AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn maxwell: ಗ್ಲೆನ್ ಮ್ಯಾಕ್ಸ್​ವೆಲ್​ಗೆ ಮದುವೆ ಫಿಕ್ಸ್: ತಮಿಳಿನಲ್ಲಿ ಆಮಂತ್ರಣ ಪತ್ರ

Glenn maxwell and vini raman: ಇಂಡಿಯನ್ ಪ್ರೀಮಿಯರ್ ಲೀಗ್‌ಗಾಗಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಉಳಿಸಿಕೊಂಡಿದೆ. ಕಳೆದ ಸೀಸನ್​ನಲ್ಲಿ ಆರ್‌ಸಿಬಿ ಸೇರಿಕೊಂಡಿದ್ದ ಮ್ಯಾಕ್ಸಿ ಭರ್ಜರಿ ಪ್ರದರ್ಶನ ನೀಡಿದ್ದರು.

Glenn maxwell: ಗ್ಲೆನ್ ಮ್ಯಾಕ್ಸ್​ವೆಲ್​ಗೆ ಮದುವೆ ಫಿಕ್ಸ್: ತಮಿಳಿನಲ್ಲಿ ಆಮಂತ್ರಣ ಪತ್ರ
Glenn maxwell and vini raman
TV9 Web
| Edited By: |

Updated on:Feb 15, 2022 | 2:22 PM

Share

ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಭಾರತೀಯ ಮೂಲದ ಗರ್ಲ್​​ಫ್ರೆಂಡ್ ವಿನಿ ರಾಮನ್ ಅವರನ್ನು ವರಿಸಲಿದ್ದಾರೆ. ಮಾರ್ಚ್ 27 ರಂದು ತಮಿಳು ಸಂಪ್ರದಾಯದಂತೆ ಇಬ್ಬರೂ ಹಸೆಮಣೆ ಏರಲಿದ್ದಾರೆ. ಇದೀಗ ಈ ಜೋಡಿಯ ಮದುವೆ ಆಮಂತ್ರಣ ಪತ್ರ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಏಕೆಂದರೆ ತಮಿಳುನಾಡು ಮೂಲದವರಾಗಿರುವ ವಿನಿ ರಾಮನ್ ಅವರು ತಮ್ಮ ವಿವಾಹ ಆಮಂತ್ರಣ ಪತ್ರವನ್ನು ತಮಿಳಿನಲ್ಲೇ ಮುದ್ರಿಸಿದ್ದಾರೆ.

ಈ ಆಮಂತ್ರಣ ಪತ್ರದ ಫೋಟೋವನ್ನು ಕಸ್ತೂರಿ ಶಂಕರ್ ಎಂಬವರು ಟ್ವೀಟ್ ಮಾಡಿದ್ದು, “ಗ್ಲೆನ್ ಮ್ಯಾಕ್ಸ್‌ವೆಲ್ ವಿನಿ ರಾಮನ್ ಅವರನ್ನು ಮದುವೆಯಾಗುತ್ತಿದ್ದಾರೆ. ವೆಡ್ಡಿಂಗ್ ಕಾರ್ಡ್ ಸಾಂಪ್ರದಾಯಿಕ ತಮಿಳು ಮುಹೂರ್ತ ಪತ್ರಿಕೆ ಮಾದರಿಯಲ್ಲಿದೆ. ಹೀಗಾಗಿ ಈ ಜೋಡಿ ತಮಿಳು ಸಂಪ್ರದಾಯದ ಪ್ರಕಾರ ನಡೆಯಲಿದೆ ಎಂದು ಹೇಳಬಹುದು ಎಂದು ಟ್ವಿಟಿಸಿದ್ದಾರೆ.

ಗ್ಲೆನ್ ಮ್ಯಾಕ್ಸ್‌ವೆಲ್ ಪ್ರಸ್ತುತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದಾರೆ. ಸದ್ಯ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದ್ದು ಆದರೆ, ಈ ಸರಣಿಯಲ್ಲಿ ಮ್ಯಾಕ್ಸ್​ವೆಲ್ ಇದುವರೆಗೆ ಹೆಚ್ಚಿನ ಪ್ರಭಾವ ಬೀರಲು ಸಾಧ್ಯವಾಗಿಲ್ಲ. ಮೊದಲ ಎರಡು ಪಂದ್ಯಗಳಲ್ಲಿ ಮ್ಯಾಕ್ಸ್‌ವೆಲ್ ಏಳು ಮತ್ತು 15 ರನ್ ಮಾತ್ರ ಗಳಿಸಿದ್ದಾರೆ.

ಆರ್​ಸಿಬಿ ತಂಡದಲ್ಲಿ ಮ್ಯಾಕ್ಸ್​ವೆಲ್: ಇಂಡಿಯನ್ ಪ್ರೀಮಿಯರ್ ಲೀಗ್‌ಗಾಗಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಉಳಿಸಿಕೊಂಡಿದೆ. ಕಳೆದ ಸೀಸನ್​ನಲ್ಲಿ ಆರ್‌ಸಿಬಿ ಸೇರಿಕೊಂಡಿದ್ದ ಮ್ಯಾಕ್ಸಿ ಭರ್ಜರಿ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ತಂಡದಲ್ಲೇ ರಿಟೈನ್ ಮಾಡಿಕೊಂಡಿದೆ. ಹಾಗೆಯೇ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಕೂಡ ಆರ್‌ಸಿಬಿ ಉಳಿಸಿಕೊಂಡಿತ್ತು.

ಆರ್​ಸಿಬಿ ಹೊಸ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್‌ ಪ್ರಭುದೇಸಾಯ್, ಚಮ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.

ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..! 

Published On - 2:20 pm, Tue, 15 February 22

Follow Us
TV9 Web
TV9 Web

TV9 Kannada

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ