
ಭಾರತ ವಿರುದ್ಧದ ಟಿ20 ಸರಣಿಯಲ್ಲಿ ನ್ಯೂಜಿಲೆಂಡ್ ತಂಡದ ಇತರ ಬ್ಯಾಟರ್‌ಗಳು ನಿರೀಕ್ಷಿತ ಮಟ್ಟದಲ್ಲಿ ರನ್ ಗಳಿಸಲು ಪರದಾಡುತ್ತಿದ್ದರೆ, ಗ್ಲೆನ್ ಫಿಲಿಪ್ಸ್ ಮಾತ್ರ ಅಬ್ಬರದ ಬ್ಯಾಟಿಂಗ್ ಮೂಲಕ ಮಿಂಚುತ್ತಿದ್ದಾರೆ. ನಡೆಯುತ್ತಿರುವ ಸರಣಿಯಲ್ಲಿ ಭಾರತೀಯ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡುತ್ತಿರುವ ಫಿಲಿಪ್ಸ್, ಆಕ್ಲೆಂಡ್‌ನಲ್ಲಿ ನಡೆದ ಟಿ20 ಪಂದ್ಯದಲ್ಲಿ ಸ್ಫೋಟಕ ಆಟವಾಡಿದ್ದಾರೆ. ಕೇವಲ 46 ಎಸೆತಗಳಲ್ಲಿ ಶತಕ ಸಿಡಿಸಿ ಎದುರಾಳಿ ತಂಡಕ್ಕೆ ನಡುಕ ಹುಟ್ಟಿಸಿದ್ದಾರೆ. ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಮೂರನೇ ಶತಕವಾಗಿದೆ.
ಆಕ್ಲೆಂಡ್ ಪಂದ್ಯದಲ್ಲಿ ಗ್ಲೆನ್ ಫಿಲಿಪ್ಸ್ ಭಾರತೀಯ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಅದರಲ್ಲೂ ಆಲ್‌ರೌಂಡರ್ ನಿತೀಶ್ ರೆಡ್ಡಿ ಬೌಲಿಂಗ್‌ನಲ್ಲಿ ಫಿಲಿಪ್ಸ್ ಅಕ್ಷರಶಃ ಅಬ್ಬರಿಸಿದರು. ನಿತೀಶ್ ಎಸೆದ ಒಂದೇ ಓವರ್‌ನಲ್ಲಿ ಬರೋಬ್ಬರಿ 32 ರನ್ ಚಚ್ಚಿದ ಅವರು, ಸತತ ನಾಲ್ಕು ಸಿಕ್ಸರ್‌ಗಳನ್ನು ಸಿಡಿಸಿ ಮಿಂಚಿದರು. ನಿತೀಶ್ ರೆಡ್ಡಿ ಬೌಲಿಂಗ್‌ನಲ್ಲಿ ಒಟ್ಟು ಐದು ಸಿಕ್ಸರ್‌ಗಳನ್ನು ಬಾರಿಸಿದ ಫಿಲಿಪ್ಸ್, ಅಂತಿಮವಾಗಿ ಅದೇ ಬೌಲರ್‌ಗೆ ವಿಕೆಟ್ ಒಪ್ಪಿಸಿದರು. 107 ರನ್ ಗಳಿಸಿ ಅವರು ತಮ್ಮ ಸ್ಫೋಟಕ ಇನ್ನಿಂಗ್ಸ್ ಅಂತ್ಯಗೊಳಿಸಿದರು. ಈ ವೇಳೆ ಒಟ್ಟು 10 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಮತ್ತೊಂದೆಡೆ ಡೌಗ್ ಬ್ರೇಸ್‌ವೆಲ್ ಜೊತೆಗೂಡಿ ಕೇವಲ 40 ಎಸೆತಗಳಲ್ಲಿ 115 ರನ್‌ಗಳ ಭರ್ಜರಿ ಜೊತೆಯಾಟವಾಡಿ ನ್ಯೂಜಿಲೆಂಡ್ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಭಾರತ ವಿರುದ್ಧದ ಟಿ20 ಸರಣಿಯಲ್ಲಿ ಗ್ಲೆನ್ ಫಿಲಿಪ್ಸ್ ಮತ್ತೊಂದು ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸರಣಿಯಲ್ಲಿ ಇದು ಅವರ ಮೂರನೇ 50ಕ್ಕೂ ಹೆಚ್ಚು ರನ್‌ಗಳ ಇನ್ನಿಂಗ್ಸ್ ಆಗಿದೆ. ಈ ಮೂಲಕ ಶೈ ಹೋಪ್ ಹಾಗೂ ನಿಕೋಲಸ್ ಪೂರನ್ ಬಳಿಕ ಈ ಸಾಧನೆ ಮಾಡಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ ಪರ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಭಾರತದ ವಿರುದ್ಧ ಫಿಲಿಪ್ಸ್ ದಾಖಲಿಸಿರುವ ಅತ್ಯಂತ ವೇಗದ ಟಿ20 ಅಂತಾರಾಷ್ಟ್ರೀಯ ಶತಕ ಇದಾಗಿದೆ. ಅಷ್ಟೇ ಅಲ್ಲ, ನ್ಯೂಜಿಲೆಂಡ್ ಪರ ಎರಡನೇ ಅತಿ ವೇಗದ ಟಿ20 ಶತಕದ ದಾಖಲೆಯನ್ನೂ ನಿರ್ಮಿಸಿದ್ದಾರೆ. 2020ರಲ್ಲಿ ಅವರು ಕೇವಲ 46 ಎಸೆತಗಳಲ್ಲಿ ಶತಕ ಪೂರೈಸಿದ್ದರು. ನ್ಯೂಜಿಲೆಂಡ್ ಪರ ಅತಿ ವೇಗದ ಟಿ20 ಶತಕದ ದಾಖಲೆ ಫಿನ್ ಅಲೆನ್ ಹೆಸರಿನಲ್ಲಿದೆ. ಅವರು ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಭಾರತದ್ದೇ ದರ್ಬಾರ್: ಒಂದೇ ಪಂದ್ಯದಲ್ಲಿ ಮೂರು ವಿಶ್ವದಾಖಲೆ..!
ಭಾರತದ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಬ್ಯಾಟರ್‌ಗಳು ರನ್ ಹೊಳೆಯನ್ನೇ ಹರಿಸಿದರು. ನಿಗದಿತ 20 ಓವರ್‌ಗಳಲ್ಲಿ 259 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದರು. ಇದು ಟಿ20 ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ತಂಡ ಗಳಿಸಿದ ಅತ್ಯಧಿಕ ಮೊತ್ತವಾಗಿದೆ. ಇತ್ತ ಟೀಂ ಇಂಡಿಯಾ ಕೂಡ ಬೇಡದ ದಾಖಲೆಯೊಂದಕ್ಕೆ ಸಾಕ್ಷಿಯಾಯಿತು. ಟಿ20 ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಎದುರಾಳಿಗೆ 259 ರನ್ ಬಿಟ್ಟುಕೊಟ್ಟಿದೆ. ಇದಕ್ಕೂ ಮೊದಲು ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 257 ರನ್‌ಗಳನ್ನು ಬಿಟ್ಟುಕೊಟ್ಟಿತ್ತು. ಇದೀಗ ನ್ಯೂಜಿಲೆಂಡ್ ತಂಡ ಆ ದಾಖಲೆಯನ್ನೂ ಹಿಂದಿಕ್ಕಿದೆ.
Published On - 2:42 pm, Fri, 30 October 26