AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

391 ರನ್ ಗುರಿ, 317 ರನ್​ಗಳ ಜಯ! ಗ್ರೀನ್‌ಫೀಲ್ಡ್ ಮೈದಾನದಲ್ಲಿ ಭಾರತದ ದಾಖಲೆ

ಸೆಪ್ಟೆಂಬರ್ 27ರಂದು ಆರಂಭವಾಗುವ ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿಯ ಮೊದಲ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಜನವರಿ 2023ರಲ್ಲಿ ಇದೇ ಮೈದಾನದಲ್ಲಿ ಭಾರತವು ಶ್ರೀಲಂಕಾ ವಿರುದ್ಧ 317 ರನ್‌ಗಳ ಐತಿಹಾಸಿಕ ಗೆಲುವು ಸಾಧಿಸಿತ್ತು. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ (166*) ಮತ್ತು ಶುಭ್​ಮನ್ ಗಿಲ್ (116) ಶತಕ ಸಿಡಿಸಿದ್ದರು, ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದು ಮಿಂಚಿದ್ದರು.

391 ರನ್ ಗುರಿ, 317 ರನ್​ಗಳ ಜಯ! ಗ್ರೀನ್‌ಫೀಲ್ಡ್ ಮೈದಾನದಲ್ಲಿ ಭಾರತದ ದಾಖಲೆ
ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್Image Credit source: PTI
ಪೃಥ್ವಿಶಂಕರ
|

Updated on:Sep 26, 2026 | 9:35 PM

Share

ವೆಸ್ಟ್ ಇಂಡೀಸ್ ತಂಡದ ಭಾರತ ಪ್ರವಾಸ ಸೆಪ್ಟೆಂಬರ್ 27 ರಂದು ಆರಂಭವಾಗಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯ ಭಾನುವಾರ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಇದುವರೆಗೆ ಕೇವಲ ಎರಡು ಏಕದಿನ ಪಂದ್ಯಗಳನ್ನು ಮಾತ್ರ ಆಡಲಾಗಿದೆ. ಕೊನೆಯ ಏಕದಿನ ಪಂದ್ಯವನ್ನು ಜನವರಿ 2023 ರಲ್ಲಿ ಈ ಮೈದಾನದಲ್ಲಿ ಆಡಲಾಗಿತ್ತು. ಆ ಪಂದ್ಯದಲ್ಲಿ ಶ್ರೀಲಂಕಾವನ್ನು ಎದುರಿಸಿದ್ದ ಟೀಂ ಇಂಡಿಯಾ 390 ರನ್ ಕಲೆಹಾಕಿ 317 ರನ್​ಗಳ ಗೆಲುವು ಸಾಧಿಸಿತ್ತು.

ಅಬ್ಬರಿಸಿದ್ದ ಕೊಹ್ಲಿ, ಗಿಲ್

ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಆ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು. ತಂಡದ ಪರ ರೋಹಿತ್ ಶರ್ಮಾ 49 ಎಸೆತಗಳಲ್ಲಿ 42 ರನ್ ಗಳಿಸಿ ಔಟಾದರೆ, ಶುಭ್​ಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಅಮೋಘ ಜೊತೆಯಾಟ ಕಟ್ಟಿದರು. ಗಿಲ್ 97 ಎಸೆತಗಳಲ್ಲಿ 116 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 110 ಎಸೆತಗಳಲ್ಲಿ 166 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದರು. ಇದು ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಅವರ ಎರಡನೇ ಅತ್ಯಧಿಕ ವೈಯಕ್ತಿಕ ಸ್ಕೋರ್ ಆಗಿದೆ. ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ ವಿರಾಟ್ ಕೇವಲ ಬೌಂಡರಿಗಳಿಂದಲೇ 100 ರನ್ ಕಲೆಹಾಕಿದ್ದರು. ಅಂದರೆ ಕೊಹ್ಲಿ ಆ ಪಂದ್ಯದಲ್ಲಿ 13 ಬೌಂಡರಿಗಳು ಮತ್ತು 8 ಸಿಕ್ಸರ್‌ಗಳನ್ನು ಬಾರಿಸಿದ್ದರು.

32 ಬೌಂಡರಿಗಳು, 14 ಸಿಕ್ಸರ್‌ಗಳು

ಶ್ರೀಲಂಕಾ ವಿರುದ್ಧ ಭಾರತ ತಂಡ 390 ರನ್ ಗಳಿಸಿತು. ಈ ಇನ್ನಿಂಗ್ಸ್‌ನಲ್ಲಿ, ಭಾರತೀಯ ಬ್ಯಾಟ್ಸ್‌ಮನ್‌ಗಳು ಒಟ್ಟಾಗಿ 32 ಬೌಂಡರಿಗಳು ಮತ್ತು 14 ಅಗಾಧ ಸಿಕ್ಸರ್‌ಗಳನ್ನು ಬಾರಿಸಿದ್ದರು. ವಿರಾಟ್ ಕೊಹ್ಲಿ ಒಬ್ಬರೇ ಎಂಟು ಸಿಕ್ಸರ್‌ಗಳನ್ನು ಸಿಡಿಸಿದ್ದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಬಂದ ಶ್ರೇಯಸ್ ಅಯ್ಯರ್ 38 ರನ್‌ಗಳ ಕೊಡುಗೆ ನೀಡಿದ್ದರು.

10 ಶತಕ, 2000 ಬೌಂಡರಿ, ಅತ್ಯಧಿಕ ವಿಕೆಟ್..! 3 ದಾಖಲೆಗಳ ಮೇಲೆ ದಿಗ್ಗಜರ ಕಣ್ಣು

ಶ್ರೀಲಂಕಾ 73 ರನ್‌ಗಳಿಗೆ ಆಲೌಟ್

391 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡವನ್ನು ವೇಗಿ ಮೊಹಮ್ಮದ್ ಸಿರಾಜ್ ಇನ್ನಿಲ್ಲದಂತೆ ಕಾಡಿದರು. ಆ ಪಂದ್ಯದಲ್ಲಿ ಸಿರಾಜ್ 10 ಓವರ್‌ಗಳನ್ನು ಬೌಲ್ ಮಾಡಿ ಕೇವಲ 32 ರನ್‌ ನೀಡಿ 4 ವಿಕೆಟ್‌ಗಳನ್ನು ಕಬಳಿಸಿದ್ದರು. ಉಳಿದಂತೆ ಮೊಹಮ್ಮದ್ ಶಮಿ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್‌ಗಳನ್ನು ಪಡೆದರು. ಇದರ ಪರಿಣಾಮವಾಗಿ ಶ್ರೀಲಂಕಾ ಕೇವಲ 73 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ ಭಾರತ, ಶ್ರೀಲಂಕಾವನ್ನು 317 ರನ್‌ಗಳಿಂದ ಸೋಲಿಸಿತು, ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ರನ್‌ಗಳಿಂದ ಎರಡನೇ ಅತ್ಯಧಿಕ ಗೆಲುವಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 pm, Sat, 26 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ