Glenn maxwell: 19 ಫೋರ್, 5 ಸಿಕ್ಸ್​: ಗ್ಲೆನ್ ಮ್ಯಾಕ್ಸ್​ವೆಲ್ ಸಿಡಿಲಬ್ಬರದ ಶತಕ

Glenn maxwell: ಬಿಗ್ ಬ್ಯಾಷ್ ಲೀಗ್‌ನಲ್ಲಿ ಜನವರಿ 19 ರಂದು ಹೋಬರ್ಟ್ ಹರಿಕೇನ್ಸ್ ವಿರುದ್ಧ ಗ್ಲೆನ್ ಮ್ಯಾಕ್ಸ್‌ವೆಲ್ ಅಜೇಯ 154 ರನ್ ಬಾರಿಸಿದ್ದರು. ಈ ಇನಿಂಗ್ಸ್​ನಲ್ಲಿ ಮ್ಯಾಕ್ಸ್​ವೆಲ್ ಬ್ಯಾಟ್​ನಿಂದ 22 ಬೌಂಡರಿ ಮತ್ತು 4 ಸಿಕ್ಸರ್‌ಗಳು ಮೂಡಿಬಂದಿತ್ತು.

Glenn maxwell: 19 ಫೋರ್, 5 ಸಿಕ್ಸ್​: ಗ್ಲೆನ್ ಮ್ಯಾಕ್ಸ್​ವೆಲ್ ಸಿಡಿಲಬ್ಬರದ ಶತಕ
Glenn maxwell
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 31, 2022 | 10:04 PM

ಇತ್ತೀಚೆಗಷ್ಟೇ ಬಿಬಿಎಲ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಇದೀಗ ಮತ್ತೊಂದು ಸೆಂಚುರಿ ಬಾರಿಸಿ ಗಮನ ಸೆಳೆದಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ವಿಕ್ಟೋರಿಯನ್ ಪ್ರೀಮಿಯರ್ ಕ್ರಿಕೆಟ್‌ನಲ್ಲಿ ಮ್ಯಾಕ್ಸ್‌ವೆಲ್ ಡಾನ್‌ಕಾಸ್ಟರ್ ಕ್ಲಬ್‌ ಪರ ಆಡುತ್ತಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗೀಲಾಂಗ್ ಕ್ಲಬ್ 50 ಓವರ್‌ಗಳಲ್ಲಿ 236 ರನ್ ಗಳಿಸಿತು. ಈ ಟಾರ್ಗೆಟ್​ ಅನ್ನು ಬೆನ್ನತ್ತಿದ ಡಾನ್​ಕಾಸ್ಟರ್ ಕ್ಲಬ್ ಕಳಪೆ ಆರಂಭ ಪಡೆಯಿತು.

ಆರಂಭಿಕ ಆಟಗಾರ ಕಾರ್ಕೊಲಿಸ್ ಮೊದಲ ಎಸೆತದಲ್ಲಿಯೇ ಔಟಾದರು. ಜೇ ರೂಡ್ ಕೂಡ 13 ರನ್ ಗಳಿಸಿ ನಿರ್ಗಮಿಸಿದರು. ಆದರೆ ನಂತರ ಬಂದ ಮ್ಯಾಕ್ಸ್‌ವೆಲ್ ಅದ್ಭುತ ಇನಿಂಗ್ಸ್​ ಕಟ್ಟಿದರು. ಮ್ಯಾಕ್ಸ್‌ವೆಲ್ ಮೂರನೇ ವಿಕೆಟ್‌ಗೆ ಬಂತೋರ್ಪ್ ಅವರೊಂದಿಗೆ 128 ರನ್ ಜೊತೆಯಾಟವಾಡಿದರು. 14 ಬೌಂಡರಿ ಮತ್ತು 5 ಸಿಕ್ಸರ್‌ಗಳನ್ನು ಸಿಡಿಸಿದ ಮ್ಯಾಕ್ಸ್​ವೆಲ್ 90 ಎಸೆತಗಳಲ್ಲಿ 122 ರನ್​ ಬಾರಿಸಿದರು. ಮತ್ತೊಂದೆಡೆ ಬಂತೋರ್ಪ್ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ಅತ್ಯುತ್ತಮ ಶತಕ: ಮ್ಯಾಕ್ಸ್‌ವೆಲ್ ಕ್ಲಬ್ ಕ್ರಿಕೆಟ್‌ನಲ್ಲಿ ಈ ಶತಕ ಬಾರಿಸಿದ್ದರೂ, ಹಸಿರು ಪಿಚ್‌ನಲ್ಲಿ ಈ ಶತಕ ಗಳಿಸಿದ ಕಾರಣ ಈ ಇನ್ನಿಂಗ್ಸ್ ತುಂಬಾ ವಿಶೇಷವಾಗಿದೆ. ಏಕೆಂದರೆ ಮ್ಯಾಕ್ಸ್ ವೆಲ್ ಬ್ಯಾಟಿಂಗ್ ಮಾಡುತ್ತಿದ್ದ ಪಿಚ್ ವೇಗದ ಬೌಲರ್ ಗಳಿಗೆ ಸಾಕಷ್ಟು ನೆರವು ನೀಡುತ್ತಿತ್ತು. ಕ್ರೀಸ್ ಕಚ್ಚಿ ನಿಲ್ಲುವುದು ಕೂಡ ತುಂಬಾ ಕಷ್ಟಕರವಾಗಿತ್ತು. ಆದರೆ ಇದರ ಹೊರತಾಗಿಯೂ ಮ್ಯಾಕ್ಸ್‌ವೆಲ್ ಬಿರುಸಿನ ಬ್ಯಾಟಿಂಗ್ ಮಾಡಿರುವುದು ವಿಶೇಷ.

ಬಿಗ್ ಬ್ಯಾಷ್ ಲೀಗ್‌ನಲ್ಲಿ ಜನವರಿ 19 ರಂದು ಹೋಬರ್ಟ್ ಹರಿಕೇನ್ಸ್ ವಿರುದ್ಧ ಗ್ಲೆನ್ ಮ್ಯಾಕ್ಸ್‌ವೆಲ್ ಅಜೇಯ 154 ರನ್ ಬಾರಿಸಿದ್ದರು. ಈ ಇನಿಂಗ್ಸ್​ನಲ್ಲಿ ಮ್ಯಾಕ್ಸ್​ವೆಲ್ ಬ್ಯಾಟ್​ನಿಂದ 22 ಬೌಂಡರಿ ಮತ್ತು 4 ಸಿಕ್ಸರ್‌ಗಳು ಮೂಡಿಬಂದಿತ್ತು. ಈ ಮೂಲಕ ಬಿಗ್​ ಬ್ಯಾಷ್ ಲೀಗ್ ಇತಿಹಾಸದಲ್ಲೇ ಅತೀ ಹೆಚ್ಚು ರನ್​ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್​ವೆಲ್ ನಿರ್ಮಿಸಿದ್ದರು. ಇದೀಗ ವಿಕ್ಟೋರಿಯನ್ ಪ್ರೀಮಿಯರ್ ಕ್ರಿಕೆಟ್​ನಲ್ಲೂ ಭರ್ಜರಿ ಶತಕ ಸಿಡಿಸಿ ಮ್ಯಾಕ್ಸ್​ವೆಲ್ ಫಾರ್ಮ್ ಮುಂದುವರೆಸಿದ್ದಾರೆ.

ಇದನ್ನೂ ಓದಿ:  IND vs WI: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿದ್ದ 5 ಆಟಗಾರರು ಟೀಮ್ ಇಂಡಿಯಾದಿಂದ ಔಟ್..!

ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್

(Glenn maxwell smashed century scored 122 runs in victorian premier cricket)

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ