Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮ್ಯಾಕ್ಸ್​ವೆಲ್​ನ ಹೊಸ ಶಾಟ್​ಗೆ ಏನೆಂದು ಹೆಸರಿಡಬಹುದು?

Glenn Maxwell: ಈ ಪಂದ್ಯದಲ್ಲಿ ಕೇವಲ 15 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 32 ರನ್ ಬಾರಿಸುವ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ 12.1 ಓವರ್​ಗಳಲ್ಲಿ ಮೆಲ್ಬೋರ್ನ್​ ಸ್ಟಾರ್ಸ್ ತಂಡವನ್ನು ಗೆಲುವಿನ ಗುರಿ ಮುಟ್ಟಿಸಿದರು.

VIDEO: ಮ್ಯಾಕ್ಸ್​ವೆಲ್​ನ ಹೊಸ ಶಾಟ್​ಗೆ ಏನೆಂದು ಹೆಸರಿಡಬಹುದು?
Glenn Maxwell
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 03, 2024 | 3:00 PM

ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಸ್ವಿಚ್ ಹಿಟ್​ ಹಾಗೂ ರಿವರ್ಸ್​ ಸ್ವೀಪ್ ಶಾಟ್​​ಗಳ ಮೂಲಕ ಬೌಲರ್​ಗಳ ಬೆಂಡೆತ್ತಿರುವುದು ಎಲ್ಲರೂ ನೋಡಿರುತ್ತೀರಿ. ಇದೀಗ ಮ್ಯಾಕ್ಸ್​ವೆಲ್ ಬ್ಯಾಟ್​ನಿಂದ ಮತ್ತೊಂದು ಹೊಸ ಬಗೆಯ ಶಾಟ್ ಮೂಡಿ ಬಂದಿದೆ. ಬಿಗ್ ಬ್ಯಾಷ್​ ಲೀಗ್​ನಲ್ಲಿ ಮೆಲ್ಬೋರ್ನ್​ ಸ್ಟಾರ್ಸ್ ಪರ ಆಡುತ್ತಿರುವ ಮ್ಯಾಕ್ಸಿ ವಿಭಿನ್ನ ಶಾಟ್ ಬಾರಿಸುವ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಮೆಲ್ಬೋರ್ನ್ ರೆನೆಗೇಡ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮೆಲ್ಬೋರ್ನ್ ಸ್ಟಾರ್ಸ್ ತಂಡದ ನಾಯಕ ಗ್ಲೆನ್ ಮ್ಯಾಕ್ಸ್​ವೆಲ್ ಬೌಲಿಂಗ್ ಆಯ್ದುಕೊಂಡರು.

ಅದರಂತೆ ಮಳೆಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೆಲ್ಬೋರ್ನ್​ ರೆನೆಗೇಡ್ಸ್ ತಂಡವು ನಿಗದಿತ 14 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 97 ರನ್ ಕಲೆಹಾಕಿತು.

98 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಮೆಲ್ಬೋರ್ನ್​ ಸ್ಟಾರ್ಸ್ ತಂಡಕ್ಕೆ ಆರಂಭಿಕ ಆಟಗಾರ ಥಾಮಸ್ ರೋಜರ್ಸ್ (46) ಉತ್ತಮ ಆರಂಭ ಒದಗಿಸಿದರು. ಆದರೆ ಡೇನಿಯಲ್ ಲಾರೆನ್ಸ್ (7) ಹಾಗೂ ವೆಬ್​ಸ್ಟರ್ (14) ಬೇಗನೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು.

ಈ ಹಂತದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ ಬಿರುಸಿನ ಇನಿಂಗ್ಸ್​ ಆಡಿದರು. ಅದರಲ್ಲೂ 9ನೇ ಓವರ್​ನ 5ನೇ ಎಸೆತದಲ್ಲಿ ಮ್ಯಾಕ್ಸಿ ಬಾರಿಸಿದ ವಿಭಿನ್ನ ಶಾಟ್ ಎಲ್ಲರ ಗಮನ ಸೆಳೆಯಿತು. ಏಕೆಂದರೆ ಅತ್ತ ಈ ಶಾಟ್ ಸ್ಕೂಪ್ ಅಲ್ಲ. ಇತ್ತ ರಿವರ್ಸ್ ಸ್ವೀಪ್ ಕೂಡ ಅಲ್ಲ.

ಅಂದರೆ ರಿವರ್ಸ್ ಸ್ವೀಪ್ ಹಾಗೂ ಸ್ಕೂಪ್ ಶಾಟ್​ ಮಿಕ್ಸ್​ ಮಾಡಿದಂತಿರುವ ಹೊಸ ಹೊಡೆತದ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಥರ್ಡ್​ಮ್ಯಾನ್ ಬೌಂಡರಿಯತ್ತ ಫೋರ್ ಬಾರಿಸಿದ್ದಾರೆ. ಇದರೊಂದಿಗೆ ಮ್ಯಾಕ್ಸ್​ವೆಲ್ ಬಾರಿಸಿದ ಹೊಸ ಶಾಟ್​ನ ಹೆಸರೇನು ಎಂಬ ಚರ್ಚೆಗಳು ಶುರುವಾಗಿದೆ. ಇದೀಗ ಗ್ಲೆನ್ ಮ್ಯಾಕ್ಸ್​ವೆಲ್ ಸಿಡಿಸಿದ ವಿಭಿನ್ನ ಶಾಟ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಕೇವಲ 15 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 32 ರನ್ ಬಾರಿಸುವ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ 12.1 ಓವರ್​ಗಳಲ್ಲಿ ಮೆಲ್ಬೋರ್ನ್​ ಸ್ಟಾರ್ಸ್ ತಂಡವನ್ನು ಗುರಿ ಮುಟ್ಟಿಸಿದರು.

ಮೆಲ್ಬೋರ್ನ್​ ಸ್ಟಾರ್ಸ್​ ಪ್ಲೇಯಿಂಗ್ 11: ಥಾಮಸ್ ರೋಜರ್ಸ್ , ಡೇನಿಯಲ್ ಲಾರೆನ್ಸ್ , ಬ್ಯೂ ವೆಬ್‌ಸ್ಟರ್ , ಗ್ಲೆನ್ ಮ್ಯಾಕ್ಸ್‌ವೆಲ್ (ನಾಯಕ) , ಮಾರ್ಕಸ್ ಸ್ಟೊಯಿನಿಸ್ , ಸ್ಯಾಮ್ ಹಾರ್ಪರ್ (ವಿಕೆಟ್ ಕೀಪರ್) , ಹಿಲ್ಟನ್ ಕಾರ್ಟ್‌ರೈಟ್ , ಇಮಾದ್ ವಾಸಿಮ್ , ಜೊನಾಥನ್ ಮೆರ್ಲೋ , ಜೋಯಲ್ ಪ್ಯಾರಿಸ್ , ಮಾರ್ಕ್ ಸ್ಟೆಕ್ಟೀ.

ಇದನ್ನೂ ಓದಿ: IPL 2024: RCB ತಂಡದ ನಾಯಕತ್ವದಲ್ಲಿ ಮತ್ತೆ ಬದಲಾವಣೆ..?

ಮೆಲ್ಬೋರ್ನ್​ ರೆನೆಗೇಡ್ಸ್ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್) , ಜೋರ್ಡಾನ್ ಕಾಕ್ಸ್ , ಜೇಕ್ ಫ್ರೇಸರ್-ಮೆಕ್‌ಗುರ್ಕ್ , ಶಾನ್ ಮಾರ್ಷ್ , ಜೊನಾಥನ್ ವೆಲ್ಸ್ , ಮೆಕೆಂಜಿ ಹಾರ್ವೆ , ವಿಲ್ ಸದರ್ಲ್ಯಾಂಡ್ (ನಾಯಕ) , ಟಾಮ್ ರೋಜರ್ಸ್ , ಆಡಮ್ ಝಂಪಾ , ಪೀಟರ್ ಸಿಡ್ಲ್ , ಕೇನ್ ರಿಚರ್ಡ್ಸನ್.

ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ