T20 World Cup 2025: ಭಾರತ ಮಹಿಳಾ ತಂಡಕ್ಕೆ ಸಿಕ್ಕ ಅಮೂಲ್ಯ ರತ್ನ ಗೊಂಗಡಿ ತ್ರಿಶಾ
Gongadi Trisha: ಭಾರತ ಮಹಿಳಾ ಕ್ರಿಕೆಟ್ ತಂಡವು ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಎರಡನೇ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಗೆಲುವು ಸಾಧಿಸಿದೆ. ಗೊಂಗಡಿ ತ್ರಿಶಾ ಅವರ ಅದ್ಭುತ ಆಲ್-ರೌಂಡ್ ಪ್ರದರ್ಶನದಿಂದಾಗಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿದೆ. ತ್ರಿಶಾ ಅವರು ಫೈನಲ್‌ನಲ್ಲಿ 44 ರನ್ ಗಳಿಸಿ ಮತ್ತು 3 ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಅಲ್ಲದೆ, ಪಂದ್ಯಾವಳಿಯಲ್ಲಿ ಅತ್ಯಧಿಕ ರನ್ ಮತ್ತು ವಿಕೆಟ್ ಪಡೆದು ಪಂದ್ಯಾವಳಿಯ ಆಟಗಾರ್ತಿ ಪ್ರಶಸ್ತಿಯನ್ನೂ ಗೆದ್ದರು.

ಮಲೇಷ್ಯಾದ ರಾಜಧಾನಿ ಕೌಲಾಲಂಪುರದಲ್ಲಿ ನಡೆದ ಎರಡನೇ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ಮಹಿಳಾ ತಂಡ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿತು. ಇದಕ್ಕೂ ಮೊದಲು 2023ರಲ್ಲಿ ನಡೆದಿದ್ದ ಮೊದಲ ಆವೃತ್ತಿಯನ್ನು ಕೂಡ ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಗೆದ್ದುಕೊಂಡಿತ್ತು. ಇದೀಗ ಸತತ ಎರಡನೇ ಬಾರಿಗೆ ಭಾರತ ಈ ಟ್ರೋಫಿ ಎತ್ತಿಹಿಡಿಯುವ ಮೂಲಕ ಇತಿಹಾಸ ಸೃಷ್ಟಿಸಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗುವಲ್ಲಿ ಯುವ ಆಲ್ ರೌಂಡರ್ ಗೊಂಗಡಿ ತ್ರಿಶಾ ಅವರ ಪಾತ್ರವೇ ಬಹುಮುಖ್ಯವಾಗಿತ್ತು.
ಸತತ 2ನೇ ವಿಶ್ವಕಪ್
ವಾಸ್ತವವಾಗಿ ಕಳೆದ ಬಾರಿ ನಡೆದಿದ್ದ 19 ವರ್ಷದೊಳಗಿನವರ ಟಿ20 ವಿಶ್ವಕಪ್ನಲ್ಲೂ ತ್ರಿಶಾ ಟೀಂ ಇಂಡಿಯಾ ಪರ ಆಡಿದ್ದರು. ಆದರೆ ಆ ವಿಶ್ವಕಪ್‌ನಲ್ಲಿ ಶೆಫಾಲಿ ವರ್ಮಾ ಮತ್ತು ರಿಚಾ ಘೋಷ್ ಮತ್ತು ಟೈಟಾಸ್ ಸಾಧು ಅವರಂತಹ ಸ್ಟಾರ್ ಆಟಗಾರರ ಆರ್ಭಟದಲ್ಲಿ ತ್ರಿಶಾ ಅವರ ಕೊಡುಗೆಗೆ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕಿರಲಿಲ್ಲ. ಆದಾಗ್ಯೂ ಚೊಚ್ಚಲ ಆವೃತ್ತಿಯ ಫೈನಲ್ ಪಂದ್ಯದಲ್ಲೂ ತ್ರಿಶಾ ಟೀಂ ಇಂಡಿಯಾ ಪರ ಗರಿಷ್ಠ 24 ರನ್ ಗಳಿಸಿದ್ದರು. ಇದೀಗ ಎರಡು ವರ್ಷಗಳ ನಂತರವೂ ತಮ್ಮ ಆಟ ಬದಲಿಸದ ತ್ರಿಶಾ, ಎರಡನೇ ಆವೃತ್ತಿಯ ಫೈನಲ್‌ನಲ್ಲಿಯೂ ಗರಿಷ್ಠ 44 ರನ್‌ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದಾರೆ.
ತ್ರಿಶಾ ಆಮೋಘ ಪ್ರದರ್ಶನ
ಈ ಬಾರಿ ತ್ರಿಶಾ ಈ ಫೈನಲ್ ಪಂದ್ಯದಲ್ಲಿ ಮಾತ್ರವಲ್ಲದೆ ಇಡೀ ಪಂದ್ಯಾವಳಿಯಲ್ಲೇ ಸೂಪರ್‌ಸ್ಟಾರ್ ಪ್ರದರ್ಶನ ನೀಡಿದರು. ಫೈನಲ್‌ನಲ್ಲಿ ಬ್ಯಾಟಿಂಗ್ನಲ್ಲಿ 44 ರನ್‌ಗಳ ಇನ್ನಿಂಗ್ಸ್ ಆಡುವುದಕ್ಕೂ ಮೊದಲು ಬೌಲಿಂಗ್ನಲ್ಲಿ ಮಿಂಚಿದ ತ್ರಿಶಾ ಪ್ರಮುಖ 3 ವಿಕೆಟ್‌ಗಳನ್ನು ಪಡೆದರು. ಈ ಆಲ್‌ರೌಂಡರ್ ಪ್ರದರ್ಶನಕ್ಕಾಗಿ ತ್ರಿಶಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು.
7⃣ Matches3⃣0⃣9⃣ Runs7⃣ Wickets
A brilliant all-round display from G Trisha as she wins the Player of The Tournament award 👏 👏#TeamIndia | #U19WorldCup pic.twitter.com/DVTjH9rc3t
— BCCI Women (@BCCIWomen) February 2, 2025
ಪಂದ್ಯಾವಳಿಯ ಆಟಗಾರ್ತಿ
ಇದಲ್ಲದೆ ಇಡೀ ಪಂದ್ಯಾವಳಿಯಲ್ಲಿ ರನ್‌ಗಳ ಶಿಖರ ಕಟ್ಟಿದ ತ್ರಿಶಾ, ಟಿ20 ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ಇತಿಹಾಸ ಸೃಷ್ಟಿಸಿದರು. ಇದರೊಂದಿಗೆ ಇಡೀ ಟೂರ್ನಿಯಲ್ಲಿ ಅತ್ಯಧಿಕ 309 ರನ್ ಕಲೆಹಾಕುವ ಮೂಲಕ ಹೊಸ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು. ಬ್ಯಾಟಿಂಗ್ನಲ್ಲಿ ಮಾತ್ರವಲ್ಲದೆ ಬೌಲಿಂಗ್ನಲ್ಲೂ ಮ್ಯಾಜಿಕ್ ಮಾಡಿದ ತ್ರಿಶಾ ಇಡೀ ಪಂದ್ಯಾವಳಿಯಲ್ಲಿ 7 ವಿಕೆಟ್‌ಗಳನ್ನು ಪಡೆದರು. ಹೀಗಾಗಿ ತ್ರಿಶಾಗೆ ಪಂದ್ಯಾವಳಿಯ ಆಟಗಾರ್ತಿ ಪ್ರಶಸ್ತಿಯೂ ಲಭಿಸಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:21 pm, Sun, 2 February 25