AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Blast: 28 ರನ್​ಗೆ 8 ವಿಕೆಟ್​ ಪತನ: ರಣರೋಚಕ ಪಂದ್ಯದಲ್ಲಿ ಗೆದ್ದಿದ್ದು ಯಾರು?

T20 Blast 2022: 146 ರನ್​ಗಳ ಸಾಧಾರಣ ಸವಾಲು ಪಡೆದ ಸಸೆಕ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಗ್ಲೌಸೆಸ್ಟರ್‌ಶೈರ್ ತಂಡವು ಯಶಸ್ವಿಯಾಗಿತ್ತು. ಆರಂಭಿಕ ಆಟಗಾರ ಟಿಮ್ ಸೀಫರ್ಟ್ ಐದನೇ ಎಸೆತದಲ್ಲಿ ಖಾತೆ ತೆರೆಯದೆ ಪೆವಿಲಿಯನ್​ಗೆ ಮರಳಿದರು.

T20 Blast: 28 ರನ್​ಗೆ 8 ವಿಕೆಟ್​ ಪತನ: ರಣರೋಚಕ ಪಂದ್ಯದಲ್ಲಿ ಗೆದ್ದಿದ್ದು ಯಾರು?
Vitality T20 Blast
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 11, 2022 | 9:11 PM

ಕ್ರಿಕೆಟ್​ ಅಂಗಳವು ನಾಟಕೀಯ ತಿರುವುಗಳಿಗೆ ಹಲವು ಬಾರಿ ಸಾಕ್ಷಿಯಾಗಿದೆ. ಕೆಲವೊಮ್ಮೆ ಇಂತಹ ತಿರುವುಗಳು ಇಡೀ ಪಂದ್ಯದ ಫಲಿತಾಂಶವನ್ನೇ ಬದಲಿಸಿಬಿಡುತ್ತದೆ. ಅಂತಹದೊಂದು ಪಂದ್ಯಕ್ಕೆ ಸಾಕ್ಷಿಯಾಗಿ ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್​​ ಲೀಗ್. ಈ ಪಂದ್ಯದಲ್ಲಿ ಗ್ಲೌಸೆಸ್ಟರ್‌ಶೈರ್ ಮತ್ತು ಸಸೆಕ್ಸ್ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಸಸೆಕ್ಸ್ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್​ ಆರಂಭಿಸಿದ ಗ್ಲೌಸೆಸ್ಟರ್‌ಶೈರ್ ಉತ್ತಮ ಆರಂಭ ಪಡೆದಿರಲಿಲ್ಲ. ಪಂದ್ಯದ ಮೊದಲ ಎಸೆತದಲ್ಲೇ ಹಮ್ಮೊಂಡ್ ಶೂನ್ಯಕ್ಕೆ ಔಟಾಗಿದ್ದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಫಿಲಿಪ್ಸ್​ 53 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಬೌಂಡರಿಗಳೊಂದಿಗೆ 66 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಗ್ಲೌಸೆಸ್ಟರ್‌ಶೈರ್ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 145 ರನ್​ ಕಲೆಹಾಕಿತು.

146 ರನ್​ಗಳ ಸಾಧಾರಣ ಸವಾಲು ಪಡೆದ ಸಸೆಕ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಗ್ಲೌಸೆಸ್ಟರ್‌ಶೈರ್ ತಂಡವು ಯಶಸ್ವಿಯಾಗಿತ್ತು. ಆರಂಭಿಕ ಆಟಗಾರ ಟಿಮ್ ಸೀಫರ್ಟ್ ಐದನೇ ಎಸೆತದಲ್ಲಿ ಖಾತೆ ತೆರೆಯದೆ ಪೆವಿಲಿಯನ್​ಗೆ ಮರಳಿದರು. ಇದಾದ ಬಳಿಕ ನಾಯಕ ರವಿ ಬೋಪಾರ (10) ಕೂಡ ಔಟಾದರು. ಈ ಹಂತದಲ್ಲಿ ಜೊತೆಯಾದ ಟಾಮ್ ಅಲ್ಸೋಪ್ ಮತ್ತು ಫಿನ್ ಹಡ್ಸನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಮೂರನೇ ವಿಕೆಟ್‌ಗೆ 70 ರನ್ ಸೇರಿಸಿದರು. ಅದರಂತೆ 14ನೇ ಓವರ್​ ವೇಳೆಗೆ ಸಸೆಕ್ಸ್ ತಂಡವು 2 ವಿಕೆಟ್ ನಷ್ಟಕ್ಕೆ 118 ರನ್​ಗಳಿಸಿ ಗೆಲುವಿನತ್ತ ಮುನ್ನಡೆದಿತ್ತು.

ಇದನ್ನೂ ಓದಿ
Image
IPL 2023: 74, 84, 94: ಐಪಿಎಲ್​ ಟೂರ್ನಿಯಲ್ಲಿ ಮಹತ್ವದ ಬದಲಾವಣೆ..!
Image
Virat Kohli: ಲಯ ತಪ್ಪಿದ ಕೊಹ್ಲಿಯ ಮುಂದೆ ಬಾಬರ್​ನ ಆರ್ಭಟ..!
Image
Umran Malik: ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಚೆಂಡೆಸೆದ ಉಮ್ರಾನ್ ಮಲಿಕ್..!
Image
Virat Kohli: ಮೈದಾನಕ್ಕಿಳಿಯದೆ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇತ್ತ ಸಸೆಕ್ಸ್ ತಂಡಕ್ಕೆ ಗೆಲುವು ನಿಶ್ಚಿತ ಎಂದು ಅಭಿಮಾನಿಗಳ ಹರ್ಷೋದ್ಘಾರ ಕೂಡ ಮುಗಿಲು ಮುಟ್ಟಿತ್ತು. ಆದರೆ ಈ ಹಂತದಲ್ಲಿ ಶುರುವಾದ ನಾಟಕೀಯ ತಿರುವು ರೋಚಕ ಹೋರಾಟಕ್ಕೆ ಸಾಕ್ಷಿಯಾಯಿತು. 118 ರನ್​ ಆಗಿದ್ದ ವೇಳೆ ಹಡ್ಸನ್ ಔಟಾದರು. 119 ರನ್​ ವೇಳೆ 52 ಎಸೆರಗಳಲ್ಲಿ 82 ರನ್ ಬಾರಿಸಿದ್ದ ಟಾಮ್ ಅಲ್ಸೊಪ್ ಕೂಡ ವಿಕೆಟ್ ಕೈಚೆಲ್ಲಿದರು. ಪ್ರಮುಖ 2 ವಿಕೆಟ್ ಸಿಗುತ್ತಿದ್ದಂತೆ ಗ್ಲೌಸೆಸ್ಟರ್‌ಶೈರ್ ತಂಡದ ನಾಯಕ ಬೌಲಿಂಗ್​ನಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದರು.

ಈ ಹಂತದಲ್ಲಿ ಸಸೆಕ್ಸ್ ತಂಡಕ್ಕೆ ಗೆಲ್ಲಲು ಬೇಕಿದದ್ದು ಕೇವಲ 28 ರನ್​ ಮಾತ್ರ. ಅತ್ತ 6 ವಿಕೆಟ್​ಗಳಿದ್ದವು. ಆದರೆ 118 ರನ್​ನಿಂದ ಶುರುವಾದ ವಿಕೆಟ್ ಪತನ ಬಂದು ನಿಂತಿದ್ದು 141 ರನ್​ಗೆ. ಅಂದರೆ 28 ರನ್​ಗಳಿಸುವಷ್ಟರಲ್ಲಿ ಸಸೆಕ್ಸ್ ತಂಡದ 8 ವಿಕೆಟ್​ಗಳು ಪತನಗೊಂಡವು. ಅದರಲ್ಲೂ ಕೊನೆಯ 3 ಎಸೆತಗಳಲ್ಲಿ 5 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಸ್ಟೀವ್ ಫಿನ್ ಕ್ಯಾಚ್ ನೀಡಿದ ಪರಿಣಾಮ ಗ್ಲೌಸೆಸ್ಟರ್‌ಶೈರ್ ತಂಡವು 4 ರನ್​ಗಳ ರೋಚಕ ಜಯ ಸಾಧಿಸಿತು. ಗ್ಲೌಸೆಸ್ಟರ್‌ಶೈರ್ ಪರ ಡೇವಿಡ್ ಪೇನ್ ಹಾಗೂ ಝ್ಯಾಕ್ ಚಾಪೆಲ್ ತಲಾ 3 ವಿಕೆಟ್​ ಕಬಳಿಸಿದರೆ, ಟಾಮ್ ಸ್ಮಿತ್ 2 ವಿಕೆಟ್ ಉರುಳಿಸಿ ಮಿಂಚಿದರು. ಈ ಗೆಲುವಿನೊಂದಿಗೆ ಗ್ಲೌಸೆಸ್ಟರ್‌ಶೈರ್ ತಂಡವು ಸೌತ್ ಗ್ರೂಪ್ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನಕ್ಕೇರಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:05 pm, Sat, 11 June 22

ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು