ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ಗ್ಲೆನ್ ಮ್ಯಾಕ್ಸ್​ವೆಲ್ ಡೌಟ್

Glenn Maxwell: ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಆಸ್ಟ್ರೇಲಿಯಾ ತಂಡವು ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಡಲಿದೆ. ಈ ವೇಳೆಗೆ ಗ್ಲೆನ್ ಮ್ಯಾಕ್ಸ್​ವೆಲ್ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಬಹುದು.

ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ಗ್ಲೆನ್ ಮ್ಯಾಕ್ಸ್​ವೆಲ್ ಡೌಟ್
Glenn Maxwell
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 04, 2023 | 5:44 PM

ಏಕದಿನ ವಿಶ್ವಕಪ್​ಗೂ ಮುನ್ನ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಕಾಣಿಸಿಕೊಳ್ಳುವುದು ಅನುಮಾನ. ಪಾದದ ನೋವಿನಿಂದ ಬಳಲುತ್ತಿರುವ ಮ್ಯಾಕ್ಸಿ ಭಾರತದ ವಿರುದ್ಧದ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇದೇ ಗಾಯದ ಕಾರಣ ಮ್ಯಾಕ್ಸ್​ವೆಲ್ ಇತ್ತೀಚೆಗೆ ನಡೆದ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಸೆಪ್ಟೆಂಬರ್ ಅಂತ್ಯದ ವೇಳೆ ಅವರು ಸಂಪೂರ್ಣ ಗುಣಮುಖರಾಗುವುದು ಅನುಮಾನ ಎನ್ನಲಾಗಿದೆ. ಹೀಗಾಗಿ ಭಾರತದ ವಿರುದ್ಧದ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಏಕದಿನ ವಿಶ್ವಕಪ್​ನಿಂದ ಹೊರಕ್ಕೆ?

ಭಾರತ-ಆಸ್ಟ್ರೇಲಿಯಾ ನಡುವಣ 3 ಪಂದ್ಯಗಳ ಏಕದಿನ ಸರಣಿಯು ಸೆಪ್ಟೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯು ಮುಗಿಯುವುದು ಸೆಪ್ಟೆಂಬರ್ 27 ರಂದು. ಇದರ ಬೆನ್ನಲ್ಲೇ ಅಂದರೆ, ಸೆಪ್ಟೆಂಬರ್ 29 ರಿಂದ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳು ಆರಂಭವಾಗಲಿದೆ.

ಆದರೆ ಇತ್ತ ಟೀಮ್ ಇಂಡಿಯಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿರುವ ಗ್ಲೆನ್ ಮ್ಯಾಕ್ಸ್​ವೆಲ್ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಆಸ್ಟ್ರೇಲಿಯಾ ತಂಡವು ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಡಲಿದೆ. ಈ ವೇಳೆಗೆ ಗ್ಲೆನ್ ಮ್ಯಾಕ್ಸ್​ವೆಲ್ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಬಹುದು.

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  1. ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
  2. ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
  3. ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).

ಸ್ಟಾರ್ ಆಟಗಾರರಿಗೆ ಗಾಯ:

ಪ್ರಸ್ತುತ ಆಸ್ಟ್ರೇಲಿಯಾದಲ್ಲಿನ ಸ್ಟಾರ್ ಆಟಗಾರರು ಗಾಯದಿಂದ ಬಳಲುತ್ತಿದ್ದಾರೆ. ತಂಡದ ನಾಯಕ ಪ್ಯಾಟ್ ಕಮಿನ್ಸ್, ಉಪನಾಯಕ ಸ್ಟೀವ್ ಸ್ಮಿತ್ ಗಾಯದ ಹಿನ್ನಲೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಇನ್ನು ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಕೂಡ ಗಾಯದ ಕಾರಣ ಆ್ಯಶಸ್ ಸರಣಿ ಬಳಿಕ ಯಾವುದೇ ಪಂದ್ಯವಾಡಿಲ್ಲ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಈ ಎಲ್ಲಾ ಆಟಗಾರರು ಭಾರತದ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದನ್ನು ಖಚಿತಪಡಿಸಿಕೊಳ್ಳಬಹುದು. ಆ ವೇಳೆಗೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗದಿದ್ದರೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಿಂದ ಹೊರಗುಳಿಯಬಹುದು.