IND vs SA: ಸೌತ್ ಆಫ್ರಿಕಾಗೆ ಬಿಗ್ ಶಾಕ್: ತಂಡದಿಂದ ಸ್ಟಾರ್ ಆಟಗಾರ ಔಟ್..!
India vs South Africa 2nd Test: ಬುಧವಾರದಿಂದ ಶುರುವಾಗಲಿರುವ ಎರಡನೇ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸರಣಿಯನ್ನು 1-1 ಅಂತರದಿಂದ ಡ್ರಾ ಮಾಡಿಕೊಳ್ಳಬಹುದು. ಅತ್ತ ಸೌತ್ ಆಫ್ರಿಕಾ ತಂಡವು ಈ ಪಂದ್ಯದಲ್ಲಿ ಡ್ರಾ ಸಾಧಿಸಿದರೂ 1-0 ಅಂತರದಿಂದ ಸರಣಿ ಗೆಲ್ಲಬಹುದು.
ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಸೌತ್ ಆಫ್ರಿಕಾ (South Africa) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಬೌಲರ್ ಜೆರಾಲ್ಡ್ ಕೋಟ್ಝಿ (Gerald Coetzee) ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಜೆರಾಲ್ಡ್ ಪೆಲ್ವಿಕ್ ಉರಿಯೂತದ ಸಮಸ್ಯೆಗೆ ಒಳಗಾಗಿದ್ದರು.
ಇದೀಗ ಈ ಸಮಸ್ಯೆ ಉಲ್ಬಣಗೊಂಡಿರುವ ಕಾರಣ ಕೇಪ್ಟೌನ್ನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಒಟ್ಟು 21 ಓವರ್ಗಳನ್ನು ಬೌಲಿಂಗ್ ಮಾಡಿದ್ದ ಜೆರಾಲ್ಡ್ 1 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಟೀಮ್ ಇಂಡಿಯಾ ಬ್ಯಾಟರ್ಗಳನ್ನು ಕಾಡುವಲ್ಲಿ ಯಶಸ್ವಿಯಾಗಿದ್ದರು.
ಇದೀಗ ಸರಣಿ ಗೆಲುವಿಗೆ ನಿರ್ಣಾಯಕವಾಗಿ ಪಂದ್ಯಕ್ಕೂ ಮುನ್ನ 23 ವರ್ಷದ ಯುವ ವೇಗಿ ಜೆರಾಲ್ಡ್ ಕೋಟ್ಝಿ ಹೊರಗುಳಿಯುತ್ತಿರುವುದು ಸೌತ್ ಆಫ್ರಿಕಾ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು.
COETZEE RULED OUT OF NEW YEAR’S TEST AGAINST INDIA 🇿🇦🇮🇳
Fast bowler Gerald Coetzee will miss the second Betway Test against India after developing pelvic inflammation during the first Test at SuperSport Park. #WozaNawe #BePartOfIt #SAvIND pic.twitter.com/MLHKRw86OK
— Proteas Men (@ProteasMenCSA) December 30, 2023
ಇನ್ನು ಮೊದಲ ಟೆಸ್ಟ್ ಪಂದ್ಯದ ಫೀಲ್ಡಿಂಗ್ಗೆ ವೇಳೆ ಗಾಯಗೊಂಡಿದ್ದ ನಾಯಕ ಟೆಂಬಾ ಬವುಮಾ ಕೂಡ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ಸೌತ್ ಆಫ್ರಿಕಾ ತಂಡವನ್ನು ಡೀನ್ ಎಲ್ಗರ್ ಮುನ್ನಡೆಸುವ ಸಾಧ್ಯತೆಯಿದೆ.
ಭಾರತ-ಸೌತ್ ಆಫ್ರಿಕಾ 2ನೇ ಟೆಸ್ಟ್ ಪಂದ್ಯ ಯಾವಾಗ?
ಸೌತ್ ಆಫ್ರಿಕಾ-ಭಾರತ ನಡುವಣ 2ನೇ ಟೆಸ್ಟ್ ಪಂದ್ಯವು ಜನವರಿ 3 ರಿಂದ ಶುರುವಾಗಲಿದೆ. ಕೇಪ್ಟೌನ್ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ 2 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಇನಿಂಗ್ಸ್ ಹಾಗೂ 32 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಇನ್ನು ಬುಧವಾರದಿಂದ ಶುರುವಾಗಲಿರುವ ಎರಡನೇ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸರಣಿಯನ್ನು 1-1 ಅಂತರದಿಂದ ಡ್ರಾ ಮಾಡಿಕೊಳ್ಳಬಹುದು. ಅತ್ತ ಸೌತ್ ಆಫ್ರಿಕಾ ತಂಡವು ಈ ಪಂದ್ಯದಲ್ಲಿ ಡ್ರಾ ಸಾಧಿಸಿದರೂ 1-0 ಅಂತರದಿಂದ ಸರಣಿ ಗೆಲ್ಲಬಹುದು. ಹೀಗಾಗಿ ಕೇಪ್ಟೌನ್ನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.
ಇದನ್ನೂ ಓದಿ: IPL 2024: ಹಾರ್ದಿಕ್ ಪಾಂಡ್ಯಗಾಗಿ 100 ಕೋಟಿ ರೂ. ನೀಡಿದ ಮುಂಬೈ ಇಂಡಿಯನ್ಸ್..!
ಸೌತ್ ಆಫ್ರಿಕಾ ತಂಡ: , ಡೇವಿಡ್ ಬೆಡಿಂಗ್‌ಹ್ಯಾಮ್, ನಾಂಡ್ರೆ ಬರ್ಗರ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆನ್ನೆ, ಟೋನಿ ಡಿ ಝೋರ್ಝಿ, ಡೀನ್ ಎಲ್ಗರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಕೀಗನ್ ಪೀಟರ್ಸನ್.
Published On - 12:59 pm, Sat, 30 December 23