Glenn Maxwell: IPL 2022 ಆರಂಭಿಕ ಪಂದ್ಯಗಳಿಂದ RCB ಸ್ಟಾರ್ ಆಟಗಾರ ಔಟ್..!

ಈ ತಿಂಗಳ ಅಂತ್ಯದಲ್ಲಿ ಆಸ್ಟ್ರೇಲಿಯಾ ತಂಡ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ. 24 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡ ಪಾಕ್​ನಲ್ಲಿ ಆಡುತ್ತಿದ್ದು, ಈ ಐತಿಹಾಸಿಕ ಪ್ರವಾಸದಿಂದ ವಿವಾಹದ ಕಾರಣ ಮ್ಯಾಕ್ಸ್​ವೆಲ್ ಹೊರಗುಳಿಯಲಿದ್ದಾರೆ.

Glenn Maxwell: IPL 2022 ಆರಂಭಿಕ ಪಂದ್ಯಗಳಿಂದ RCB ಸ್ಟಾರ್ ಆಟಗಾರ ಔಟ್..!
Glenn Maxwell
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 16, 2022 | 4:11 PM

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ. ಮ್ಯಾಕ್ಸ್‌ವೆಲ್ ಮುಂದಿನ ತಿಂಗಳು ಮೆಲ್ಬೋರ್ನ್‌ನಲ್ಲಿ ಭಾರತೀಯ ಮೂಲದ ತನ್ನ ಗೆಳತಿಯನ್ನು ಮದುವೆಯಾಗಲಿದ್ದಾರೆ. ಅವರ ಮದುವೆಯ ಕಾರಣ, ಮ್ಯಾಕ್ಸ್‌ವೆಲ್ ಸ್ವಲ್ಪ ಸಮಯದವರೆಗೆ ಕ್ರಿಕೆಟ್ ಕ್ಷೇತ್ರದಿಂದ ದೂರವಿರಲಿದ್ದಾರೆ. ಅದರಂತೆ ಮ್ಯಾಕ್ಸ್​ವೆಲ್ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಪಾಕಿಸ್ತಾನ ಪ್ರವಾಸ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ 2022 ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಮ್ಯಾಕ್ಸ್‌ವೆಲ್ ಆಸ್ಟ್ರೇಲಿಯಾದ ODI ಮತ್ತು T20 ತಂಡದ ಪ್ರಮುಖ ಭಾಗವಾಗಿದ್ದಾರೆ. ಅಲ್ಲದೆ IPL ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪ್ರಮುಖ ಆಟಗಾರ ಎಂಬುದು ವಿಶೇಷ.

ಈ ತಿಂಗಳ ಅಂತ್ಯದಲ್ಲಿ ಆಸ್ಟ್ರೇಲಿಯಾ ತಂಡ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ. 24 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡ ಪಾಕ್​ನಲ್ಲಿ ಆಡುತ್ತಿದ್ದು, ಈ ಐತಿಹಾಸಿಕ ಪ್ರವಾಸದಿಂದ ವಿವಾಹದ ಕಾರಣ ಮ್ಯಾಕ್ಸ್​ವೆಲ್ ಹೊರಗುಳಿಯಲಿದ್ದಾರೆ. ಈ ಬಗ್ಗೆ ಚಾನೆಲ್ ಫಾಕ್ಸ್ ಸ್ಪೋರ್ಟ್‌ನೊಂದಿಗೆ ಮಾತನಾಡಿದ ಮ್ಯಾಕ್ಸಿ, “ವಿವಾಹ ನಿಶ್ಚಿತವಾಗಿದ್ದ ವೇಳೆ ಯಾವುದೇ ಸರಣಿಯ ವೇಳಾಪಟ್ಟಿ ನಿರ್ಧಾರವಾಗಿರಲಿಲ್ಲ. ಹೀಗಾಗಿ ಇದೀಗ ವಿವಾಹದ ಕಾರಣದಿಂದಾಗಿ ಸರಣಿಯಿಂದ ಹೊರಗುಳಿಯಬೇಕಾಗಿ ಬಂದಿದೆ ಎಂದು ತಿಳಿಸಿದರು.

ಪಾಕಿಸ್ತಾನ ಸರಣಿಯಲ್ಲಿ ಮಾತ್ರವಲ್ಲ, ಐಪಿಎಲ್‌ನ ಆರಂಭಿಕ ಪಂದ್ಯಗಳಲ್ಲಿಯೂ ಮ್ಯಾಕ್ಸ್​ವೆಲ್ ಕಾಣಿಸಿಕೊಳ್ಳುವುದು ಅನುಮಾನ. ಐಪಿಎಲ್‌ನ ಹೊಸ ಸೀಸನ್ ಮಾರ್ಚ್ ಅಂತ್ಯದಲ್ಲಿ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಆದರೆ ಆರಂಭಿಕ ಪಂದ್ಯಗಳ ವೇಳೆ ಮ್ಯಾಕ್ಸ್​ವೆಲ್ ತಂಡವನ್ನು ಕೂಡಿಕೊಳ್ಳುವುದು ಡೌಟ್ ಎನ್ನಲಾಗಿದೆ. ಏಕೆಂದರೆ ಮ್ಯಾಕ್ಸ್​ವೆಲ್ ವಿವಾಹ ಮಾರ್ಚ್ 27 ರಂದು ಫಿಕ್ಸ್ ಆಗಿದ್ದು, ವಿವಾಹದ ಸಂಭ್ರಮದ ಬಳಿಕ ಮ್ಯಾಕ್ಸ್​ವೆಲ್ ಆಗಮಿಸಿದರೂ ಕ್ವಾರಂಟೈನ್​ ಎಲ್ಲಾ ಮುಗಿದ ಬಳಿಕವಷ್ಟೇ ತಂಡವನ್ನು ಕೂಡಿಕೊಳ್ಳಬಹುದು. ಹೀಗಾಗಿ ಐಪಿಎಲ್​ನಲ್ಲಿನ ಆರ್​ಸಿಬಿಯ ಮೂರು-ನಾಲ್ಕು ಪಂದ್ಯಗಳನ್ನು ಮ್ಯಾಕ್ಸ್​ವೆಲ್ ತಪ್ಪಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಇದನ್ನೂ ಓದಿ: IPL 2022 ನಲ್ಲಿ ಕೋಟಿ ಸಿಗುತ್ತಿದ್ದಂತೆ ಪಾಕಿಸ್ತಾನ ಸೂಪರ್ ಲೀಗ್ ತೊರೆದ ಸ್ಟಾರ್ ಆಟಗಾರ

ಇದನ್ನೂ ಓದಿ: IPL 2022: RCB ತಂಡ ಕಟ್ಟಿದೆ…ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?

ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..! 

(Glenn Maxwell to skip Australia’s Tour of Pakistan, likely to miss starting stages of IPL 2022)

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು