AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: RCB ತಂಡಕ್ಕೆ ಹೊಸ ಆಟಗಾರ್ತಿ ಎಂಟ್ರಿ

Georgia Wareham: 24 ವರ್ಷದ ಜಾರ್ಜಿಯಾ ವೇರ್ಹ್ಯಾಮ್ ಸ್ಪಿನ್ ಬೌಲರ್​. ಆಸ್ಟ್ರೇಲಿಯಾ ಪರ 46 ಟಿ20 ಪಂದ್ಯಗಳನ್ನಾಡಿರುವ ಜಾರ್ಜಿಯಾ 44 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಕಳೆದ ಸೀಸನ್​​ನಲ್ಲಿ ಗುಜರಾತ್ ಜೈಂಟ್ಸ್ ತಂಡದಲ್ಲಿದ್ದರು.

WPL 2024: RCB ತಂಡಕ್ಕೆ ಹೊಸ ಆಟಗಾರ್ತಿ ಎಂಟ್ರಿ
Georgia Wareham
TV9 Web
| Edited By: |

Updated on: Dec 09, 2023 | 3:35 PM

Share

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ಮಿನಿ ಹರಾಜಿನ ಮೊದಲ ಬಿಡ್ಡಿಂಗ್ ಅನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿದೆ. ಆಸ್ಟ್ರೇಲಿಯಾದ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು 40 ಲಕ್ಷ ರೂ.ಗೆ ಆರ್​ಸಿಬಿ ಬಿಡ್ ಮಾಡಿದೆ. ಇದರೊಂದಿಗೆ ಆರ್​ಸಿಬಿ ತಂಡದ ಆಟಗಾರ್ತಿಯರ ಸಂಖ್ಯೆ 12 ಕ್ಕೇರಿದೆ.

24 ವರ್ಷದ ಜಾರ್ಜಿಯಾ ವೇರ್ಹ್ಯಾಮ್ ಸ್ಪಿನ್ ಬೌಲರ್​. ಆಸ್ಟ್ರೇಲಿಯಾ ಪರ 46 ಟಿ20 ಪಂದ್ಯಗಳನ್ನಾಡಿರುವ ಜಾರ್ಜಿಯಾ 44 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಕಳೆದ ಸೀಸನ್​​ನಲ್ಲಿ ಗುಜರಾತ್ ಜೈಂಟ್ಸ್ ತಂಡದಲ್ಲಿದ್ದರು. ಇದೀಗ ಹರಾಜಿನಲ್ಲಿ ಕಾಣಿಸಿಕೊಂಡಿರುವ ಆಸೀಸ್ ಸ್ಪಿನ್ನರ್ ಅನ್ನು ತನ್ನದಾಗಿಸಿಕೊಳ್ಳುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ.

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 11 ಆಟಗಾರ್ತಿಯರನ್ನು ಉಳಿಸಿಕೊಂಡಿತ್ತು. ಇದೀಗ ಖಾಲಿಯಿರುವ ಸ್ಥಾನಗಳಿಗೆ ಹರಾಜು ಪ್ರಕ್ರಿಯೆ ನಡೆಯುತ್ತಿದೆ.

RCB ಉಳಿಸಿಕೊಂಡಿರುವ ಆಟಗಾರ್ತಿಯರು: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್.

ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮಗಳ ಅಡಿಯಲ್ಲಿ, ಪ್ರತಿ ಫ್ರಾಂಚೈಸಿಯು ತನ್ನ ತಂಡದಲ್ಲಿ ಕನಿಷ್ಠ 15 ಮತ್ತು ಗರಿಷ್ಠ 18 ಆಟಗಾರರ್ತಿಯರನ್ನು ಹೊಂದಿರಬೇಕು. ಇದರಲ್ಲಿ 6 ವಿದೇಶಿ ಆಟಗಾರ್ತಿಯರಿಗೆ ಮಾತ್ರ ಅವಕಾಶ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ಎಂಟ್ರಿ: ಹಾರ್ದಿಕ್ ಪಾಂಡ್ಯಗೆ ಪ್ರತಿಸ್ಪರ್ಧಿ?

ಅದರಂತೆ ಸದ್ಯ, ಹರಾಜಿನಲ್ಲಿ ಒಟ್ಟು 30 ಆಟಗಾರ್ತಿಯರಿಗೆ ಸ್ಲಾಟ್‌ಗಳು ಖಾಲಿಯಾಗಿವೆ. ಇದರಲ್ಲಿ 9 ವಿದೇಶಿ ಆಟಗಾರ್ತಿಯರನ್ನು ಮಾತ್ರ ಮಾತ್ರ ಖರೀದಿಸಬಹುದು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ