AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆತನನ್ನು ಖರೀದಿಸುವಷ್ಟು ಹಣ ನಮ್ಮ ಬಳಿ ಇಲ್ಲ’..! ಮಿ. 360 ಬಗ್ಗೆ ಮ್ಯಾಕ್ಸ್‌ವೆಲ್ ಸ್ಫೋಟಕ ಹೇಳಿಕೆ

Glenn Maxwell: ಬಿಗ್ ಬ್ಯಾಷ್ ಲೀಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಅವರಂತಹ ಬ್ಯಾಟ್ಸ್‌ಮನ್‌ಗಳನ್ನು ಖರೀದಿಸಲು ಸಾಧ್ಯವಿಲ್ಲ. ಅವರನ್ನು ಖರೀದಿಸುವಷ್ಟು ಹಣ ಬಿಬಿಎಲ್​ನಲ್ಲಿ ಇಲ್ಲ ಎಂದಿದ್ದಾರೆ.

‘ಆತನನ್ನು ಖರೀದಿಸುವಷ್ಟು ಹಣ ನಮ್ಮ ಬಳಿ ಇಲ್ಲ’..! ಮಿ. 360 ಬಗ್ಗೆ ಮ್ಯಾಕ್ಸ್‌ವೆಲ್ ಸ್ಫೋಟಕ ಹೇಳಿಕೆ
ಮ್ಯಾಕ್ಸ್​ವೆಲ್, ಸೂರ್ಯImage Credit source: Timesnow
TV9 Web
| Edited By: |

Updated on:Nov 25, 2022 | 9:40 AM

Share

ಪ್ರಸ್ತುತ ವಿಶ್ವ ಕ್ರಿಕೆಟ್​ನ ಮೂಲೆ ಮೂಲೆಯಲ್ಲೂ ಮೇಳೈಸುತ್ತಿರುವ ಹೆಸರೆಂದರೆ ಅದು ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ (Suryakumar Yadav). ತನ್ನ ಸ್ಫೋಟಕ ಬ್ಯಾಟಿಂಗ್​ನಿಂದ ಕ್ರಿಕೆಟ್‌ ದುನಿಯಾದಲ್ಲಿ ರಾಜನಾಗಿ ಮೆರೆಯುತ್ತಿರುವ ಸೂರ್ಯ ಅತ್ಯಂತ ಕಡಿಮೆ ಅವಧಿಯಲ್ಲಿಯೇ ಸಾಕಷ್ಟು ರೆಕಾರ್ಡ್​ ಬ್ರೇಕ್ ಮಾಡಿದ್ದಾರೆ. ಹೀಗಾಗಿಯೇ ಈ ಆಟಗಾರನನ್ನು ಕ್ರಿಕೆಟ್ ಪಂಡಿತರು ಆಡಿ ಹೊಗಳುತ್ತಿರುವುದು. ಈಗ ಸೂರ್ಯಕುಮಾರ್ ಯಾದವ್ ಬಗ್ಗೆ ಆಸ್ಟ್ರೇಲಿಯಾದ ಸ್ಫೋಟಕ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ನೀಡಿರುವ ಹೇಳಿಕೆ ಟೀಂ ಇಂಡಿಯಾ ಅಭಿಮಾನಿಗಳು ಕಾಲರ್ ಎತ್ತುವಂತೆ ಮಾಡಿದೆ. ವಾಸ್ತವವಾಗಿ ಮ್ಯಾಕ್ಸ್‌ವೆಲ್, ಬಿಗ್ ಬ್ಯಾಷ್ ಲೀಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಅವರಂತಹ ಬ್ಯಾಟ್ಸ್‌ಮನ್‌ಗಳನ್ನು ಖರೀದಿಸಲು ಸಾಧ್ಯವಿಲ್ಲ. ಅವರನ್ನು ಖರೀದಿಸುವಷ್ಟು ಹಣ ಬಿಬಿಎಲ್​ನಲ್ಲಿ ಇಲ್ಲ ಎಂದಿದ್ದಾರೆ.

ಆತನನ್ನು ಖರೀದಿಸುವಷ್ಟು ಹಣ ನಮ್ಮ ಬಳಿ ಇಲ್ಲ

‘ದಿ ಗ್ರೇಡ್ ಕ್ರಿಕೆಟರ್’ಗೆ ನೀಡಿದ ಸಂದರ್ಶನದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಸೂರ್ಯಕುಮಾರ್ ಯಾದವ್ ಬಗ್ಗೆ ಈ ಹೇಳಿಕೆ ನೀಡಿದ್ದಾರೆ. ಭವಿಷ್ಯದಲ್ಲಿ ಸೂರ್ಯಕುಮಾರ್ ಯಾದವ್ ಬಿಗ್ ಬ್ಯಾಷ್ ಲೀಗ್‌ನಲ್ಲಿ ಆಡುವುದನ್ನು ನಾವು ನೋಡುತ್ತೇವೆಯೇ? ಹೀಗೊಂದು ಪ್ರಶ್ನೆಯನ್ನು ಗ್ಲೆನ್ ಮ್ಯಾಕ್ಸ್​ವೆಲ್​ಗೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಮ್ಯಾಕ್ಸ್‌ವೆಲ್, “ಬಿಬಿಎಲ್ ಬಳಿ ಕಡಿಮೆ ಹಣ ಇರುತ್ತದೆ. ಹಾಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಖರೀದಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಬೌಲರ್‌ಗಳಿಗೆ ಸವಾಲಾಗಿದೆ

ಈ ವರ್ಷ ಟೀಂ ಇಂಡಿಯಾ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ ರನ್ ಮಳೆ ಸುರಿಸುತ್ತಿದ್ದಾರೆ. 2022ರಲ್ಲಿ 31 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಸೂರ್ಯಕುಮಾರ್ ಯಾದವ್ 1164 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕ ಮತ್ತು ಒಂಬತ್ತು ಅರ್ಧಶತಕಗಳಿವೆ. ಅಲ್ಲದೆ ಸೂರ್ಯಕುಮಾರ್ ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಕ್ರಿಕೆಟ್ ಜಗತ್ತಿನ ನಂಬರ್ 1 ಬ್ಯಾಟ್ಸ್‌ಮನ್ ಆಗಿದ್ದಾರೆ. ಸದ್ಯ ಕ್ರಿಕೆಟ್ ಲೋಕದಲ್ಲಿ ಸುನಾಮಿ ಎಬ್ಬಿಸಿರುವ ಸೂರ್ಯಕುಮಾರ್ ಯಾದವ್‌ ಅವರ ಬ್ಯಾಟಿಂಗ್ ಅಬ್ಬರಕ್ಕೆ ಕಡಿವಾಣ ಹಾಕಲು ಯಾವುದೇ ಬೌಲರ್​ಗೆ ಸಾಧ್ಯವಾಗುತ್ತಿಲ್ಲ.

ಟಿ20 ಶ್ರೇಯಾಂಕದಲ್ಲಿ ನಂ.1

ಸೂರ್ಯಕುಮಾರ್ ಯಾದವ್ ಸದ್ಯ ಪ್ರತಿ ಸರಣಿಯಲ್ಲೂ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಅವರು 51 ಎಸೆತಗಳಲ್ಲಿ ಅಜೇಯ 111 ರನ್ ಗಳಿಸಿದ ಸೂರ್ಯ ಎರಡನೇ ಟಿ20 ಶತಕ ಸಿಡಿಸಿ ಮಿಂಚಿದ್ದರು. ಈ ಸರಣಿಯಲ್ಲಿ 31 ರೇಟಿಂಗ್ ಪಾಯಿಂಟ್ ಗಳಿಸಿದ ಸೂರ್ಯಕುಮಾರ್ 890 ರೇಟಿಂಗ್ ಅಂಕಗಳೊಂದಿಗೆ ಟಿ20 ಶ್ರೇಯಾಂಕದಲ್ಲಿ ಮೊದಲ ಸ್ಥಾನಗಳಿಸಿದ್ದಾರೆ.

Published On - 9:36 am, Fri, 25 November 22

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!