AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

W,W,W,0,W,W.. ಒಂದೇ ಓವರ್​ನಲ್ಲಿ 5 ವಿಕೆಟ್ ಉರುಳಿಸಿದ 28 ವರ್ಷದ ವೇಗಿ

Gede Priandana's T20I Record: ಇಂಡೋನೇಷ್ಯಾದ ಬೌಲರ್ ಗೆಡೆ ಪ್ರಿಯಂದನ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಐದು ವಿಕೆಟ್ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಕಾಂಬೋಡಿಯಾ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದರು, ಇದರಲ್ಲಿ ಹ್ಯಾಟ್ರಿಕ್ ಕೂಡ ಸೇರಿದೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬೌಲರ್ ಇವರಾಗಿದ್ದು, ಚುಟುಕು ಕ್ರಿಕೆಟ್‌ನ ಹೊಸ ದಾಖಲೆಗೆ ಸಾಕ್ಷಿಯಾಗಿದೆ.

W,W,W,0,W,W..  ಒಂದೇ ಓವರ್​ನಲ್ಲಿ 5 ವಿಕೆಟ್ ಉರುಳಿಸಿದ 28 ವರ್ಷದ ವೇಗಿ
Gede Priandana
ಪೃಥ್ವಿಶಂಕರ
|

Updated on: Dec 23, 2025 | 7:55 PM

Share

ಅಂತರರಾಷ್ಟ್ರೀಯ ಟಿ20 (International T20) ಕ್ರಿಕೆಟ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆಯುವುದು ಪ್ರತಿಯೊಬ್ಬ ಬೌಲರ್‌ನ ಕನಸಾಗಿರುತ್ತದೆ. ಏಕೆಂದರೆ ನಾಲ್ಕು ಓವರ್‌ಗಳಲ್ಲಿ ಈ ಸಾಧನೆ ಮಾಡುವುದು ಅತ್ಯಂತ ಕಷ್ಟಕರ. ಹೀಗಿರುವಾಗ ಒಂದೇ ಓವರ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆಯುವುದು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆಯುವುದು ಚುಟುಕು ಕ್ರಿಕೆಟ್​ನಲ್ಲಿ ಕಂಡುಬರುವುದು ತೀರ ವಿರಳ. ಅಂತಹದರಲ್ಲಿ ಇಂಡೋನೇಷ್ಯಾದ 28 ವರ್ಷದ ಬಲಗೈ ವೇಗದ ಬೌಲರ್ ಗೆಡೆ ಪ್ರಿಯಂದನ (Gede Priandana) ಒಂದೇ ಓವರ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆಯುವ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದ್ದಾರೆ, ಇದರಲ್ಲಿ ಹ್ಯಾಟ್ರಿಕ್ ಕೂಡ ಸೇರಿದೆ.

ಒಂದೇ ಓವರ್‌ನಲ್ಲಿ 5 ವಿಕೆಟ್‌

ಇಂಡೋನೇಷ್ಯಾ ಪ್ರಸ್ತುತ ಕಾಂಬೋಡಿಯಾ ವಿರುದ್ಧ ಎಂಟು ಪಂದ್ಯಗಳ ಟಿ20ಐ ಸರಣಿಯನ್ನು ಆಡುತ್ತಿದೆ. ಡಿಸೆಂಬರ್ 23 ರಂದು ಬಾಲಿಯಲ್ಲಿ ನಡೆದ ಈ ಸರಣಿಯ ಮೊದಲ ಟಿ20ಪಂದ್ಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಮಹತ್ವದ್ದಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕಾಂಬೋಡಿಯಾ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಇಂಡೋನೇಷ್ಯಾ 20 ಓವರ್‌ಗಳಲ್ಲಿ ಐದು ವಿಕೆಟ್‌ಗಳ ನಷ್ಟಕ್ಕೆ 167 ರನ್ ಗಳಿಸಿತು. ತಂಡದ ಪರ ಧರ್ಮ ಕೆಸ್ಮಾ 110 ರನ್‌ಗಳ ಇನ್ನಿಂಗ್ಸ್‌ ಆಡಿದರು. ಇದರಲ್ಲಿ ಎಂಟು ಬೌಂಡರಿಗಳು ಮತ್ತು ಆರು ಸಿಕ್ಸರ್‌ಗಳು ಸೇರಿದ್ದವು.

ಹ್ಯಾಟ್ರಿಕ್ ಜೊತೆಗೆ 5 ವಿಕೆಟ್

ಇದಕ್ಕೆ ಪ್ರತಿಕ್ರಿಯೆಯಾಗಿ ಗುರಿ ಬೆನ್ನಟ್ಟಿದ ಕಾಂಬೋಡಿಯಾ 16 ಓವರ್‌ಗಳಲ್ಲಿ 107 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರಮುಖ ಕಾರಣ ಗೆಡೆ ಪ್ರಿಯಂದನ ಅವರ ಮಾರಕ ಬೌಲಿಂಗ್. ಗೆಡೆ ಪ್ರಿಯಂದನ ಒಂದೇ ಓವರ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆಯುವ ಮೂಲಕ ಕಾಂಬೋಡಿಯಾ ತಂಡವನ್ನು ಕಾಡಿದರು. ಈ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಇಂತಹ ಸಾಧನೆ ಮಾಡಿದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 168 ರನ್‌ಗಳನ್ನು ಬೆನ್ನಟ್ಟಿದ ಕಾಂಬೋಡಿಯಾ 15 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 106 ರನ್ ಗಳಿಸಿತ್ತು. ಹೀಗಾಗಿ ಪಂದ್ಯವು ನಿರ್ಣಾಯಕ ಹಂತದಲ್ಲಿತ್ತು. ನಂತರ ದಾಳಿಗಿಳಿದ ಪ್ರಿಯಂದನ ತಮ್ಮ ಮೊದಲ ಓವರ್‌ನಲ್ಲಿಯೇ ಅದ್ಭುತ ಪ್ರದರ್ಶನ ನೀಡಿದರು. ಮೊದಲ ಮೂರು ಎಸೆತಗಳಲ್ಲಿ ಸತತ ವಿಕೆಟ್‌ಗಳನ್ನು ಪಡೆದು ಹ್ಯಾಟ್ರಿಕ್ ಪೂರ್ಣಗೊಳಿಸಿದರು. ನಂತರ 4ನೇ ಎಸೆತದಲ್ಲಿ ಯಾವುದೇ ರನ್ ಆಗಲಿ ಅಥವಾ ವಿಕೆಟ್ ಆಗಲಿ ಬರಲಿಲ್ಲ. ಆದರೆ ಓವರ್​ನ ಕೊನೆಯ ಎರಡು ಎಸೆತಗಳಲ್ಲಿ ಇನ್ನಿಬ್ಬರು ಬ್ಯಾಟ್ಸ್‌ಮನ್‌ಗಳು ಔಟ್ ಆದರು. ಹೀಗಾಗಿ ಕಾಂಬೋಡಿಯಾದ ಇನ್ನಿಂಗ್ಸ್ 107 ಕ್ಕೆ ಅಂತ್ಯವಾಯಿತು. ಅಂತಿಮವಾಗಿ ಇಂಡೋನೇಷ್ಯಾ ಪಂದ್ಯವನ್ನು 60 ರನ್‌ಗಳಿಂದ ಗೆದ್ದುಕೊಂಡಿತು.

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ

ಟಿ20 ಕ್ರಿಕೆಟ್‌ನಲ್ಲಿ ಮೂರನೇ ಬಾರಿಗೆ

ಟಿ20 ಕ್ರಿಕೆಟ್‌ನಲ್ಲಿ (ದೇಶೀಯ ಮಟ್ಟದಲ್ಲಿ) ಈ ಹಿಂದೆ ಎರಡು ಬಾರಿ ಓವರ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆದ ಘಟನೆಗಳು ನಡೆದಿವೆ. ಬಾಂಗ್ಲಾದೇಶದ ಅಲ್-ಅಮೀನ್ ಹೊಸೇನ್ 2013-14ರ ವಿಕ್ಟರಿ ಡೇ ಟಿ20 ಕಪ್‌ನಲ್ಲಿ ಈ ಸಾಧನೆ ಮಾಡಿದ್ದರು. ಹಾಗೆಯೇ ಕನ್ನಡಿಗ ಅಭಿಮನ್ಯು ಮಿಥುನ್ 2019-20ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಈ ಸಾಧನೆ ಮಾಡಿದ್ದರು. ಆದರೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮೊದಲ ಬಾರಿಗೆ ಸಂಭವಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ