AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ವಿಶ್ವ XI: 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ಬಿಸಿಸಿಐ ಎದುರು ಕೇಂದ್ರದ ವಿಶೇಷ ಪ್ರಸ್ತಾವನೆ

Azadi Ka Amrit Mahotsav: ಕೇಂದ್ರ ಸಂಸ್ಕೃತಿ ಸಚಿವಾಲಯವು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಪ್ರಸ್ತಾವನೆಯನ್ನು ಕಳುಹಿಸಿದ್ದು, ಇದರಲ್ಲಿ ಟೀಮ್ ಇಂಡಿಯಾ ಮತ್ತು ವಿಶ್ವದ ಅತ್ಯುತ್ತಮ ಕ್ರಿಕೆಟಿಗರ ತಂಡ ಪಂದ್ಯವನ್ನಾಡಲಿದೆ.

ಭಾರತ vs ವಿಶ್ವ XI: 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ಬಿಸಿಸಿಐ ಎದುರು ಕೇಂದ್ರದ ವಿಶೇಷ ಪ್ರಸ್ತಾವನೆ
Team India
TV9 Web
| Updated By: ಪೃಥ್ವಿಶಂಕರ|

Updated on: Jul 11, 2022 | 4:23 PM

Share

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ (Team India)ದ ಅಮೋಘ ಪ್ರದರ್ಶನ ಮುಂದುವರೆದಿದೆ. ಅದರಲ್ಲೂ ಕಡಿಮೆ ಫಾರ್ಮ್ಯಾಟ್‌ಗಳಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಭಾರತ ತಂಡದ ಪ್ರದರ್ಶನ ಕಾಣುತ್ತಿದೆ. ಈ ಕಾರಣಕ್ಕಾಗಿಯೇ ಎಲ್ಲರೂ ವಿಶ್ವಕಪ್ (World Cup) ಬೇಗ ಬರಲಿ, ಟೀಂ ಇಂಡಿಯಾ ತಮ್ಮ ಶಕ್ತಿ ಪ್ರದರ್ಶನ ಮಾಡಲಿ ಎಂದು ಕಾಯುತ್ತಿದ್ದಾರೆ ಆದರೆ ಎಲ್ಲವೂ ಸರಿಯಾಗಿ ನಡೆದರೆ ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ವಿಶ್ವದ ದಿಗ್ಗಜ ಆಟಗಾರರ ಮಿಶ್ರ ತಂಡದೊಂದಿಗೆ ಏಕಾಂಗಿಯಾಗಿ ಪೈಪೋಟಿ ನಡೆಸಬಹುದು ಎಂಬ ವರದಿಗಳು ಕೇಳಿಬರುತ್ತಿವೆ. ಭಾರತ ಸರ್ಕಾರವು (The Government of India) ಅಂತಹ ಪ್ರಸ್ತಾಪವನ್ನು ಮಾಡಿದ್ದು, ಇದರಲ್ಲಿ ಭಾರತ ಮತ್ತು ವಿಶ್ವ XI ನಡುವೆ ಪಂದ್ಯ ನಡೆಯಲಿದೆ. ಏಕೆಂದರೆ ಮುಂದಿನ ತಿಂಗಳು ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಳ್ಳಲಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲು ಸರ್ಕಾರ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲು ಬಯಸಿದೆ.

ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಭಾರತ ಸರ್ಕಾರವು ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ‘ಆಜಾದಿ ಕೆ ಅಮೃತ್ ಮಹೋತ್ಸವ’ವನ್ನು ಆಚರಿಸಲು ಯೋಜಿಸಿದೆ. ದೇಶದಲ್ಲಿ ಕ್ರಿಕೆಟ್‌ನ ಜನಪ್ರಿಯತೆ ಮತ್ತು ಅದರ ಕೊಡುಗೆಯನ್ನು ಪರಿಗಣಿಸಿ, ಸರ್ಕಾರವೂ ಅದನ್ನು ಸೇರಿಸಲು ಪ್ರಯತ್ನಿಸುತ್ತಿದೆ. ಅದಕ್ಕಾಗಿಯೇ ಕೇಂದ್ರ ಸಂಸ್ಕೃತಿ ಸಚಿವಾಲಯವು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಪ್ರಸ್ತಾವನೆಯನ್ನು ಕಳುಹಿಸಿದ್ದು, ಇದರಲ್ಲಿ ಟೀಮ್ ಇಂಡಿಯಾ ಮತ್ತು ವಿಶ್ವದ ಅತ್ಯುತ್ತಮ ಕ್ರಿಕೆಟಿಗರ ತಂಡ ಪಂದ್ಯವನ್ನಾಡಲಿದೆ. ಆಗಸ್ಟ್ 22 ರಂದು ಪಂದ್ಯವನ್ನು ನಡೆಸಲು ಉದ್ದೇಶಿಸಲಾಗಿದ್ದು, ಈ ಪಂದ್ಯ ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ಬಿಸಿಸಿಐ ವಿದೇಶಿ ಮಂಡಳಿಯೊಂದಿಗೆ ಮಾತುಕತೆ ನಡೆಸಲಿದೆ

ಇದನ್ನೂ ಓದಿ
Image
ಚಿನ್ನ ಸೇರಿದಂತೆ 3 ಪದಕ! ಫಿನ್​ಲ್ಯಾಂಡ್​ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ 94 ವರ್ಷದ ಅಜ್ಜಿ
Image
IND vs ENG: ಸೂರ್ಯ ಮುಳುಗದ ನಾಡಿನಲ್ಲಿ ದಾಖಲೆಗಳ ಮಳೆ ಸುರಿಸಿದ ಸೂರ್ಯ..!
Image
Wimbledon 2022: ಸತತ ನಾಲ್ಕನೇ ಬಾರಿಗೆ ಚಾಂಪಿಯನ್; 21 ನೇ ಗ್ರ್ಯಾಂಡ್ ಸ್ಲಾಮ್ ಗೆದ್ದ ನೊವಾಕ್ ಜೊಕೊವಿಕ್..!

ಪ್ರಸ್ತುತ ಮಂಡಳಿಯು ಈ ಪ್ರಸ್ತಾಪವನ್ನು ಚರ್ಚಿಸುತ್ತಿದೆ ಎಂದು ಬಿಸಿಸಿಐಗೆ ಸಂಬಂಧಿಸಿದ ಮೂಲವೊಂದು ಸಂಸ್ಥೆ ಪಿಟಿಐಗೆ ತಿಳಿಸಿದೆ. ವಿದೇಶಿ ಆಟಗಾರರ ಲಭ್ಯತೆಯೇ ದೊಡ್ಡ ಸಮಸ್ಯೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳು, “ಆಗಸ್ಟ್ 22 ರಂದು ಭಾರತ ಇಲೆವೆನ್ ಮತ್ತು ವಿಶ್ವ ಇಲೆವೆನ್ ನಡುವೆ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲು ನಾವು ಸರ್ಕಾರದಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದೇವೆ. ವಿಶ್ವ ತಂಡಕ್ಕೆ, ನಮಗೆ 13-14 ಸಾಗರೋತ್ತರ ಆಟಗಾರರ ಅಗತ್ಯವಿದೆ. ಹೀಗಾಗಿ ನಾವು ಅವರ ಲಭ್ಯತೆಯ ಬಗ್ಗೆ ತಿಳಿದುಕೊಳ್ಳಬೇಕು.

ಜುಲೈ 22 ರಂದು ನಡೆಯಲಿರುವ ಐಸಿಸಿ ಸಭೆಗಾಗಿ ಭಾರತೀಯ ಮಂಡಳಿಯ ಅಧಿಕಾರಿಗಳು ಈ ತಿಂಗಳು ಇಂಗ್ಲೆಂಡ್‌ನಲ್ಲಿ ಇರುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಈ ಪಂದ್ಯಕ್ಕೆ ತಮ್ಮ ಕೆಲವು ಆಟಗಾರರನ್ನು ಕಳುಹಿಸಲು ಅವರು ವಿದೇಶಿ ಮಂಡಳಿಯ ಅಧಿಕಾರಿಗಳಿಗೆ ವಿನಂತಿಸಬಹುದು ಎಂದು ವರದಿಯಾಗಿದೆ.

ಆಟಗಾರರು ಸಿಗುವುದು ಕಷ್ಟ

ವಾಸ್ತವವಾಗಿ, ಆಗಸ್ಟ್ 22 ರ ಸುಮಾರಿಗೆ ವಿದೇಶಿ ಆಟಗಾರರು ವಿವಿಧ ಪಂದ್ಯಾವಳಿಗಳು ಮತ್ತು ಸರಣಿಗಳಲ್ಲಿ ನಿರತರಾಗಿರುತ್ತಾರೆ. ಈ ಸಮಯದಲ್ಲಿ, ಇಂಗ್ಲಿಷ್ ಕೌಂಟಿ ವಿರುದ್ಧದ ಪಂದ್ಯಗಳು ಸಹ ನಡೆಯಲಿವೆ, ಕೆರಿಬಿಯನ್ ಪ್ರೀಮಿಯರ್ ಲೀಗ್ ವಿರುದ್ಧದ ಪಂದ್ಯಗಳು ಸಹ ಪ್ರಾರಂಭವಾಗುತ್ತವೆ. ಭಾರತೀಯ ಆಟಗಾರರ ಮಟ್ಟಿಗೆ ಹೇಳುವುದಾದರೆ, ಅದರಲ್ಲಿ ಹೆಚ್ಚಿನ ಸಮಸ್ಯೆ ಇರುವುದಿಲ್ಲ. ಟೀಂ ಇಂಡಿಯಾ ಮುಂದಿನ ತಿಂಗಳು ಜಿಂಬಾಬ್ವೆ ಪ್ರವಾಸದಲ್ಲಿದ್ದರೂ, ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಅವರಂತಹ ದೊಡ್ಡ ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ. ಭಾರತ ತಂಡವು ಈ ಪ್ರವಾಸದಿಂದ ಆಗಸ್ಟ್ 22 ರಂದು ಮಾತ್ರ ಮರಳಲಿದೆ, ನಂತರ ಅದು ಆಗಸ್ಟ್ 27 ರಿಂದ ನಡೆಯಲಿರುವ ಏಷ್ಯಾ ಕಪ್‌ಗೆ ಹೊರಡಲಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ