ಶಕ ಬೂಮ್ ಹಾಡಿಗೆ ತಮ್ಮದೇ ಸ್ಟೈಲ್​ನಲ್ಲಿ ಸ್ಟೆಪ್ ಹಾಕಿದ ಹಾರ್ದಿಕ್- ಕೊಹ್ಲಿ; ವಿಡಿಯೋ ನೋಡಿ

ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮೊದಲು, ಹಾರ್ದಿಕ್ ಪಾಂಡ್ಯ ತಮ್ಮ ಇನ್‌ಸ್ಟಾಗ್ರಾಮ್ ಅಕೌಟ್​ನಲ್ಲಿ ವಿರಾಟ್ ಕೊಹ್ಲಿಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದು, ಇದರಲ್ಲಿ ಈ ಇಬ್ಬರು ಶಕ ಬೂಮ್ ಹಾಡಿಗೆ ನೃತ್ಯ ಮಾಡುತ್ತಿದ್ದಾರೆ.

ಶಕ ಬೂಮ್ ಹಾಡಿಗೆ ತಮ್ಮದೇ ಸ್ಟೈಲ್​ನಲ್ಲಿ ಸ್ಟೆಪ್ ಹಾಕಿದ ಹಾರ್ದಿಕ್- ಕೊಹ್ಲಿ; ವಿಡಿಯೋ ನೋಡಿ
Follow us
TV9 Web
| Updated By: ಪೃಥ್ವಿಶಂಕರ

Updated on:Sep 18, 2022 | 9:26 PM

ಆಸೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡದ ಆಟಗಾರರು ಒಬ್ಬೊಬ್ಬರಾಗಿ ಮೊಹಾಲಿ ತಲುಪಿದ್ದಾರೆ. ಮಂಗಳವಾರದಿಂದ ಟೀಂ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು ಆರಂಭಿಸಬೇಕಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಸರಣಿ ನಡೆಯಲಿದೆ. ಪಂದ್ಯಕ್ಕೂ ಮುನ್ನ ತಂಡದ ಆಟಗಾರರು ಮೋಜು ಮಸ್ತಿಯಲ್ಲಿ ತೊಡಗಿದ್ದು, ತಂಡದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ (hardik pandya) ಮತ್ತು ವಿರಾಟ್ ಕೊಹ್ಲಿ (Virat Kohli) ಒಟ್ಟಿಗೆ ನೃತ್ಯ ಮಾಡುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಹಾರ್ದಿಕ್- ವಿರಾಟ್ ಡ್ಯಾನ್ಸ್

ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮೊದಲು, ಹಾರ್ದಿಕ್ ಪಾಂಡ್ಯ ತಮ್ಮ ಇನ್‌ಸ್ಟಾಗ್ರಾಮ್ ಅಕೌಟ್​ನಲ್ಲಿ ವಿರಾಟ್ ಕೊಹ್ಲಿಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದು, ಇದರಲ್ಲಿ ಈ ಇಬ್ಬರು ಶಕ ಬೂಮ್ ಹಾಡಿಗೆ ನೃತ್ಯ ಮಾಡುತ್ತಿದ್ದಾರೆ. ಈ ಹಾಡು ಇನ್‌ಸ್ಟಾಗ್ರಾಮ್ ರೀಲ್‌ಗಳಲ್ಲಿ ಸಾಕಷ್ಟು ಟ್ರೆಂಡಿಂಗ್ ಆಗಿದ್ದು, ವಿಶ್ವದಾದ್ಯಂತ ಸಖತ್ ಹವಾ ಸೃಷ್ಟಿಸಿಎ. ಕನ್ನಡಕ ಮತ್ತು ಚಪ್ಪಲಿಗಳನ್ನು ಧರಿಸಿ, ಇಬ್ಬರೂ ಆಟಗಾರರು ತಮ್ಮ ಮುಖದಲ್ಲಿ ಗಂಭೀರವಾದ ಭಾವದೊಂದಿಗೆ ಈ ಹಾಡಿಗೆ ಹೆಜ್ಜೆ ಹಾಕುತ್ತಿರುವುದು ನಾವು ವಿಡಿಯೋದಲ್ಲಿ ಕಾಣಬಹುದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೊದಲು ಕೊಹ್ಲಿ-ಪಾಂಡ್ಯ ತಮ್ಮನ್ನು ತಾವು ರಿಫ್ರೆಶ್ ಮಾಡಿಕೊಳ್ಳಲು ನೃತ್ಯದ ಮೊರೆ ಹೋಗಿರುವುದನ್ನು ನಾವು ಕಾಣಬಹುದಾಗಿದೆ.

ಅಭ್ಯಾಸದಲ್ಲಿ ಬೆವರು ಹರಿಸಿದ ಕೊಹ್ಲಿ

ಹಾರ್ದಿಕ್ ಜೊತೆಗಿನ ಈ ನೃತ್ಯಕ್ಕೂ ಮೊದಲು ಮೊಹಾಲಿ ತಲುಪಿದ ಕೊಹ್ಲಿ, ಅಭ್ಯಾಸದ ಸಮಯದಲ್ಲಿ ಮೈದಾನದಲ್ಲಿ ಸಾಕಷ್ಟು ಬೆವರು ಹರಿಸಿದರು. ಟೀಂ ಇಂಡಿಯಾ ವೇಗಿಗಳ ಬೌಲಿಂಗ್​ನಲ್ಲಿ ಕಠಿಣ ಅಭ್ಯಾಸ ಮಾಡಿದ ಕೊಹ್ಲಿ, ವೇಗದ ಬೌಲರ್‌ಗಳ ಎಸೆತಕ್ಕೆ ಪುಲ್ ಶಾಟ್‌ ಆಡಲು ಯತ್ನಿಸಿದರು. ಕೊಹ್ಲಿ, ಇದೇ ಮೈದಾನದಲ್ಲಿ 2016 ರ ವಿಶ್ವ T20 ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜೇಯ 82 ರನ್ ಗಳಿಸಿದರು. ಈಗ ಏಷ್ಯಾಕಪ್​ನಲ್ಲಿ ಫಾರ್ಮ್​ಗೆ ಮರಳಿರುವ ವಿರಾಟ್, ಮಂಗಳವಾರ ಮತ್ತೊಂದು ಅದ್ಭುತ ಇನ್ನಿಂಗ್ಸ್ ಮಾಡುವ ನಿರೀಕ್ಷೆಯಿದೆ.

ಮೊಹಾಲಿಯಲ್ಲಿ ಟೀಂ ಇಂಡಿಯಾದ ದಾಖಲೆ ಹೇಗಿದೆ?

ಮೊಹಾಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ತಂಡದ ದಾಖಲೆ ಉತ್ತಮವಾಗಿದೆ. ಭಾರತ ತಂಡ ಈ ಮೈದಾನದಲ್ಲಿ ಇದುವರೆಗೆ ಮೂರು ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದೆ. ಇದರಲ್ಲಿ ಭಾರತ ಮೂರು ಪಂದ್ಯಗಳನ್ನು ಗೆದ್ದಿದೆ. ಈ ನಿಟ್ಟಿನಲ್ಲಿ ಭಾರತಕ್ಕೆ ಈ ಕ್ರೀಡಾಂಗಣ ಅತ್ಯಂತ ಅದೃಷ್ಟ ಎಂದು ಪರಿಗಣಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಈ ದಾಖಲೆಯನ್ನು ಬಲಪಡಿಸಲು ಬಯಸಿದೆ. ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಹಾಗೂ ನಂತರ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

ಆಸೀಸ್ ವಿರುದ್ಧದ ಟಿ20 ಸರಣಿಗೆ ಭಾರತ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್–ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್–ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್‌ಪ್ರೀತ್ ಬುಮ್ರಾ, ಉಮೇಶ್ ಯಾದವ್.

Published On - 9:26 pm, Sun, 18 September 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್