ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಭಾರತೀಯ ಮೂಲದ ಗರ್ಲ್ಫ್ರೆಂಡ್ ವಿನಿ ರಾಮನ್ ಅವರನ್ನು ವರಿಸಲಿದ್ದಾರೆ. ಮಾರ್ಚ್ 27 ರಂದು ತಮಿಳು ಸಂಪ್ರದಾಯದಂತೆ ಇಬ್ಬರೂ ಹಸೆಮಣೆ ಏರಲಿದ್ದಾರೆ. ಇದೀಗ ಈ ಜೋಡಿಯ ಮದುವೆ ಆಮಂತ್ರಣ ಪತ್ರ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಏಕೆಂದರೆ ತಮಿಳುನಾಡು ಮೂಲದವರಾಗಿರುವ ವಿನಿ ರಾಮನ್ ಅವರು ತಮ್ಮ ವಿವಾಹ ಆಮಂತ್ರಣ ಪತ್ರವನ್ನು ತಮಿಳಿನಲ್ಲೇ ಮುದ್ರಿಸಿದ್ದಾರೆ.
ಈ ಆಮಂತ್ರಣ ಪತ್ರದ ಫೋಟೋವನ್ನು ಕಸ್ತೂರಿ ಶಂಕರ್ ಎಂಬವರು ಟ್ವೀಟ್ ಮಾಡಿದ್ದು, “ಗ್ಲೆನ್ ಮ್ಯಾಕ್ಸ್‌ವೆಲ್ ವಿನಿ ರಾಮನ್ ಅವರನ್ನು ಮದುವೆಯಾಗುತ್ತಿದ್ದಾರೆ. ವೆಡ್ಡಿಂಗ್ ಕಾರ್ಡ್ ಸಾಂಪ್ರದಾಯಿಕ ತಮಿಳು ಮುಹೂರ್ತ ಪತ್ರಿಕೆ ಮಾದರಿಯಲ್ಲಿದೆ. ಹೀಗಾಗಿ ಈ ಜೋಡಿ ತಮಿಳು ಸಂಪ್ರದಾಯದ ಪ್ರಕಾರ ನಡೆಯಲಿದೆ ಎಂದು ಹೇಳಬಹುದು ಎಂದು ಟ್ವಿಟಿಸಿದ್ದಾರೆ.
ಗ್ಲೆನ್ ಮ್ಯಾಕ್ಸ್‌ವೆಲ್ ಪ್ರಸ್ತುತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದಾರೆ. ಸದ್ಯ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಐದು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದ್ದು ಆದರೆ, ಈ ಸರಣಿಯಲ್ಲಿ ಮ್ಯಾಕ್ಸ್‌ವೆಲ್ ಇದುವರೆಗೆ ಹೆಚ್ಚಿನ ಪ್ರಭಾವ ಬೀರಲು ಸಾಧ್ಯವಾಗಿಲ್ಲ. ಮೊದಲ ಎರಡು ಪಂದ್ಯಗಳಲ್ಲಿ ಮ್ಯಾಕ್ಸ್‌ವೆಲ್ ಏಳು ಮತ್ತು 15 ರನ್ ಮಾತ್ರ ಗಳಿಸಿದ್ದಾರೆ.
GlennMaxwell marrying Vini Raman. Going by the cute traditional Tamil muhurta patrikai, we’d bet there may likely be a TamBram ceremony… Will there be a white gown wedding too?
Congratulations Glenn and Vini ! @Gmaxi_32 pic.twitter.com/uJeSjHM1we— Kasturi Shankar (@KasthuriShankar) February 12, 2022
ಆರ್‌ಸಿಬಿ ತಂಡದಲ್ಲಿ ಮ್ಯಾಕ್ಸ್‌ವೆಲ್:
ಇಂಡಿಯನ್ ಪ್ರೀಮಿಯರ್ ಲೀಗ್‌ಗಾಗಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಉಳಿಸಿಕೊಂಡಿದೆ. ಕಳೆದ ಸೀಸನ್ನಲ್ಲಿ ಆರ್‌ಸಿಬಿ ಸೇರಿಕೊಂಡಿದ್ದ ಮ್ಯಾಕ್ಸಿ ಭರ್ಜರಿ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ತಂಡದಲ್ಲೇ ರಿಟೈನ್ ಮಾಡಿಕೊಂಡಿದೆ. ಹಾಗೆಯೇ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಕೂಡ ಆರ್‌ಸಿಬಿ ಉಳಿಸಿಕೊಂಡಿತ್ತು.
ಆರ್‌ಸಿಬಿ ಹೊಸ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್ ಪ್ರಭುದೇಸಾಯ್, ಚಮ ಮಿಲಿಂದ್, ಅನೀಶ್ವರ್ ಗೌತಮ್, ಕರಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.
ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..!
Published On - 2:20 pm, Tue, 15 February 22