ಫ್ಲೈಯಿಂಗ್ ಫಿಲಿಪ್ಸ್… ಇದಪ್ಪ ಕ್ಯಾಚ್ ಅಂದ್ರೆ..!
New Zealand vs England: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 348 ರನ್ ಕಲೆಹಾಕಿದರೆ, ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 499 ರನ್ ಪೇರಿಸಿದೆ. ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ನ್ಯೂಝಿಲೆಂಡ್ ತಂಡವು ಮೂರನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 155 ರನ್ಗಳಿಸಿದೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದು ಗ್ಲೆನ್ ಫಿಲಿಪ್ಸ್ ಎಲ್ಲರನ್ನು ನಿಬ್ಬೆರಗಾಗಿದ್ದಾರೆ. ಕ್ರೈಸ್ಟ್ ಚರ್ಸ್ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಪ್ರಥಮ ಇನಿಂಗ್ಸ್ನಲ್ಲಿ 348 ರನ್ ಕಲೆಹಾಕಿದೆ.
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಇಂಗ್ಲೆಂಡ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಒಲೀ ಪೋಪ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಎಚ್ಚರಿಕೆಯ ಬ್ಯಾಟಿಂಗ್ನೊಂದಿಗೆ ಇನಿಂಗ್ಸ್ ಕಟ್ಟಿದ ಪೋಪ್ 77 ರನ್ ಬಾರಿಸಿದ್ದರು. ಆದರೆ ಗ್ಲೆನ್ ಫಿಲಿಪ್ಸ್ ಅವರ ಅತ್ಯದ್ಭುತ ಫೀಲ್ಡಿಂಗ್ನಿಂದಾಗಿ ಪೋಪ್ ಹೊರನಡೆಯಲೇಬೇಕಾಯಿತು.
ಟಿಮ್ ಸೌಥಿ ಎಸೆದ 53ನೇ ಓವರ್ನ 2ನೇ ಎಸೆತದಲ್ಲಿ ಒಲೀ ಪೋಪ್ ಕಟ್ ಶಾಟ್ ಬಾರಿಸಿದ್ದರು. ಆದರೆ ಅತ್ತ ಸ್ಲಿಪ್-ಗಲ್ಲಿ ನಡುವೆ ಫೀಲ್ಡಿಂಗ್ನಲ್ಲಿದ್ದ ಗ್ಲೆನ್ ಫಿಲಿಪ್ಸ್ ಚಕ್ಕನೆ ಜಿಗಿದು ಅದ್ಭುತವಾಗಿ ಚೆಂಡನ್ನು ಹಿಡಿದರು. ಈ ಅತ್ಯದ್ಭುತ ಕ್ಯಾಚ್ ನೋಡಿ ಸಹ ಆಟಗಾರರು, ಪ್ರೇಕ್ಷಕರು ನಿಬ್ಬೆರಗಾದರು. ಇದೀಗ ಗ್ಲೆನ್ ಫಿಲಿಪ್ಸ್ ಹಿಡಿದ ಈ ಅತ್ಯುತ್ತಮ ಕ್ಯಾಚ್ ಅನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದ ಬೆಸ್ಟ್ ಕ್ಯಾಚ್ಗಳಲ್ಲಿ ಒಂದು ಎಂದು ಬಣ್ಣಿಸಲಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 348 ರನ್ ಕಲೆಹಾಕಿದರೆ, ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 499 ರನ್ ಪೇರಿಸಿದೆ. ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ನ್ಯೂಝಿಲೆಂಡ್ ತಂಡವು ಮೂರನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 155 ರನ್ಗಳಿಸಿದೆ.

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
