಾಗವಾಗಿದ್ದಾರೆ. ಅವರ ಸೂಚನೆ ಮೇರೆಗೆ ದೆಹಲಿ ವೇಗಿ ಹರ್ಷಿತ್ ರಾಣಾ ಮತ್ತು ಆಂಧ್ರ ಪ್ರದೇಶದ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಬಾರ್ಡರ್-ಗವಾಸ್ಕರ್ ಟ್ರೋಫಿ ತಂಡದಲ್ಲಿ ಸೇರಿಸಲಾಗಿದೆ.

ಅಂದರೆ ಇಲ್ಲಿ ಬಿಸಿಸಿಐ ಗೌತಮ್ ಗಂಭೀರ್ ಅವರ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. ಆದರೆ ಕಳೆದ ಎರಡು ಸರಣಿಗಳಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋಲುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಹೀಗಾಗಿಯೇ ಗೌತಮ್ ಗಂಭೀರ್ ಅವರ ಗರಡಿಯಲ್ಲಿ ಟೀಮ್ ಇಂಡಿಯಾ ಮುಂದಿನ ಸರಣಿಗಳನ್ನು ಹೇಗೆ ಆಡಲಿದೆ ಎಂಬುದನ್ನು ಪರಿಶೀಲಿಸಲು ಬಿಸಿಸಿಐ ಸೂಚಿಸಿದೆ. ಅದರಂತೆ ಗೌತಮ್ ಗಂಭೀರ್ ಅವರ ಸ್ಟ್ರಾಟಜಿ ಪರಿಶೀಲನೆಗೆ ಒಳಪಡುವುದು ಖಚಿತ.

ಅದರಂತೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಗೌತಮ್ ಗಂಭೀರ್ ಪಾಲಿಗೆ ಅಗ್ನಿ ಪರೀಕ್ಷೆ ಎನ್ನಬಹುದು. ಇದಾಗ್ಯೂ ಅವರನ್ನು ಕೋಚ್ ಹುದ್ದೆಯಿಂದ ಕೆಳಗಿಳಿಸುವ ಸಾಧ್ಯತೆಯಿಲ್ಲ. ಏಕೆಂದರೆ ಫೆಬ್ರವರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಕೂಡ ನಡೆಯಲಿದ್ದು, ಅದರಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಎಂಬುದರ ಮೇಲೆ ಗಂಭೀರ್ ಅವರ ಕೋಚಿಂಗ್ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ: ಗಂಭೀರ್ ಗರಡಿಯಲ್ಲಿ ಟೀಮ್ ಇಂಡಿಯಾಗೆ ಹೀನಾಯ ಸೋಲುಗಳ ಸರಮಾಲೆ

ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದರೆ ಕೋಚ್ ಹುದ್ದೆಯಲ್ಲಿ ಗೌತಮ್ ಗಂಭೀರ್ ಸೇಫ್. ಇನ್ನು ಕಳಪೆ ಪ್ರದರ್ಶನದೊಂದಿಗೆ ಸರಣಿ ಕಳೆದುಕೊಂಡರೆ, ಗಂಭೀರ್ ಅವರ ಡಿಮ್ಯಾಂಡ್​ಗಳಿಗೆ ಕಡಿವಾಣ ಬೀಳಲಿದೆ. ಅಲ್ಲದೆ ಆಯ್ಕೆ ಸಮಿತಿ ಸೂಚಿಸಿದಂತೆ ಟೀಮ್ ಇಂಡಿಯಾ ಇರಲಿದೆ. ಹೀಗಾಗಿಯೇ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಗೌತಮ್ ಗಂಭೀರ್ ಪಾಲಿಗೆ ಅಸಲಿ ಅಗ್ನಿ ಪರೀಕ್ಷೆ ಎಂದರೆ ತಪ್ಪಾಗಲಾರದು.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?