AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GGW vs RCB: ಮಹಿಳಾ ಪ್ರೀಮಿಯರ್​​ಲೀಗ್​ನಲ್ಲಿ ಮೊದಲ ಪಂದ್ಯ; ಇಲ್ಲಿದೆ ವಿವರ

2025ನೇ ಸಾಲಿನ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ರೋಮಾಂಚಕಾರಿ ಪಂದ್ಯ ಇಂದು, ಫೆಬ್ರವರಿ 14ರಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಲಿದೆ. ಪಂದ್ಯ ವಡೋದರದ ಕೋಟಂಬಿ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ. ಈ ಪಂದ್ಯವನ್ನು ಜಿಯೋ ಸಿನಿಮಾ ಮತ್ತು ಸ್ಪೋರ್ಟ್ಸ್ 18ರಲ್ಲಿ ವೀಕ್ಷಿಸಬಹುದು.

GGW vs RCB: ಮಹಿಳಾ ಪ್ರೀಮಿಯರ್​​ಲೀಗ್​ನಲ್ಲಿ ಮೊದಲ ಪಂದ್ಯ; ಇಲ್ಲಿದೆ ವಿವರ
Wpl
ರಾಜೇಶ್ ದುಗ್ಗುಮನೆ
|

Updated on: Feb 14, 2025 | 2:46 PM

Share

2025ನೇ ಸಾಲಿನ ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಇಂದು (ಫೆಬ್ರವರಿ 14) ನಡೆಯಲಿದೆ. ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜಿಯಂಟ್ಸ್ ವುಮನ್ ಮುಖಾಮುಖಿ ಆಗುತ್ತಿವೆ. ಇದು ಈ ಸೀಸನ್​ನ ಮೊದಲ ಪಂದ್ಯ ಆಗಿರುವುದರಿಂದ ಸಾಕಷ್ಟು ಕುತೂಹಲ ಮೂಡಿದೆ. ಈ ಪಂದ್ಯ ಎಲ್ಲಿ ನಡೆಯಲಿದೆ? ಎಷ್ಟು ಗಂಟೆಗೆ ನಡೆಯಲಿದೆ ಮತ್ತು ಇದನ್ನು ಎಲ್ಲಿ ವೀಕ್ಷಿಸಬಹುದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ

ಇಂದಿನ ವುಮನ್ ಪ್ರೀಮಿಯರ್ ಲೀಗ್​​ ಸಖತ್ ಥ್ರಿಲ್ಲಿಂಗ್ ಮ್ಯಾಚ್ ಆಗುವ ಎಲ್ಲಾ ಸಾಧ್ಯತೆ ಇದೆ. ಇಂದಿನ ಪಂದ್ಯ ರಾತ್ರಿ 7.30ಕ್ಕೆ ಆರಂಭ ಆಗಲಿದೆ. ವಡೋದರದ ಕೋಟಂಬಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ವಡೋದರದ ಈ ಸ್ಟೇಡಿಯಂ ಹೈ ಸ್ಕೋರ್ ಮ್ಯಾಚ್​​ಗಳಿಗೆ ಖ್ಯಾತಿ ಪಡೆದಿದೆ. ಇದು ಬ್ಯಾಟರ್​ಗಳ ಪಿಚ್ ಆಗಿರುವುದರಿಂದ ಹೆಚ್ಚಿನ ರನ್​ಗಳನ್ನು ನಿರೀಕ್ಷಿಸಬಹುದು.

ವಡೋದರದಲ್ಲಿ ವಾತಾವರಣ ಕೂಡ ಉತ್ತಮವಾಗಿದೆ. ಇಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಮಳೆ ಬರುವ ಸಾಧ್ಯತೆ ಜೀರೋ ಆಗಿರುವುದರಿಂದ, ಪಂದ್ಯ ನಿಲ್ಲಬಹುದು ಎಂಬ ಭಯ ಇಲ್ಲ.  ಇಲ್ಲಿನ ಹವಾಮಾನ 25 ಡಿಗ್ರೀ ಸೆಲ್ಸಿಯಸ್ ಇದೆ.

ಇದನ್ನೂ ಓದಿ: ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಸ್ಟಾರ್ ಆಟಗಾರರ ವಿರುದ್ಧ ಕಠಿಣ ಕ್ರಮ

ಗುಜರಾತ್ ಜಿಯಂಟ್ಸ್ ತಂಡವನ್ನು ಆಶ್ಲೀ ಗಾರ್ಡ್ನರ್ ಅವರು ಮುನ್ನಡೆಸುತ್ತಿದ್ದಾರೆ. ಆರ್​ಸಿಬಿಗೆ ಸ್ಮೃತಿ ಮಂಧಾನ ನಾಯಕಿ. ಕಳೆದ ವರ್ಷ ಕಪ್ ಗೆದ್ದಿರುವುದರಿಂದ ಈ ಬಾರಿ ಶುಭಾರಂಭದೊಂದಿಗೆ ಪಂದ್ಯ ಆರಂಭಿಸುವ ನಿರೀಕ್ಷೆಯಲ್ಲಿ ತಂಡ ಇದೆ.

ವೀಕ್ಷಣೆ ಎಲ್ಲಿ?

ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನ ಜಿಯೋ ಸಿನಿಮಾ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ. ಸ್ಪೋರ್ಟ್ಸ್​ 18 ಟಿವಿ ಪ್ರಸಾರ ಹಕ್ಕನ್ನು ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ